ಪ್ರಧಾನ ಮಂತ್ರಿಯವರ ಕಛೇರಿ
ಪಿಎಂ ಕಿಸಾನ್ ಸಮ್ಮಾನ್ ನಿಧಿಯಿಂದ ಹರಿಯಾಣದ ರೈತನಿಗೆ ಸಹಾಯ
Posted On:
18 JAN 2024 3:46PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಫಲಾನುಭವಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದರು. ದೇಶಾದ್ಯಂತ ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಸಾವಿರಾರು ಫಲಾನುಭವಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಈ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವರು, ಸಂಸದರು, ಶಾಸಕರು ಹಾಗೂ ಸ್ಥಳೀಯ ಮಟ್ಟದ ಜನಪ್ರತಿನಿಧಿಗಳು ಪಾಲ್ಗೊಂಡಿದ್ದರು.
ರೈತ ಮತ್ತು ಪಿಎಂ ಕಿಸಾನ್ ಸಮ್ಮಾನ್ ನಿಧಿಯ ಫಲಾನುಭವಿಯಾದ ಹರಿಯಾಣದ ರೋಹ್ಟಕ್ನ ಶ್ರೀ ಸಂದೀಪ್ ಅವರು 11 ಜನರಿರುವ ಅವಿಭಕ್ತ ಕುಟುಂಬದಲ್ಲಿ ವಾಸಿಸುತ್ತಿದ್ದಾರೆ.
ಮಾತುಕತೆಯ ವೇಳೆ, ಜನರು ತಮ್ಮ ಖಾತೆಗೆ ನೇರವಾಗಿ ಹಣ ಜಮೆಯಾಗುತ್ತಿರುವ ಬಗ್ಗೆ ಜನರಿಗೆ ತಿಳಿದಿಲ್ಲದ ಘಟನೆಗಳನ್ನು ಪ್ರಧಾನಮಂತ್ರಿಯವರು ವಿವರಿಸಿದರು. ಅವರಿಗೆ ಸಿಗುತ್ತಿರುವ ನೆರವಿನ ಬಗ್ಗೆ ಅರಿವು ಮೂಡಿಸಲಾಯಿತು. ಸಮ್ಮಾನ್ ನಿಧಿಯ ರೂಪದಲ್ಲಿ ಪಡೆದ ಹಣವು ರಸಗೊಬ್ಬರ ಮತ್ತು ಬೀಜಗಳನ್ನು ಖರೀದಿಸಲು ಮತ್ತು ಕೃಷಿಗೆ ಸಹಾಯ ಮಾಡುತ್ತದೆ ಎಂದು ಶ್ರೀ ಸಂದೀಪ್ ಪ್ರಧಾನ ಮಂತ್ರಿಯವರಿಗೆ ತಿಳಿಸಿದರು.
ಪಡಿತರ ವಿತರಣೆ ಸುಗಮವಾಗಿ ನಡೆಯುತ್ತಿರುವ ಬಗ್ಗೆ ಪ್ರಧಾನಮಂತ್ರಿಯವರಿಗೆ ತಿಳಿಸಲಾಯಿತು. ಹರಿಯಾಣದ ಮುಖ್ಯಮಂತ್ರಿಯವರ ಕಟ್ಟುನಿಟ್ಟಿನ ಅನುಷ್ಠಾನವನ್ನು ಪ್ರಧಾನಮಂತ್ರಿಯವರು ಶ್ಲಾಘಿಸಿದರು. ‘ಮೋದಿ ಕಿ ಗ್ಯಾರಂಟಿ ಕಿ ಗಾಡಿ’ಯನ್ನು ಗ್ರಾಮದಲ್ಲಿ ಸಂಭ್ರಮದಿಂದ ಸ್ವಾಗತಿಸಲಾಯಿತು.
ಶ್ರೀ ಮೋದಿಯವರು ಸ್ಥಳದಲ್ಲಿ ಮಹಿಳೆಯರ ಹೆಚ್ಚಿನ ಉಪಸ್ಥಿತಿಯನ್ನು ಗಮನಿಸಿ ಪ್ರಾಣ ಪ್ರತಿಷ್ಟೆಕ್ಕಾಗಿ ಅವರ ಆಶೀರ್ವಾದವನ್ನು ಕೋರಿದರು.
****
(Release ID: 1997457)
Visitor Counter : 75
Read this release in:
Assamese
,
English
,
Urdu
,
Marathi
,
Hindi
,
Manipuri
,
Bengali
,
Punjabi
,
Gujarati
,
Odia
,
Tamil
,
Telugu
,
Malayalam