ಪ್ರಧಾನ ಮಂತ್ರಿಯವರ ಕಛೇರಿ

ಭಾರತ ಮತ್ತು ಸೌದಿ ಅರೇಬಿಯಾ ನಡುವಿನ ಕಾರ್ಯತಂತ್ರದ ಸಹಭಾಗಿತ್ವದ ಭವಿಷ್ಯದ ಕುರಿತು  ಯುವರಾಜ ಮೊಹಮ್ಮದ್ ಬಿನ್ ಸಲ್ಮಾನ್ ಬಿನ್ ಅಬ್ದುಲಜೀಜ್ ಅಲ್ ಸೌದ್ ಅವರೊಂದಿಗೆ ಪ್ರಧಾನಮಂತ್ರಿಯವರು ಮಾತನಾಡಿದರು


ಉಭಯ ನಾಯಕರು ಪಶ್ಚಿಮ ಏಷ್ಯಾದ ಪರಿಸ್ಥಿತಿಯ ಬಗ್ಗೆ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು ಮತ್ತು ಭಯೋತ್ಪಾದನೆ, ಹಿಂಸಾಚಾರ ಮತ್ತು ನಾಗರಿಕರ ಜೀವಹಾನಿಯ ಬಗ್ಗೆ ಕಳವಳ ವ್ಯಕ್ತಪಡಿಸಿದರು.

Posted On: 26 DEC 2023 7:48PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾರತ ಮತ್ತು ಸೌದಿ ಅರೇಬಿಯಾ ನಡುವಿನ ಕಾರ್ಯತಂತ್ರದ ಸಹಭಾಗಿತ್ವದ ಭವಿಷ್ಯದ ಕುರಿತು  ಯುವರಾಜ ಮೊಹಮ್ಮದ್ ಬಿನ್ ಸಲ್ಮಾನ್ ಬಿನ್ ಅಬ್ದುಲಜೀಜ್ ಅಲ್ ಸೌದ್ ಅವರೊಂದಿಗೆ ಮಾತನಾಡಿದರು.

ಪ್ರಧಾನಮಂತ್ರಿಯವರು ತಮ್ಮ  ಎಕ್ಸ್   ಜಾಲತಾಣದಲ್ಲಿ  ಹೀಗೆ  ಬರೆದಿದ್ದಾರೆ:

“ಭಾರತ ಮತ್ತು ಸೌದಿ ಅರೇಬಿಯಾ ನಡುವಿನ ಕಾರ್ಯತಂತ್ರದ ಸಹಭಾಗಿತ್ವದ ಭವಿಷ್ಯದ ಕುರಿತು ನನ್ನ ಸಹೋದರ  ಘನತೆವೆತ್ತ ಯುವರಾಜ ಮೊಹಮ್ಮದ್ ಬಿನ್ ಸಲ್ಮಾನ್ ಬಿನ್ ಅಬ್ದುಲಜೀಜ್ ಅಲ್ ಸೌದ್ ಅವರೊಂದಿಗೆ ಉತ್ತಮ ಮಾತುಕತೆಯನ್ನು ನಡೆಸಿದೆನು. ನಾವು ಪಶ್ಚಿಮ ಏಷ್ಯಾದ ಪರಿಸ್ಥಿತಿಯ ಬಗ್ಗೆ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡಿದ್ದೇವೆ ಮತ್ತು ಭಯೋತ್ಪಾದನೆ, ಹಿಂಸಾಚಾರ ಮತ್ತು ನಾಗರಿಕ ಜೀವಗಳ ನಷ್ಟದ ಬಗ್ಗೆ ಕಳವಳಗಳನ್ನು ವ್ಯಕ್ತಪಡಿಸಿರುವೆವು. ಆ ಪ್ರದೇಶದಲ್ಲಿ ಶಾಂತಿ, ಭದ್ರತೆ ಮತ್ತು ಸ್ಥಿರತೆಗಾಗಿ ಒಟ್ಟಾಗಿ ಕೆಲಸ ಮಾಡಲು ಒಪ್ಪಿಕೊಂಡಿರುವೆವು.”

***

 



(Release ID: 1991146) Visitor Counter : 43