ಪ್ರಧಾನ ಮಂತ್ರಿಯವರ ಕಛೇರಿ
ಸತತ ನಾಲ್ಕನೇ ಅವಧಿಗೆ ಗೆಲುವಿಗಾಗಿ ಪ್ರಧಾನಮಂತ್ರಿ ಶ್ರೀಮತಿ ಶೇಖ್ ಹಸೀನಾ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ
Posted On:
08 JAN 2024 7:46PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬಾಂಗ್ಲಾದೇಶದ ಪ್ರಧಾನಮಂತ್ರಿ ಶ್ರೀಮತಿ ಶೇಖ್ ಹಸೀನಾ ಅವರೊಂದಿಗೆ ಮಾತನಾಡಿದರು ಮತ್ತು ಬಾಂಗ್ಲಾದೇಶದ ಸಂಸತ್ತಿನ ಚುನಾವಣೆಯಲ್ಲಿ ಸತತ ನಾಲ್ಕನೇ ಬಾರಿಗೆ ಐತಿಹಾಸಿಕ ಗೆಲುವಿಗಾಗಿ ಅವರನ್ನು ಅಭಿನಂದಿಸಿದರು.
ಪ್ರಧಾನಮಂತ್ರಿಯವರು ತಮ್ಮ ಎಕ್ಸ್ ಖಾತೆಯಲ್ಲಿ ಈ ರೀತಿ ಸಂದೇಶ ಹಂಚಿಕೊಂಡಿದ್ದಾರೆ;
"ಪ್ರಧಾನಮಂತ್ರಿ ಶ್ರೀಮತಿ ಶೇಖ್ ಹಸೀನಾ ಅವರೊಂದಿಗೆ ಮಾತನಾಡಿದ್ದೇನೆ ಮತ್ತು ಸಂಸತ್ತಿನ ಚುನಾವಣೆಯಲ್ಲಿ ಐತಿಹಾಸಿಕ ನಾಲ್ಕನೇ ಬಾರಿಗೆ ಅವರ ವಿಜಯಕ್ಕಾಗಿ ಅವರನ್ನು ಅಭಿನಂದಿಸಿದೆ. ಚುನಾವಣೆಯನ್ನು ಯಶಸ್ವಿಯಾಗಿ ನಡೆಸಿದ್ದಕ್ಕಾಗಿ ನಾನು ಬಾಂಗ್ಲಾದೇಶದ ಜನರನ್ನು ಅಭಿನಂದಿಸುತ್ತೇನೆ. ಬಾಂಗ್ಲಾದೇಶದೊಂದಿಗೆ ನಮ್ಮ ನಿರಂತರ ಮತ್ತು ಜನಕೇಂದ್ರಿತ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸಲು ನಾವು ಬದ್ಧರಾಗಿದ್ದೇವೆ.."
******
(Release ID: 1994584)
Visitor Counter : 110
Read this release in:
English
,
Urdu
,
Hindi
,
Marathi
,
Bengali
,
Manipuri
,
Assamese
,
Punjabi
,
Gujarati
,
Odia
,
Tamil
,
Telugu
,
Malayalam
,
Malayalam