ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

​​​​​​​ಮಧ್ಯಪ್ರದೇಶದ ಹರ್ದಾದಲ್ಲಿನ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ದುರ್ಘಟನೆಯಲ್ಲಿ ಮೃತಪಟ್ಟವರಿಗೆ ಸಂತಾಪ ಸಲ್ಲಿಸಿದ ಪ್ರಧಾನ ಮಂತ್ರಿಗಳು


ಪಿಎಂಎನ್‌ಆರ್‌ಎಫ್‌ನಿಂದ ಪರಿಹಾರ ಘೋಷಣೆ

Posted On: 06 FEB 2024 5:43PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಧ್ಯಪ್ರದೇಶದ ಹರ್ದಾದಲ್ಲಿನ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ದುರ್ಘಟನೆಯಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ್ದಾರೆ. ಪ್ರಧಾನಮಂತ್ರಿಗಳು ಪಿಎಂಎನ್‌ಆರ್‌ಎಫ್‌ನಿಂದ ಮೃತರ ಕುಟುಂಬದವರಿಗೆ 2 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ 50,000 ರೂ. ಪರಿಹಾರ ಘೋಷಿಸಿದ್ದಾರೆ.

ಈ ಸಂಬಂಧ "ಎಕ್ಸ್‌" ಸಾಮಾಜಿಕ ಜಾಲತಾಣದಲ್ಲಿ ಸಂದೇಶ ಪೋಸ್ಟ್‌ ಮಾಡಿರುವ ಪ್ರಧಾನ ಮಂತ್ರಿಗಳು,

"ಮಧ್ಯಪ್ರದೇಶದ ಹರ್ದಾದಲ್ಲಿ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ದುರಂತದಲ್ಲಿನ ಸಾವುನೋವಿನ ವಿಚಾರ ತೀವ್ರ ನೋವು ತಂದಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಎಲ್ಲರಿಗೂ ನನ್ನ ಸಂತಾಪ ಸಲ್ಲಿಸುತ್ತೇನೆ. ಗಾಯಗೊಂಡವರು ಆದಷ್ಟು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ. ಸಂತ್ರಸ್ತರಿಗೆ ಸ್ಥಳೀಯ ಆಡಳಿತವು ಎಲ್ಲ ರೀತಿಯ ನೆರವು ನೀಡುತ್ತಿದೆ. ಮೃತರ ವಾರಸುದಾರರಿಗೆ ಪಿಎಂಎನ್‌ಆರ್‌ಎಫ್‌ನಿಂದ ತಲಾ 2 ಲಕ್ಷ ರೂ. ಹಾಗೂ ಗಾಯಾಳುಗಳಿಗೆ ತಲಾ 50000 ರೂ. ಪರಿಹಾರ ನೀಡಲಾಗುವುದು,ʼʼ ಎಂದು ಹೇಳಿದ್ದಾರೆ.

Distressed by the loss of lives due to the mishap at a cracker factory in Harda, Madhya Pradesh. Condolences to all those who have lost their loved ones. May those injured recover at the earliest. The local administration is assisting all those affected.

Rs. 2 lakh from PMNRF…

— PMO India (@PMOIndia) February 6, 2024

 

***


(Release ID: 2003397) Visitor Counter : 52