ವಾರ್ತಾ ಮತ್ತು ಪ್ರಸಾರ ಸಚಿವಾಲಯ

ಶ್ರೀ ಸಂಜಯ್ ಜಾಜು ಅವರು ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಂಡರು.

Posted On: 05 FEB 2024 4:42PM by PIB Bengaluru

ಶ್ರೀ ಸಂಜಯ್ ಜಾಜು ಅವರು ಇಂದು ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಂಡರು. ಅವರು ತೆಲಂಗಾಣ ಕೇಡರ್ನ 1992 ಬ್ಯಾಚಿನ ಐಎಎಸ್ ಅಧಿಕಾರಿ. ಅಧಿಕಾರ ವಹಿಸಿಕೊಂಡ ಮೇಲೆ, ಶ್ರೀ ಜಾಜು ಅವರನ್ನು ನಿರ್ಗಮಿತ ಕಾರ್ಯದರ್ಶಿ ಶ್ರೀ ಅಪೂರ್ವ ಚಂದ್ರ ಮತ್ತು ಸಚಿವಾಲಯದ ಇತರ ಅಧಿಕಾರಿಗಳು ಮತ್ತು ವಿವಿಧ ಮಾಧ್ಯಮ ಘಟಕಗಳ ಅಧಿಕಾರಿಗಳು  ಸ್ವಾಗತಿಸಿದರು. ಶ್ರೀ ಅಪೂರ್ವ ಚಂದ್ರ ಅವರನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಕಾರ್ಯದರ್ಶಿಯಾಗಿ ನಿಯೋಜಿಸಲಾಗಿದೆ.

ಶ್ರೀ ಜಾಜು ಅವರು ಈ ಹಿಂದೆ 2018 ರಿಂದ 2023 ರವರೆಗೆ ಭಾರತ ಸರ್ಕಾರದ ಹೆಚ್ಚುವರಿ ಕಾರ್ಯದರ್ಶಿಯಾಗಿ ಮತ್ತು ಅಕ್ಟೋಬರ್ 2014 ರಿಂದ ಮಾರ್ಚ್ 2018 ರವರೆಗೆ ರಾಷ್ಟ್ರೀಯ ಹೆದ್ದಾರಿಗಳು ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮ ಲಿಮಿಟೆಡ್ ನ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ.

ಅವರು ಮೇ 2011 ರಿಂದ ಅಕ್ಟೋಬರ್ 2014 ರವರೆಗೆ ಆಂಧ್ರ ಪ್ರದೇಶ ಸರ್ಕಾರದ (ವಿಧ್ಯುನ್ಮಾನ, ಮಾಹಿತಿ ತಂತ್ರಜ್ಞಾನ ಮತ್ತು ಸಂವಹನ ಇಲಾಖೆ) ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ.

*****

 



(Release ID: 2002720) Visitor Counter : 59