ಸಂಪುಟ
azadi ka amrit mahotsav

ವೈದ್ಯಕೀಯ ಉತ್ಪನ್ನಗಳ ನಿಯಂತ್ರಣ ಕ್ಷೇತ್ರದಲ್ಲಿನ ಸಹಕಾರಕ್ಕಾಗಿ ಭಾರತ ಡೊಮಿನಿಕನ್ ರಿಪಬ್ಲಿಕ್ ನಡುವಿನ ತಿಳುವಳಿಕೆ ಒಪ್ಪಂದಕ್ಕೆ ಸಂಪುಟದ ಅನುಮೋದನೆ

Posted On: 18 JAN 2024 1:01PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಗೆ, ಭಾರತ ಗಣರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಕೇಂದ್ರೀಯ ಔಷಧ ಗುಣಮಟ್ಟ ನಿಯಂತ್ರಣ ಸಂಸ್ಥೆ (ಸಿಡಿಎಸ್ ಸಿಒ) ಮತ್ತು ಸಾರ್ವಜನಿಕ ಆರೋಗ್ಯ ಸಚಿವಾಲಯದ ಔಷಧ, ಆಹಾರ ಮತ್ತು ನೈರ್ಮಲ್ಯ ಉತ್ಪನ್ನಗಳ ಸಂಸ್ಥೆಗಳ ಮಹಾನಿರ್ದೇಶನಾಲಯ ಮತ್ತು ಡೊಮಿನಿಕನ್ ರಿಪಬ್ಲಿಕ್ ನ ಸಾಮಾಜಿಕ ಸಹಾಯಕರ ನಡುವೆ ವೈದ್ಯಕೀಯ ಉತ್ಪನ್ನಗಳ ನಿಯಂತ್ರಣ ಕ್ಷೇತ್ರದಲ್ಲಿನ ಸಹಕಾರಕ್ಕಾಗಿ ಅಂಕಿತ ಹಾಕಲಾದ ತಿಳುವಳಿಕೆ ಒಪ್ಪಂದದ ಬಗ್ಗೆ ವಿವರಿಸಲಾಯಿತು. ಈ ತಿಳುವಳಿಕೆ ಒಪ್ಪಂದಕ್ಕೆ 2023ರ ಅಕ್ಟೋಬರ್ 4ರಂದು ಅಂಕಿತ ಹಾಕಲಾಗಿತ್ತು.

ಈ ತಿಳುವಳಿಕೆ ಒಪ್ಪಂದವು ವೈದ್ಯಕೀಯ ಉತ್ಪನ್ನಗಳು ಮತ್ತು ಸಂಬಂಧಿತ ಆಡಳಿತಾತ್ಮಕ ಮತ್ತು ನಿಯಂತ್ರಕ ವಿಷಯಗಳಿಗೆ ಸಂಬಂಧಿಸಿದ ಕ್ಷೇತ್ರಗಳಲ್ಲಿ ಮಾಹಿತಿಯ ವಿನಿಮಯ ಮತ್ತು ಸಹಕಾರವನ್ನು  ಉತ್ತೇಜಿಸುತ್ತದೆ. ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಚಲನೆಯಲ್ಲಿರುವ ಕಳಪೆ ಗುಣಮಟ್ಟದ, ನಕಲಿ ಔಷಧಿಗಳ ಸಮಸ್ಯೆಗಳನ್ನು ನಿಭಾಯಿಸುವ ಸಲುವಾಗಿ, ನಿಯಂತ್ರಕ ಸಂಸ್ಥೆಗಳ ನಡುವೆ ತಿಳಿವಳಿಕೆ ಒಪ್ಪಂದಕ್ಕೆ ಸಹಿ ಹಾಕುವ ಮೂಲಕ ಸಂವಹನವನ್ನು ಸುಗಮಗೊಳಿಸಲಾಗುತ್ತದೆ.

ನಿಯಂತ್ರಕ ಅಭ್ಯಾಸಗಳಲ್ಲಿನ ಒಮ್ಮತವು ಭಾರತದಿಂದ ಔಷಧಿಗಳ ರಫ್ತನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ ಮತ್ತು ಔಷಧೀಯ ಕ್ಷೇತ್ರದಲ್ಲಿ ವಿದ್ಯಾವಂತ ವೃತ್ತಿಪರರಿಗೆ ಉತ್ತಮ ಉದ್ಯೋಗಾವಕಾಶಗಳಿಗೆ ಸಹಾಯ ಮಾಡುತ್ತದೆ. ಈ ತಿಳುವಳಿಕೆ ಒಪ್ಪಂದವು ವಿದೇಶಿ ವಿನಿಮಯ ಗಳಿಕೆಗೆ ಕಾರಣವಾಗುವ ವೈದ್ಯಕೀಯ ಉತ್ಪನ್ನಗಳ ರಫ್ತಿಗೆ ಅವಕಾಶ ಕಲ್ಪಿಸುತ್ತದೆ. ಇದು ಆತ್ಮನಿರ್ಭರ ಭಾರತದತ್ತ ಒಂದು ಹೆಜ್ಜೆಯಾಗಲಿದೆ

*****


(Release ID: 1997285) Visitor Counter : 89