ವಾರ್ತಾ ಮತ್ತು ಪ್ರಸಾರ ಸಚಿವಾಲಯ
ಬೆಂಗಳೂರು ನಗರ ಜಿಲ್ಲೆ: ವಿಕಸಿತ ಭಾರತ ಸಂಕಲ್ಪ ಯಾತ್ರೆ
ಪ್ರಕಟಣಾ ದಿನಾಂಕ:
07 JAN 2024 7:01PM by PIB Bengaluru
ಕೇಂದ್ರ ಸರ್ಕಾರದ ಜನಪರ ಯೋಜನೆಗಳನ್ನು ಸಾಮಾನ್ಯ ಜನರಿಗೆ ತಲುಪಿಸುವ ನಿಟ್ಟಿನಲ್ಲಿ ರೂಪಿಸಿರುವ ವಿಕಸಿತ ಭಾರತ ಸಂಕಲ್ಪ ಯಾತ್ರೆಯು ಬೆಂಗಳೂರು ನಗರದ ಮಲ್ಲೇಶ್ವರಂ ಬಳಿ ರಥ ಯಾತ್ರೆ ಆಗಮಿಸಿ ಜನರಿಗೆ ಕೇಂದ್ರ ಸರ್ಕಾರ ಯೋಜನೆಗಳ ಕುರಿತು ಪ್ರಚಾರ ಕೈಗೊಳ್ಳಲಾಯಿತು.
ಸರ್ಕಾರದ ಯೋಜನೆಗಳು ತಲುಪದೇ ಇದ್ದವರಿಗೆ ತಲುಪಿಸುವುದು, ಅವಶ್ಯಕತೆ ಇದ್ದವರಿಗೆ ಸರ್ಕಾರದ ಸೇವೆಗಳನ್ನ ಅವರ ಮನೆ ಬಾಗಿಲಿಗೆ ಒದಗಿಸುವುದು, ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಮಾಹಿತಿ ಕೊರತೆಯಿಂದ ಆಗುವ ತೊಡಕುಗಳನ್ನು ನಿವಾರಿಸುವುದು ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಮುಖ್ಯ ಉದ್ದೇಶವಾಗಿದೆ .
ಕೆನರಾ ಬ್ಯಾಂಕ್ ಅಧಿಕಾರಿ ಸಭೆಯಲ್ಲಿ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು. ಕೇಂದ್ರ ಸರ್ಕಾರವು ಪ್ರತಿಯೊಂದು ಯೋಜನೆಗಳನ್ನು ಜಾರಿಗೆ ತಂದು ಕಟ್ಟಕಡೆಯ ವ್ಯಕ್ತಿಗೂ ತಲುಪುವಂತೆ ಮಾಡುತ್ತಿದೆ. ಪ್ರಧಾನ ಮಂತ್ರಿ ಮುದ್ರಾ ಯೋಜನೆ ಅಡಿಯಲ್ಲಿ ಸಾಲ ನೀಡಲಾಗಿದೆ. ಪ್ರಧಾನ ಮಂತ್ರಿ ಅವಾಸ್ ಯೋಜನೆ ಪಿಎಂಎವೈ ಯೋಜನೆಗಳಿಗೆ ನೆರವು ನೀಡಲಾಗುತ್ತಿದೆ.
ಸುಕನ್ಯಾ ಸಮೃದ್ಧಿ ಯೋಜನೆ ಅಡಿಯಲ್ಲಿ ಹೆಣ್ಣು ಮಕ್ಕಳ ಹೆಸರಿನಲ್ಲಿ ಖಾತೆಗಳನ್ನು ತೆಗೆಯಲಾಗಿದೆ. ಈ ಯೋಜನೆಗಳ ಸೌಲಭ್ಯವನ್ನು ಎಲ್ಲರೂ ಪಡೆದುಕೊಳ್ಳಬೇಕು ಎಂದು ಹೇಳಿದರು
ಬೆಂಗಳೂರಿನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆಗೆ ಚಾಲನೆ ನೀಡಿ ಮಾತನಾಡಿದ ಸಂಸದ ಪಿ.ಸಿ. ಮೋಹನ್ ಕೇಂದ್ರ ಸರ್ಕಾರ ಹತ್ತಾರು ಜನಪರ ಯೋಜನೆಗಳನ್ನು ಜಾರಿಗೆ ತಂದಿದೆ.
ಈ ಮೊದಲು ಸರ್ಕಾರಿ ಸೇವೆ ಪಡೆಯಲು ಜನ ಬ್ಯಾಕ್ ಗಳಿಗೆ ಸುತ್ತಬೇಕಿತ್ತು . ಈಗ ಕಾಲ ಬದಲಾಗಿದ್ದು ಅಧಿಕಾರಿಗಳೇ ಜನರ ಮನೆ ಬಾಗಿಲಿಗೆ ಬರುತ್ತಿದ್ದಾರೆ ಎಂದು ಹೇಳಿದರು.
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರು ಫಲಾನುಭವಿಗಳೊಂದಿಗೆ ನಡೆಸಿದ ಸಂವಾದದ ನೇರ ಪ್ರಸಾರವನ್ನು ಅತಿಥಿಗಳು ಮತ್ತು ಸಾರ್ವಜನಿಕರು ವೀಕ್ಷಿಸಿದರು.
ಕಾರ್ಯಕ್ರಮದಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಬೆಂಗಳೂರು ನಗರದ ನೋಡಲ್ ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು , ಬ್ಯಾಂಕ್ ಅಧಿಕಾರಿಗಳು ಸೇರಿದಂತೆ ಸಾರ್ವಜನಿಕರು ಪಾಲ್ಗೊಂಡಿದ್ದರು. ನಂತರ ವಿವಿಧ ಇಲಾಖೆಗಳಿಂದ ಸಿಗುವ ಯೋಜನಗಳ ಬಗ್ಗೆ ಮಾಹಿತಿ ಪಡೆದರು ಪ್ರತಿಜ್ಞೆಯನ್ನು ತೆಗೆದುಕೊಳ್ಳಲಾಯಿತು. ಫಲಾನುಭವಿಗಳು ತಮ್ಮ ಅನಿಸಿಕೆಯನ್ನು ಹಂಚಿಕೊಂಡರು.
****
(ಪ್ರಕಟಣೆ ಐ.ಡಿ.: 1993989)
ವಿಸಿಟರ್ ಕೌಂಟರ್ : 24