ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

​​​​​​​ರಾಷ್ಟ್ರೀಯ ಹೆಣ್ಣು ಮಕ್ಕಳ ದಿನದಂದು ಹೆಣ್ಣು ಮಕ್ಕಳ ಅದಮ್ಯ ಚೇತನ ಮತ್ತು ಸಾಧನೆಗಳಿಗೆ ಪ್ರಧಾನಿ ವಂದನೆ

प्रविष्टि तिथि: 24 JAN 2024 9:19AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನದಂದು ಹೆಣ್ಣು ಮಕ್ಕಳ ಅದಮ್ಯ ಚೇತನ ಮತ್ತು ಸಾಧನೆಗಳಿಗೆ ವಂದನೆ ಸಲ್ಲಿಸಿದ್ದಾರೆ. ಶ್ರೀ ಮೋದಿಯವರು ಎಲ್ಲಾ ಕ್ಷೇತ್ರಗಳಲ್ಲಿಯೂ ಪ್ರತಿ ಹೆಣ್ಣು ಮಗುವಿನ ಸಾಮರ್ಥ್ಯವನ್ನು ಗುರುತಿಸಿದ್ದಾರೆ. ಕಳೆದ ದಶಕದಲ್ಲಿ ನಮ್ಮ ಸರ್ಕಾರವು ಪ್ರತಿ ಹೆಣ್ಣು ಮಗು ಕಲಿಯಲು, ಬೆಳೆಯಲು ಮತ್ತು ಅಭಿವೃದ್ಧಿ ಹೊಂದಲು ಅನೇಕ ಅವಕಾಶಗಳನ್ನು ನೀಡುವ ಪ್ರಯತ್ನವನ್ನು ನಿರಂತರವಾಗಿ ಮಾಡಿದೆ ಎಂದು ಶ್ರೀ ಮೋದಿ ಹೇಳಿದರು.

ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ಸಂದೇಶ ನೀಡಿದ್ದಾರೆ.

“ರಾಷ್ಟ್ರೀಯ ಹೆಣ್ಣು ಮಕ್ಕಳ ದಿನದಂದು, ನಾವು ಹೆಣ್ಣು ಮಗುವಿನ ಅದಮ್ಯ ಮನೋಭಾವ ಮತ್ತು ಸಾಧನೆಗಳಿಗೆ ವಂದಿಸುತ್ತೇವೆ. ಎಲ್ಲಾ ಕ್ಷೇತ್ರಗಳಲ್ಲಿನ ಪ್ರತಿ ಹೆಣ್ಣು ಮಗುವಿನ ಸಾಮರ್ಥ್ಯವನ್ನು ನಾವು ಗುರುತಿಸುತ್ತೇವೆ. ಅವರು ನಮ್ಮ ದೇಶ ಮತ್ತು ಸಮಾಜವನ್ನು ಉತ್ತಮಗೊಳಿಸುವ ಬದಲಾವಣೆಯನ್ನು ಮಾಡುವವರು. ಕಳೆದ ದಶಕದಲ್ಲಿ, ನಮ್ಮ ಸರ್ಕಾರವು ಪ್ರತಿ ಹೆಣ್ಣು ಮಗುವಿಗೆ ಕಲಿಯಲು, ಬೆಳೆಯಲು ಮತ್ತು ಅಭಿವೃದ್ಧಿ ಹೊಂದಲು ಅವಕಾಶ ನೀಡಿದೆ. ಈ ನಿಟ್ಟಿನಲ್ಲಿ ನಿರಂತರ ಅವಕಾಶಗಳನ್ನು ಒದಗಿಸುವ ಅನೇಕ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಪ್ರಧಾನಮಂತ್ರಿ ಸಂದೇಶ ನೀಡಿದ್ದಾರೆ.

 **********


(रिलीज़ आईडी: 1999084) आगंतुक पटल : 163
इस विज्ञप्ति को इन भाषाओं में पढ़ें: English , Urdu , Marathi , हिन्दी , Manipuri , Bengali , Assamese , Punjabi , Gujarati , Odia , Tamil , Telugu , Malayalam