ಪ್ರಧಾನ ಮಂತ್ರಿಯವರ ಕಛೇರಿ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಧ್ಯಕ್ಷ ಶ್ರೀ ಪುಟಿನ್ ಅವರೊಂದಿಗೆ ಮಾತುಕತೆ ನಡೆಸಿದರು.
ದ್ವಿಪಕ್ಷೀಯ ಅನನ್ಯ ಮತ್ತು ವಿಶೇಷ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸಲು ಮಾರ್ಗಸೂಚಿಯನ್ನು ಅಭಿವೃದ್ಧಿಪಡಿಸಲು ಇಬ್ಬರು ನಾಯಕರು ಒಪ್ಪಿಕೊಂಡರು
2024 ರಲ್ಲಿ ರಷ್ಯಾದ ಬ್ರಿಕ್ಸ್ ಅಧ್ಯಕ್ಷ ಸ್ಥಾನಕ್ಕೆ ಭಾರತದ ಪರವಾಗಿ ಪ್ರಧಾನಮಂತ್ರಿಯವರು ಶುಭ ಹಾರೈಸಿದ್ದರು.
Posted On:
15 JAN 2024 6:43PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ರಷ್ಯಾದ ಒಕ್ಕೂಟದ ಅಧ್ಯಕ್ಷ ಎಘನತೆವೆತ್ತ ಶ್ರೀ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿದರು.
ಉಭಯ ದೇಶಗಳ ನಡುವಿನ ಇತ್ತೀಚಿನ ಉನ್ನತ ಮಟ್ಟದ ವಿನಿಮಯದ ಅನುಸರಣೆಯಲ್ಲಿ ದ್ವಿಪಕ್ಷೀಯ ಸಹಕಾರದ ಹಲವಾರು ವಿಷಯಗಳ ಕುರಿತು ಉಭಯ ನಾಯಕರು ಪ್ರಗತಿಯನ್ನು ಪರಿಶೀಲಿಸಿದರು.
ದ್ವಿಪಕ್ಷೀಯ ಸಂಬಂಧಗಳಲ್ಲಿನ ಬೆಳವಣಿಗೆಗಳನ್ನು ಉಭಯ ನಾಯಕರು ಧನಾತ್ಮಕವಾಗಿ ಮೌಲ್ಯಮಾಪನ ಮಾಡಿದರು ಮತ್ತು ಭಾರತ-ರಷ್ಯಾ ಅನನ್ಯ ಮತ್ತು ವಿಶೇಷವಾದ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸಲು ಹಾಗೂ ಭವಿಷ್ಯದ ಉಪಕ್ರಮಗಳಿಗೆ ಮಾರ್ಗಸೂಚಿಯನ್ನು ಅಭಿವೃದ್ಧಿಪಡಿಸಲು ಒಪ್ಪಿಕೊಂಡರು.
ಪರಸ್ಪರ ಹಿತಾಸಕ್ತಿಯ ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಬಗ್ಗೆ ಉಭಯ ನಾಯಕರು ತಮ್ಮ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು.
2024ರಲ್ಲಿ ನಡೆಯುವ ಬ್ರಿಕ್ಸ್ ನ ರಷ್ಯಾ ಅಧ್ಯಕ್ಷತೆಗೆ ಪ್ರಧಾನಮಂತ್ರಿ ಅವರು ತಮ್ಮ ಶುಭಾಶಯಗಳನ್ನು ತಿಳಿಸಿದರು ಮತ್ತು ಭಾರತದ ಸಂಪೂರ್ಣ ಬೆಂಬಲದ ಭರವಸೆ ನೀಡಿದರು. ಉಭಯ ನಾಯಕರು ಸದಾ ಸಂಪರ್ಕದಲ್ಲಿರಲು ಒಪ್ಪಿಕೊಂಡರು.
****
(Release ID: 1996455)
Visitor Counter : 84
Read this release in:
Telugu
,
Bengali
,
English
,
Urdu
,
Marathi
,
Hindi
,
Manipuri
,
Punjabi
,
Gujarati
,
Odia
,
Tamil
,
Malayalam