ಪ್ರಧಾನ ಮಂತ್ರಿಯವರ ಕಛೇರಿ
ಲಕ್ಷದ್ವೀಪದ ಪ್ರಗತಿಗೆ ಸಂಬಂಧಿಸಿದ ಅಂಶಗಳ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ ಪ್ರಧಾನಮಂತ್ರಿ
Posted On:
02 JAN 2024 9:58PM by PIB Bengaluru
ಇಂದು ನಡೆದ ಲಕ್ಷದ್ವೀಪದ ಪ್ರಗತಿಗೆ ಸಂಬಂಧಿಸಿದ ಅಂಶಗಳ ಪರಿಶೀಲನಾ ಸಭೆಯ ಅಧ್ಯಕ್ಷತೆಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಹಿಸಿದರು. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಲಕ್ಷದ್ವೀಪಕ್ಕೆ ಆಗಮಿಸಿದ್ದು, ನಾಳೆ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಲೋಕಾರ್ಪಣೆ ಮಾಡಲಿದ್ದಾರೆ.
ಪ್ರಧಾನಮಂತ್ರಿಯವರು ತಮ್ಮ ಎಕ್ಸ್ ಖಾತೆಯಲ್ಲಿ ಈ ರೀತಿ ಸಂದೇಶ ಹಂಚಿಕೊಂಡಿದ್ದಾರೆ:
"ಲಕ್ಷದ್ವೀಪದ ಪ್ರಗತಿಗೆ ಸಂಬಂಧಿಸಿದ ಅಂಶಗಳ ಕುರಿತು ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದೆ. ಲಕ್ಷದ್ವೀಪದ ಜನರಿಗೆ ಉತ್ತಮ ಗುಣಮಟ್ಟದ ಜೀವನವನ್ನು ಖಚಿತಪಡಿಸಿಕೊಳ್ಳಲು ಮೂಲಸೌಕರ್ಯಗಳನ್ನು ಹೆಚ್ಚಿಸುವುದು, ಸ್ಥಳೀಯ ಸಂಸ್ಕೃತಿಯನ್ನು ರಕ್ಷಿಸುವುದು ಮತ್ತು ಜನರಿಗೆ ಸಮೃದ್ಧಿಯ ಮಾರ್ಗಗಳನ್ನು ಖಾತರಿಪಡಿಸುವುದರಲ್ಲಿ ನಮ್ಮ ಸರ್ಕಾರವು ಬದ್ಧವಾಗಿದೆ."
***
(Release ID: 1992701)
Visitor Counter : 104
Read this release in:
English
,
Urdu
,
Marathi
,
Hindi
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam
,
Malayalam