ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

‘ಪ್ರಧಾನ ಮಂತ್ರಿ ಸೂರ್ಯೋದಯ ಯೋಜನೆ’ಯಡಿ 1 ಕೋಟಿ ಕುಟುಂಬಗಳು ಮೇಲ್ಛಾವಣಿ ಸೌರಶಕ್ತಿಯನ್ನು ಪಡೆಯಲಿದ್ದಾರೆ

Posted On: 22 JAN 2024 6:59PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 'ಪ್ರಧಾನ ಮಂತ್ರಿ ಸೂರ್ಯೋದಯ ಯೋಜನೆ'ಯನ್ನು ಘೋಷಿಸಿದ್ದಾರೆ. ಈ ಯೋಜನೆಯಡಿಯಲ್ಲಿ 1 ಕೋಟಿ ಕುಟುಂಬಗಳು ತಮ್ಮ ವಸತಿಯ ಮೇಲ್ಛಾವಣಿಯ ಸೌರಶಕ್ತಿ ಸೌಲಭ್ಯವನ್ನು ಪಡೆಯುತ್ತವೆ.

"ಇಂದು, ಅಯೋಧ್ಯೆಯಲ್ಲಿ ಜೀವನದ ಪವಿತ್ರೀಕರಣದ ಶುಭ ಸಂದರ್ಭದಲ್ಲಿ, ಭಾರತದ ಜನರು ತಮ್ಮ ಮನೆಗಳ ಛಾವಣಿಯ ಮೇಲೆ ತಮ್ಮದೇ ಆದ ಮೇಲ್ಛಾವಣಿಯ ಸೌರಶಕ್ತಿ (ಸೋಲಾರ್ ರೂಫ್ ಟಾಪ್ ) ವ್ಯವಸ್ಥೆಯನ್ನು ಹೊಂದಿರಬೇಕು ಎಂಬ ನನ್ನ ಸಂಕಲ್ಪ ಮತ್ತಷ್ಟು ಬಲಗೊಂಡಿದೆ” ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದರು.

ಅಯೋಧ್ಯೆಯಿಂದ ಹಿಂದಿರುಗಿದ ನಂತರ ನಾನು ತೆಗೆದುಕೊಂಡ ಮೊದಲ ನಿರ್ಧಾರವೆಂದರೆ “ನಮ್ಮ ಸರ್ಕಾರವು 1 ಕೋಟಿ ಮನೆಗಳಿಗೆ ಮೇಲ್ಛಾವಣಿಯ ಸೌರಶಕ್ತಿ ( ಸೋಲಾರ್ ರೂಫ್ ಟಾಪ್ )  ವ್ಯವಸ್ಥೆಯನ್ನು ಸ್ಥಾಪಿಸುವ ಗುರಿಯೊಂದಿಗೆ “ಪ್ರಧಾನಮಂತ್ರಿ ಸೂರ್ಯೋದಯ ಯೋಜನೆ” ಅನ್ನು ಪ್ರಾರಂಭಿಸಲಿದೆ.”

ಇದು ಬಡ ಮತ್ತು ಮಧ್ಯಮ ವರ್ಗದವರ ವಿದ್ಯುತ್ ಬಿಲ್ ಅನ್ನು ಕಡಿಮೆ ಮಾಡುವುದಲ್ಲದೆ, ಇಂಧನ ಕ್ಷೇತ್ರದಲ್ಲಿ ಭಾರತವನ್ನು ಸ್ವಾವಲಂಬಿಯನ್ನಾಗಿ ಮಾಡುತ್ತದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದರು.

ಪ್ರಧಾನಮಂತ್ರಿಯವರು ತಮ್ಮ ಎಕ್ಸ್ ಖಾತೆಯಲ್ಲಿ ಈ ರೀತಿ ಸಂದೇಶ ತಿಳಿಸಿದ್ದಾರೆ:

"सूर्यवंशी भगवान श्री राम के आलोक से विश्व के सभी भक्तगण सदैव ऊर्जा प्राप्त करते हैं।

आज अयोध्या में प्राण-प्रतिष्ठा के शुभ अवसर पर मेरा ये संकल्प और प्रशस्त हुआ कि भारतवासियों के घर की छत पर उनका अपना सोलर रूफ टॉप सिस्टम हो।

अयोध्या से लौटने के बाद मैंने पहला निर्णय लिया है कि हमारी सरकार 1 करोड़ घरों पर रूफटॉप सोलर लगाने के लक्ष्य के साथ “प्रधानमंत्री सूर्योदय योजना” प्रारंभ करेगी। 

इससे गरीब और मध्यम वर्ग का बिजली बिल तो कम होगा ही, साथ ही भारत ऊर्जा के क्षेत्र में आत्मनिर्भर भी बनेगा।"

****

 


(Release ID: 2000308) Visitor Counter : 238