ಸಿಬ್ಬಂದಿ, ಸಾರ್ವಜನಿಕ ಅಹವಾಲು ಮತ್ತು ಪಿಂಚಣಿ ಸಚಿವಾಲಯ

​​​​​​​ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆ ಮತ್ತು ಪಿಂಚಣಿ ಸಚಿವಾಲಯ ವಿಕಸಿತ ಭಾರತ ಸಂಕಲ್ಪ ಯಾತ್ರೆಯು ಪ್ರಮುಖ ಯೋಜನೆಗಳ ಪರಿಪೂರ್ಣತೆಯ ಗುರಿಯನ್ನು ಹೊಂದಿದೆ


Posted On: 08 FEB 2024 2:03PM by PIB Bengaluru

ಭಾರತ ಸರ್ಕಾರವು, ಇತರ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸಹಕಾರದೊಂದಿಗೆ, ನೈರ್ಮಲ್ಯ ಸೌಲಭ್ಯಗಳು, ಅಗತ್ಯ ಹಣಕಾಸು ಸೇವೆಗಳು, ಎಲ್ ಪಿ ಜಿ ಸಂಪರ್ಕಗಳು, ಬಡವರಿಗೆ ವಸತಿ, ಆಹಾರ ಭದ್ರತೆ, ಸರಿಯಾದ ಪೌಷ್ಠಿಕಾಂಶ ಪೂರೈಕೆ, ವಿಶ್ವಾಸಾರ್ಹ ಆರೋಗ್ಯ ರಕ್ಷಣೆ, ಶುದ್ಧ ಕುಡಿಯುವ ನೀರು, ಉನ್ನತ ಗುಣಮಟ್ಟದ ಶಿಕ್ಷಣ ಮುಂತಾದ ಮೂಲಭೂತ ಸೌಕರ್ಯಗಳನ್ನು ಒದಗಿಸಿ, ಎಲ್ಲಾ ಉದ್ದೇಶಿತ ಮತ್ತು ಅರ್ಹ ಫಲಾನುಭವಿಗಳಿಗೆ ಅಗತ್ಯ ಸೇವೆಗಳನ್ನು ಲಭ್ಯವಾಗುವಂತೆ ಮಾಡುವ ತನ್ನ ಪ್ರಮುಖ ಯೋಜನೆಗಳ ಮೂಲಕ ಪರಿಪೂರ್ಣವಾಗಿ ಸಕ್ರಿಯವಾಗಿ ತೊಡಗಿಸಿಕೊಂಡಿದೆ. ಈ ನಿಟ್ಟಿನಲ್ಲಿ ಮತ್ತೊಂದು ಮಹತ್ತರವಾದ ಹೆಜ್ಜೆಯೆಂದರೆ, ನಾಗರಿಕರಿಗೆ ಲಭ್ಯವಿರುವ ಪ್ರಯೋಜನಗಳು ಮತ್ತು ವಿವಿಧ ಸೌಲಭ್ಯಗಳ ಬಗ್ಗೆ ಜಾಗೃತಿಯನ್ನು ಮೂಡಿಸುವುದು, ಇದರಿಂದ ಈ ಸರಪಳಿಯಲ್ಲಿರುವ ಎಲ್ಲರೂ ಅನುಕೂಲ ಪಡೆಯುತ್ತಾರೆ. ಈ ಉದ್ದೇಶದೊಂದಿಗೆ, "ವಿಕಸಿತ ಭಾರತ ಸಂಕಲ್ಪ ಯಾತ್ರೆ" ಎಂಬ ಹೆಸರಿನಲ್ಲಿ ಫಲಾನುಭವಿಗಳ ಜಾಗೃತಿಗಾಗಿ, ನೋಂದಣಿಯ ಮೂಲಕ ಸಂತೃಪ್ತತೆಗಾಗಿ ರಾಷ್ಟ್ರವ್ಯಾಪಿ ಅಭಿಯಾನವನ್ನು ಪ್ರಾರಂಭಿಸಲಾಗಿದೆ. ಈಗಾಗಲೇ, ಜಲಶಕ್ತಿ ಅಭಿಯಾನ ಮತ್ತು ಮಹತ್ವಾಕಾಂಕ್ಷೆಯ ಜಿಲ್ಲೆಗಳ ಕಾರ್ಯಕ್ರಮಗಳಿಗೆ ಅನುಕೂಲವಾಗಲೆಂದೇ ಸಮನ್ವಯ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ. ಅಂತೆಯೇ, ಭಾರತ ಸರ್ಕಾರವು ರಾಜ್ಯ ಮತ್ತು ಜಿಲ್ಲಾಡಳಿತ ಸರ್ಕಾರಗಳ ಸಹಯೋಗದೊಂದಿಗೆ ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಪರಿಣಾಮಕಾರಿ ಸಮನ್ವಯಕ್ಕಾಗಿ ರಾಜ್ಯಗಳು ಹಾಗೂ ಜಿಲ್ಲೆಗಳಲ್ಲಿ ನೋಡಲ್ ಅಧಿಕಾರಿಗಳನ್ನು ನೇಮಿಸಿದೆ.

ಈ ಮಾಹಿತಿಯನ್ನು ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ರಾಜ್ಯ ಸಚಿವ (ಸ್ವತಂತ್ರ ಉಸ್ತುವಾರಿ), ಪ್ರಧಾನಮಂತ್ರಿ ಕಾರ್ಯಾಲಯ, ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆಗಳು, ಪಿಂಚಣಿ, ಪರಮಾಣು ಶಕ್ತಿ ಮತ್ತು ಬಾಹ್ಯಾಕಾಶ ಖಾತೆ ರಾಜ್ಯ ಸಚಿವರಾದ ಡಾ. ಜಿತೇಂದ್ರ ಸಿಂಗ್ ಅವರು ಇಂದು ರಾಜ್ಯಸಭೆಯಲ್ಲಿ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.

****



(Release ID: 2004007) Visitor Counter : 54


Read this release in: English , Urdu , Nepali , Hindi , Tamil