ಸಂಪುಟ

ಭಾರತ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ ನಡುವೆ ದ್ವಿಪಕ್ಷೀಯ ಹೂಡಿಕೆ ಒಪ್ಪಂದಕ್ಕೆ ಸಹಿ ಹಾಕಿ ಅದನ್ನು ಸ್ಥಿರೀಕರಿಸಲು ಸಂಪುಟದ ಅನುಮೋದನೆ

Posted On: 01 FEB 2024 11:38AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ಭಾರತ ಸರ್ಕಾರ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ ಸರ್ಕಾರದ ನಡುವೆ ದ್ವಿಪಕ್ಷೀಯ ಹೂಡಿಕೆ ಒಪ್ಪಂದಕ್ಕೆ ಅಂಕಿತ ಹಾಕಿ ಅದನ್ನು ಸ್ಥಿರೀಕರಿಸಲು ತನ್ನ ಅನುಮೋದನೆಯನ್ನು ನೀಡಿದೆ.

ಈ ಒಪ್ಪಂದವು ಹೂಡಿಕೆದಾರರಿಗೆ, ವಿಶೇಷವಾಗಿ ದೊಡ್ಡ ಹೂಡಿಕೆದಾರರ ವಿಶ್ವಾಸವನ್ನು ಹೊಂದುವ ನಿರೀಕ್ಷೆಯಿದೆ. ಇದರ ಪರಿಣಾಮವಾಗಿ ವಿದೇಶಿ ಹೂಡಿಕೆಗಳು ಮತ್ತು ವೀದೇಶಿ ನೇರ ಹೂಡಿಕೆ (ಒಡಿಐ) ಅವಕಾಶಗಳಲ್ಲಿ ಹೆಚ್ಚಳವಾಗುವ ನಿರೀಕ್ಷೆ ಇದ್ದು, ಉದ್ಯೋಗ ಸೃಷ್ಟಿಯ ಮೇಲೆ ಇದು ಸಕಾರಾತ್ಮಕ ಪರಿಣಾಮ ಬೀರಲಿದೆ.

ಈ ಒಪ್ಪಂದದ ಅನುಮೋದನೆಯು ಭಾರತದಲ್ಲಿ ಹೂಡಿಕೆಯನ್ನು ಹೆಚ್ಚಿಸುವ ನಿರೀಕ್ಷೆಯಿದ್ದು, ದೇಶೀಯ ಉತ್ಪಾದನೆಯನ್ನು ಉತ್ತೇಜಿಸಿ, ಆಮದು ಅವಲಂಬನೆಯನ್ನು ಕಡಿಮೆ ಮಾಡಿ, ರಫ್ತು ಹೆಚ್ಚಿಸುವ ಮೂಲಕ ಆತ್ಮನಿರ್ಭರ ಭಾರತದ ಗುರಿಯನ್ನು ಸಾಧಿಸಲು ಸಹಾಯ ಮಾಡುವ ನಿರೀಕ್ಷೆ ಇದೆ.

****



(Release ID: 2001344) Visitor Counter : 92