ಪ್ರಧಾನ ಮಂತ್ರಿಯವರ ಕಛೇರಿ
ಆಸ್ಟ್ರೇಲಿಯನ್ ಓಪನ್ ಗೆದ್ದ ರೋಹನ್ ಬೋಪಣ್ಣಗೆ ಪ್ರಧಾನಿ ಅಭಿನಂದನೆ
ಪ್ರಕಟಣಾ ದಿನಾಂಕ:
27 JAN 2024 8:14PM by PIB Bengaluru
ಆಸ್ಟ್ರೇಲಿಯನ್ ಓಪನ್ ಪ್ರಶಸ್ತಿ ಗೆದ್ದ ಟೆನಿಸ್ ಆಟಗಾರ ರೋಹನ್ ಬೋಪಣ್ಣ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದರು.
ಸಾಮಾಜಿಕ ಜಾಲತಾಣ X ನಲ್ಲಿ ಪ್ರಧಾನಮಂತ್ರಿ ಈ ಕುರಿತು ಸಂದೇಶ ನೀಡಿದ್ದಾರೆ.
"ರೋಹನ್ ಬೋಪಣ್ಣ ಅವರ ಅದ್ಭುತ ಸಾಧನೆ ಯುವ ಸಮುದಾಯಕ್ಕೆ ಸ್ಫೂರ್ತಿ. ವಯಸ್ಸು ಎಂದಿಗೂ ಸಾಧನೆಗೆ ಅಡ್ಡಿ ಬರುವುದಿಲ್ಲ ಎಂದು ಇದನ್ನು ತೋರಿಸುತ್ತದೆ. ಐತಿಹಾಸಿಕ ಆಸ್ಟ್ರೇಲಿಯನ್ ಓಪನ್ ಪ್ರಶಸ್ತಿ ಗೆದ್ದಿರುವುದಕ್ಕೆ ಅವರಿಗೆ ಅಭಿನಂದನೆಗಳು.
ಅವರ ಗಮನಾರ್ಹ ವೃತ್ತಿ ಬದುಕು, ಶಕ್ತಿ, ಕಠಿಣ ಪರಿಶ್ರಮ ಶ್ಲಾಘನೀಯ. ಅವರ ಭವಿಷ್ಯದ ಯೋಜನೆಗಳಿಗೆ ನನ್ನ ಶುಭಾಶಯಗಳು ಎಂದು ಪ್ರಧಾನಮಂತ್ರಿ ಸಂದೇಶ ನೀಡಿದ್ದಾರೆ.
***
(ಪ್ರಕಟಣೆ ಐ.ಡಿ.: 2000364)
ವಿಸಿಟರ್ ಕೌಂಟರ್ : 125
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
Marathi
,
हिन्दी
,
Assamese
,
Bengali
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam