ಹಣಕಾಸು ಸಚಿವಾಲಯ

​​​​​​​ಅಮೃತ ಪೀಧಿ – ಯುವ ಸಬಲೀಕರಣಕ್ಕೆ ಸರ್ಕಾರ ಬದ್ಧ: ಕೇಂದ್ರ ಹಣಕಾಸು ಸಚಿವರು


ರಾಷ್ಟ್ರೀಯ ಶಿಕ್ಷಣ ನೀತಿ-2020 ಪರಿವರ್ತನೀಯ ಸುಧಾರಣೆಗಳಲ್ಲಿ ಒಂದಾಗಿದೆ – ಶ್ರೀಮತಿ ನಿರ್ಮಲಾ ಸೀತಾರಾಮನ್

ಪ್ರಧಾನ ಮಂತ್ರಿಗಳ ಶ್ರೀ ಶಾಲೆಗಳು ಗುಣಮಟ್ಟದ ಬೋಧನೆ ನೀಡುತ್ತಿವೆ, ಸಮಗ್ರ ಮತ್ತು ಸಂಪೂರ್ಣ ಅಭಿವೃದ್ಧಿಯ ವ್ಯಕ್ತಿಗಳನ್ನು ಪೋಷಿಸುತ್ತಿವೆ – ಶ್ರೀಮತಿ ನಿರ್ಮಲಾ ಸೀತಾರಾಮನ್

ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯು 18 ವ್ಯಾಪಾರಗಳಲ್ಲಿ ತೊಡಗಿರುವ ಕುಶಲಕರ್ಮಿಗಳು ಮತ್ತು ಕಸುಬುದಾರರಿಗೆ ಪರಿಪೂರ್ಣ ಬೆಂಬಲ ಒದಗಿಸುತ್ತದೆ – ಶ್ರೀಮತಿ ನಿರ್ಮಲಾ ಸೀತಾರಾಮನ್

Posted On: 01 FEB 2024 12:39PM by PIB Bengaluru

ಸಂಸತ್ತಿನಲ್ಲಿಂದು ಮಧ್ಯಂತರ ಬಜೆಟ್ 2024-25 ಮಂಡಿಸಿದ ಕೇಂದ್ರ ಹಣಕಾಸು ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು, ಯುವ ಅಮೃತ್ ಪೀಧಿ ಸಬಲೀಕರಣಕ್ಕೆ ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.

ಯುವಕರನ್ನು ಸಮರ್ಪಕವಾಗಿ ಸಜ್ಜುಗೊಳಿಸಿ ಸಬಲೀಕರಣಗೊಳಿಸುವುದರ ಮೇಲೆ ನಮ್ಮ ಏಳಿಗೆ ಅವಲಂಬಿತವಾಗಿದೆ. ರಾಷ್ಟ್ರೀಯ ಶಿಕ್ಷಣ ನೀತಿ-2020 ಪರಿವರ್ತನೀಯ ಸುಧಾರಣೆಗಳನ್ನು ತರುತ್ತಿದೆ. ಪಿಎಂ ಸ್ಕೂಲ್ಸ್ ಫಾರ್ ರೈಸಿಂಗ್ ಇಂಡಿಯಾ (ಪಿಎಂ ಶ್ರೀ ಶಾಲೆಗಳು) ಗುಣಮಟ್ಟದ ಬೋಧನೆ ನೀಡುತ್ತಿವೆ. ಇವು ಸಮಗ್ರ ಮತ್ತು ಸಂಪೂರ್ಣ ಅಭಿವೃದ್ಧಿಯ ವ್ಯಕ್ತಿಗಳನ್ನು ಪೋಷಿಸುತ್ತಿದೆ ಎಂದು ಸಚಿವರು ಹೇಳಿದರು.

ಸ್ಕಿಲ್ ಇಂಡಿಯಾ ಮಿಷನ್‌ನ ಯಶಸ್ಸನ್ನು ಪ್ರಸ್ತಾಪಿಸಿದ ಶ್ರೀಮತಿ ನಿರ್ಮಲಾ ಸೀತಾರಾಮನ್, ಈ ಮಿಷನ್ ಅಡಿ, 1.4 ಕೋಟಿ ಯುವಕರಿಗೆ ತರಬೇತಿ ನೀಡಲಾಗಿದೆ.  54 ಲಕ್ಷ ಯುವಕರಿಗೆ ಕೌಶಲ್ಯ ಮತ್ತು ಮರುಕೌಶಲ್ಯ ಒದಗಿಸಲಾಗಿದೆ, ದೇಶದಲ್ಲಿ 3000 ಹೊಸ ಐಟಿಐಗಳನ್ನು ಸ್ಥಾಪಿಸಲಾಗಿದೆ. ಇತ್ತೀಚೆಗೆ ಪ್ರಾರಂಭಿಸಲಾದ ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯು 18 ವಿವಿಧ ವ್ಯಾಪಾರಗಳಲ್ಲಿ ತೊಡಗಿರುವ ಕುಶಲಕರ್ಮಿಗಳು ಮತ್ತು ಕಸುಬುದಾರರಿಗೆ ಪರಿಪೂರ್ಣ ಬೆಂಬಲ ಒದಗಿಸುತ್ತಿದೆ ಎಂದರು.

ದೇಶದಲ್ಲಿ 7 ಐಐಟಿಗಳು, 16 ಐಐಐಟಿಗಳು, 7 ಐಐಎಂಗಳು, 15 ಎಐಐಎಂಎಸ್ ಮತ್ತು 390 ವಿಶ್ವವಿದ್ಯಾಲಯಗಳಂತಹ ಹೆಚ್ಚಿನ ಸಂಖ್ಯೆಯ ಹೊಸ ಉನ್ನತ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಲಾಗಿದೆ ಎಂದು ಹಣಕಾಸು ಸಚಿವರು ಮಾಹಿತಿ ನೀಡಿದರು.


******



(Release ID: 2001436) Visitor Counter : 72