ಹಣಕಾಸು ಸಚಿವಾಲಯ

ಹೆಚ್ಚಿನ ವೈದ್ಯಕೀಯ ಕಾಲೇಜುಗಳ ಸ್ಥಾಪನೆ: ಕೇಂದ್ರ ಹಣಕಾಸು ಸಚಿವರು ಘೋಷಣೆ


ಹೊಸ ವೈದ್ಯಕೀಯ ಕಾಲೇಜುಗಳು ವಿವಿಧ ಇಲಾಖೆಗಳ ಅಡಿಯಲ್ಲಿ ಅಸ್ತಿತ್ವದಲ್ಲಿರುವ ಆಸ್ಪತ್ರೆ ಮೂಲಸೌಕರ್ಯಗಳನ್ನು ಬಳಸಿಕೊಳ್ಳುತ್ತವೆ

ಅಸ್ತಿತ್ವದಲ್ಲಿರುವ ಆಸ್ಪತ್ರೆ ಮೂಲಸೌಕರ್ಯಗಳನ್ನು ಪರಿಶೀಲಿಸಲು ಮತ್ತು ವೈದ್ಯಕೀಯ ಕಾಲೇಜುಗಳನ್ನು ಶಿಫಾರಸ್ಸು ಮಾಡಲು ಸಮಿತಿಯನ್ನು ರಚಿಸಲಾಗುವುದು

ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಆರೋಗ್ಯ ರಕ್ಷಣೆ

Posted On: 01 FEB 2024 12:44PM by PIB Bengaluru

ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ಇಂದು ಸಂಸತ್ತಿನಲ್ಲಿ 2024-25ರ ಮಧ್ಯಂತರ ಬಜೆಟ್ ಮಂಡಿಸಿದಾಗ, ಯುವ ಶಕ್ತಿಯ ಮೇಲೆ ಗಮನ ಕೇಂದ್ರೀಕರಿಸಿ ಮತ್ತು 2047ರ ವೇಳೆಗೆ ವಿಕಸಿತ ಭಾರತ ಗುರಿಯತ್ತ ಸಾಗುತ್ತಾ, ಹೆಚ್ಚಿನ ವೈದ್ಯಕೀಯ ಕಾಲೇಜುಗಳನ್ನು ಸ್ಥಾಪಿಸಲು ಪ್ರಸ್ತಾಪಿಸಿದರು.

ವಿವಿಧ ಇಲಾಖೆಗಳ ಅಡಿಯಲ್ಲಿ ಅಸ್ತಿತ್ವದಲ್ಲಿರುವ ಆಸ್ಪತ್ರೆ ಮೂಲಸೌಕರ್ಯಗಳನ್ನು ಬಳಸಿಕೊಂಡು ಹೊಸ ವೈದ್ಯಕೀಯ ಕಾಲೇಜುಗಳನ್ನು ಸ್ಥಾಪಿಸಲಾಗುವುದು. ಈ ಉದ್ದೇಶಕ್ಕಾಗಿ ಸಮಸ್ಯೆಗಳನ್ನು ಪರಿಶೀಲಿಸಲು ಮತ್ತು ಸೂಕ್ತ ಶಿಫಾರಸ್ಸುಗಳನ್ನು ಮಾಡಲು ಸಮಿತಿಯನ್ನು ರಚಿಸಲಾಗುವುದು ಎಂದು ಕೇಂದ್ರ ಹಣಕಾಸು ಸಚಿವರು ಹೇಳಿದರು. ಈ ಉಪಕ್ರಮವು ಯುವಕರಿಗೆ ವೈದ್ಯರಾಗಲು ಅವಕಾಶವನ್ನು ಸೃಷ್ಟಿಸುವುದಲ್ಲದೆ ಜನರಿಗೆ ಆರೋಗ್ಯ ಸೇವೆಗಳನ್ನು ಸುಧಾರಿಸುತ್ತದೆ ಎಂದು ಅವರು ವ್ಯಕ್ತಪಡಿಸಿದರು.   

ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು ಮತ್ತು ಸಹಾಯಕಿಯರು ಸಹ ಆಯುಷ್ಮಾನ್ ಭಾರತ್ ಯೋಜನೆಯ ವ್ಯಾಪ್ತಿಗೆ ಬರುತ್ತಾರೆ ಎಂದು ಶ್ರೀಮತಿ ನಿರ್ಮಲಾ ಸೀತಾರಾಮನ್ ಪ್ರಸ್ತಾಪಿಸಿದರು.

*****



(Release ID: 2001186) Visitor Counter : 51