ಪ್ರಧಾನ ಮಂತ್ರಿಯವರ ಕಛೇರಿ
ಫ್ರಾನ್ಸ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಅವರಿಗೆ ಸ್ವಾಗತ ಕೋರಿದ ಪ್ರಧಾನಿ
प्रविष्टि तिथि:
25 JAN 2024 10:41PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಫ್ರಾನ್ಸ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಅವರನ್ನು ಸ್ವಾಗತಿಸಿದರು.
ನಮ್ಮ ಗಣರಾಜ್ಯೋತ್ಸವದಲ್ಲಿ ಪಾಲ್ಗೊಳ್ಳುತ್ತಿರುವುದು ಹೆಮ್ಮೆಯ ಸಂಗತಿ ಎಂದರು.
ಈ ಕುರಿತು ಸಾಮಾಜಿಕ ಜಾಲತಾಣ X ನಲ್ಲಿ ಪ್ರಧಾನ ಮಂತ್ರಿ ಸಂದೇಶ ನೀಡಿದ್ದಾರೆ.
"ನನ್ನ ಸ್ನೇಹಿತ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಭಾರತಕ್ಕೆ ಸ್ವಾಗತ ಕೋರುತ್ತೇನೆ.
ಶ್ರೀಮಂತ ಸಂಸ್ಕೃತಿ, ಪರಂಪರೆ ಮತ್ತು ಪ್ರತಿಭಾನ್ವಿತ ಜನರನ್ನು ಹೊಂದಿರುವ ರಾಜಸ್ಥಾನದ ಜೈಪುರದಿಂದ ಅಧ್ಯಕ್ಷ ಮ್ಯಾಕ್ರನ್ ತಮ್ಮ ಭಾರತ ಭೇಟಿಯನ್ನು ಪ್ರಾರಂಭಿಸುತ್ತಿರುವುದಕ್ಕೆ ನನಗೆ ಸಂತೋಷವಾಗಿದೆ. ಜನವರಿ 26 ರಂದು ದೆಹಲಿಯಲ್ಲಿ ನಡೆಯಲಿರುವ ನಮ್ಮ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಅವರು ಪಾಲ್ಗೊಳ್ಳುತ್ತಿರುವುದು ಹೆಮ್ಮೆಯ ಸಂಗತಿ. ಅವರ ಉಪಸ್ಥಿತಿಯು ನಮ್ಮ ರಾಷ್ಟ್ರಗಳ ನಡುವಿನ ಸಂಬಂಧಗಳನ್ನು ಬಲಪಡಿಸುವುದಲ್ಲದೆ, ನಮ್ಮ ಸ್ನೇಹ ಮತ್ತು ಸಹಯೋಗದ ಹಂಚಿಕೆಯ ಇತಿಹಾಸಕ್ಕೆ ಮಹತ್ವದ ಅಧ್ಯಾಯ ಇದಾಗಲಿದೆ ಎಂದು ಪ್ರಧಾನಮಂತ್ರಿ ಸಂದೇಶ ನೀಡಿದ್ದಾರೆ.
***
(रिलीज़ आईडी: 2000369)
आगंतुक पटल : 149
इस विज्ञप्ति को इन भाषाओं में पढ़ें:
English
,
Urdu
,
हिन्दी
,
Marathi
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam