ಪ್ರಧಾನ ಮಂತ್ರಿಯವರ ಕಛೇರಿ
ಮುಂಬೈಯಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆಯಲ್ಲಿ ಪಾಲ್ಗೊಂಡ ಪ್ರಧಾನಮಂತ್ರಿಯವರ ಪ್ರಧಾನ ಕಾರ್ಯದರ್ಶಿ
Posted On:
04 JAN 2024 6:50PM by PIB Bengaluru
ಪ್ರಧಾನಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಡಾ. ಪಿ.ಕೆ. ಮಿಶ್ರಾ ಅವರು ಇಂದು ಮುಂಬೈಯ ಗೋರೆಗಾಂವ್ ಪೂರ್ವದಲ್ಲಿ ನಡೆದ ವಿಕಸಿತ ಭಾರತ ಸಂಕಲ್ಪ ಯಾತ್ರೆಯಲ್ಲಿ ಭಾಗವಹಿಸಿದ್ದರು.
ಈ ಕಾರ್ಯಕ್ರಮದಲ್ಲಿ 1500 ಕ್ಕೂ ಹೆಚ್ಚು ಜನರು ಉತ್ಸಾಹದಿಂದ ಪಾಲ್ಗೊಂಡಿದ್ದರು. ಭಾಗವಹಿಸಿದ ಎಲ್ಲರೊಂದಿಗೆ, ಪ್ರಧಾನ ಕಾರ್ಯದರ್ಶಿ ಅವರು ವಿಕ್ಷಿತ್ ಭಾರತಕ್ಕಾಗಿ ಪ್ರತಿಜ್ಞೆ ಕೈಗೊಂಡರು. ಮೇರಿ ಕಹಾನಿ ಮೇರಿ ಜುಬಾನಿ ಉಪಕ್ರಮದ ಅಡಿಯಲ್ಲಿ, ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳು ತಮ್ಮ ಅನುಭವಗಳನ್ನು ಮತ್ತು ಯಶೋಗಾಥೆಗಳನ್ನು ಹಂಚಿಕೊಂಡರು.
ಈ ಸಂದರ್ಭದಲ್ಲಿ, ಪ್ರಧಾನ ಮಂತ್ರಿಯವರ ಮುದ್ರಿತ ವೀಡಿಯೊ ಸಂದೇಶ ಮತ್ತು ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಉದ್ದೇಶಗಳ ಕುರಿತಾದ ಚಲನಚಿತ್ರವನ್ನು ಸಹ ಪ್ರದರ್ಶಿಸಲಾಯಿತು.
ಪ್ರಧಾನ ಕಾರ್ಯದರ್ಶಿಯವರು ಮುದ್ರಾ ಯೋಜನೆ, ಪಿಎಂ ಸ್ವನಿಧಿ ಮುಂತಾದ ಯೋಜನೆಗಳ ಫಲಾನುಭವಿಗಳಿಗೆ ಪ್ರಮಾಣಪತ್ರಗಳು ಮತ್ತು ಸೌಲಭ್ಯಗಳನ್ನು ವಿತರಿಸಿದರು.
ಸರ್ಕಾರದ ಪ್ರಮುಖ ಯೋಜನೆಗಳ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಇಲ್ಲಿಯವರೆಗೆ ಈ ಯೋಜನೆಗಳ ಪ್ರಯೋಜನಗಳನ್ನು ಪಡೆಯಲು ಸಾಧ್ಯವಾಗದ ಅರ್ಹ ಎಲ್ಲಾ ಫಲಾನುಭವಿಗಳನ್ನು ತಲುಪುವ ಉದ್ದೇಶದಿಂದ ಸ್ಥಾಪಿಸಲಾದ ಸರ್ಕಾರಿ ಯೋಜನೆಗಳ ಮಳಿಗೆಗಳಿಗೆ ಪ್ರಧಾನ ಕಾರ್ಯದರ್ಶಿಗಳು ಭೇಟಿ ನೀಡಿದರು.
ಪ್ರಧಾನ ಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಅವರು ಭಾಗವಹಿಸಿದವರನ್ನುದ್ದೇಶಿಸಿ ಮಾತನಾಡಿದರು. ಪ್ರಧಾನಮಂತ್ರಿಯವರ ವಿಕಸಿತ ಭಾರತದ ದೃಷ್ಟಿಕೋನದ ಬಗ್ಗೆ ಮಾತನಾಡಿದ ಅವರು, ಯಾತ್ರೆಯಲ್ಲಿ ಪೂರ್ಣ ಹುರುಪಿನಿಂದ ಭಾಗವಹಿಸುವಂತೆ ನಾಗರಿಕರಲ್ಲಿ ಮನವಿ ಮಾಡಿದರು. ಸರ್ಕಾರದ ಯೋಜನೆಗಳ ಅನುಷ್ಠಾನದಲ್ಲಿ ಪರಿಪೂರ್ಣತೆ ಮತ್ತು ಕಟ್ಟ ಕಡೆಯ ಹಂತದವರೆಗೂ ಅವುಗಳನ್ನು ತಲುಪಿಸುವಿಕೆಯ ಬಗ್ಗೆಯೂ ಅವರು ಮಾತನಾಡಿದರು.
ವಿಕಸಿತ ಭಾರತ ಸಂಕಲ್ಪ ಯಾತ್ರೆಯನ್ನು ಮುಂಬೈ ನಗರದಲ್ಲಿ ಯಶಸ್ವಿಯಾಗಿ ಆಯೋಜಿಸಿದ್ದಕ್ಕಾಗಿ ಪ್ರಧಾನ ಕಾರ್ಯದರ್ಶಿ ಅವರು ಬಿಎಂಸಿ ಆಡಳಿತವನ್ನು ಶ್ಲಾಘಿಸಿದರು.
***
(Release ID: 1993304)
Visitor Counter : 98
Read this release in:
English
,
Urdu
,
Hindi
,
Marathi
,
Manipuri
,
Assamese
,
Bengali
,
Punjabi
,
Gujarati
,
Odia
,
Tamil
,
Telugu
,
Malayalam