ಸಂಪುಟ
ಅಯೋಧ್ಯೆ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಾಗಿ ಪರಿವರ್ತಿಸಲು ಸಂಪುಟ ಅನುಮೋದನೆ
"ಮಹರ್ಷಿ ವಾಲ್ಮೀಕಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ಅಯೋಧ್ಯಧಾಮ" ಎಂದು ನಾಮಕರಣ
Posted On:
05 JAN 2024 1:17PM by PIB Bengaluru
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ಅಯೋಧ್ಯೆ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಾಗಿ ಘೋಷಿಸಲು ಹಾಗೂ ಅದಕ್ಕೆ "ಮಹರ್ಷಿ ವಾಲ್ಮೀಕಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ಅಯೋಧ್ಯಧಾಮ" ಎಂದು ಹೆಸರಿಡುವ ಪ್ರಸ್ತಾವನೆಗೆ ಅನುಮೋದನೆ ನೀಡಿದೆ.
ಅಯೋಧ್ಯೆಯ ಆರ್ಥಿಕ ಸಾಮರ್ಥ್ಯ ಮತ್ತು ಜಾಗತಿಕ ಯಾತ್ರಾ ಸ್ಥಳವಾಗಿ ಅದರ ಮಹತ್ವವನ್ನು ಅರಿತುಕೊಳ್ಳಲು ಅಯೋಧ್ಯೆ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ಸ್ಥಾನಮಾನಕ್ಕೆ ಏರಿಸುವುದು ಉನ್ನತ ಕೆಲಸವಾಗಿದ್ದು, ವಿದೇಶಿ ಯಾತ್ರಿಕರು ಮತ್ತು ಪ್ರವಾಸಿಗರಿಗೆ ಅಯೋಧ್ಯೆ ಬಾಗಿಲು ತೆರೆಯುತ್ತದೆ.
ವಿಮಾನ ನಿಲ್ದಾಣದ ಹೆಸರು, "ಮಹರ್ಷಿ ವಾಲ್ಮೀಕಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ಅಯೋಧ್ಯಧಾಮ," ಎಂದು ಇಡಲಾಗುತ್ತಿದ್ದು, ಮಹರ್ಷಿ ವಾಲ್ಮೀಕಿಗೆ ಗೌರವ ಸಲ್ಲಿಸಿದಂತೆ ಆಗುತ್ತದೆ. ಮಹಾಕಾವ್ಯ ರಾಮಾಯಣವನ್ನು ರಚಿಸಿದ ಋಷಿಯ ಹೆಸರಿನಲ್ಲಿ ವಿಮಾನ ನಿಲ್ದಾಣದ ಗುರುತಿಗೆ ಸಾಂಸ್ಕೃತಿಕ ಸ್ಪರ್ಶವನ್ನು ನೀಡಿದಂತೆ ಆಗುತ್ತದೆ.
ಅಯೋಧ್ಯೆಯು ತನ್ನ ಆಳವಾದ ಸಾಂಸ್ಕೃತಿಕ ಬೇರುಗಳನ್ನು ಹೊಂದಿರುವ ಪ್ರಮುಖ ಆರ್ಥಿಕ ಕೇಂದ್ರ ಮತ್ತು ಯಾತ್ರಾ ಸ್ಥಳವಾಗುವ ಆಯಕಟ್ಟಿನ ಸ್ಥಾನದಲ್ಲಿದೆ. ಅಂತಾರಾಷ್ಟ್ರೀಯ ಯಾತ್ರಿಕರು ಮತ್ತು ವ್ಯವಹಾರ, ಹೂಡಿಕೆಗಳನ್ನು ಆಕರ್ಷಿಸುವ ಸಾಮರ್ಥ್ಯವುಳ್ಳ ಈ ವಿಮಾನ ನಿಲ್ದಾಣದ ಸಾಮರ್ಥ್ಯವು ನಗರದ ಐತಿಹಾಸಿಕ ಪ್ರಾಮುಖ್ಯತೆಯನ್ನು ಕೂಡ ಒಳಗೊಂಡಿದೆ.
****
(Release ID: 1993423)
Visitor Counter : 183
Read this release in:
English
,
Urdu
,
Marathi
,
Hindi
,
Nepali
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam