ಪ್ರಧಾನ ಮಂತ್ರಿಯವರ ಕಛೇರಿ

​​​​​​​ಮಾಜಿ ಪ್ರಧಾನ ಮಂತ್ರಿ ಚೌಧರಿ ಚರಣ್ ಸಿಂಗ್ ಅವರಿಗೆ ಭಾರತ ರತ್ನ ಗೌರವ: ಪ್ರಧಾನಿ ಮೋದಿ ಘೋಷಣೆ

Posted On: 09 FEB 2024 12:59PM by PIB Bengaluru

ಮಾಜಿ ಪ್ರಧಾನ ಮಂತ್ರಿ ಶ್ರೀ ಚೌಧರಿ ಚರಣ್ ಸಿಂಗ್ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಗೌರವ ಪ್ರಶಸ್ತಿ 'ಭಾರತ ರತ್ನ' ಪ್ರದಾನ ಮಾಡುವುದಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಘೋಷಿಸಿದ್ದಾರೆ. 

ದಿವಂಗತ ನಾಯಕ ಚೌಧರಿ ಚರಣ್ ಸಿಂಗ್ ಅವರು ತಮ್ಮ ಇಡೀ ಜೀವನವನ್ನು ರೈತರ ಹಕ್ಕುಗಳು ಮತ್ತು ಅವರ ಕಲ್ಯಾಣಕ್ಕಾಗಿ ಮುಡಿಪಾಗಿಟ್ಟಿದ್ದರು ಎಂದು ಪ್ರಧಾನಿ ಸ್ಮರಿಸಿಕೊಂಡಿದ್ದಾರೆ. 

ಈ ಬಗ್ಗೆ ಟ್ವೀಟ್ ಮೂಲಕ ಖುಷಿಯನ್ನು ಹಂಚಿಕೊಂಡಿರುವ ಪ್ರಧಾನ ಮಂತ್ರಿಗಳು,

“ದೇಶದ ಮಾಜಿ ಪ್ರಧಾನಿ ದಿವಂಗತ ಚೌಧರಿ ಚರಣ್ ಸಿಂಗ್ ಅವರಿಗೆ ಮರಣೋತ್ತರವಾಗಿ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸುತ್ತಿರುವುದು ನಮ್ಮ ಸರ್ಕಾರದ ಅದೃಷ್ಟ ಎಂದು ನಾನು ಭಾವಿಸುತ್ತೇನೆ. ಈ ಗೌರವ ದೇಶಕ್ಕೆ ಅವರು ನೀಡಿದ ಅನುಪಮ ಕೊಡುಗೆಗೆ ಸಮರ್ಪಿಸಲಾಗಿದೆ. ಅವರು ತಮ್ಮ ಇಡೀ ಜೀವನವನ್ನು ರೈತರ ಹಕ್ಕುಗಳು ಮತ್ತು ಅವರ ಕಲ್ಯಾಣಕ್ಕಾಗಿ ಕಳೆದಿದ್ದರು. 

ಚೌಧರಿ ಚರಣ್ ಸಿಂಗ್ ಅವರು ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ, ದೇಶದ ಗೃಹ ಮಂತ್ರಿಯಾಗಿ ಮತ್ತು ಪ್ರಧಾನ ಮಂತ್ರಿಯಾಗಿ ಯಾವಾಗಲೂ ರಾಷ್ಟ್ರ ನಿರ್ಮಾಣಕ್ಕೆ ಉತ್ತೇಜನ ನೀಡಿದ್ದರು. ತುರ್ತು ಪರಿಸ್ಥಿತಿಯ ವಿರುದ್ಧದ ಪ್ರತಿಭಟನೆಯಲ್ಲಿಯೂ ಅವರು ದೃಢವಾಗಿ ನಿಂತರು. ನಮ್ಮ ದೇಶದ ರೈತ ಸಹೋದರ ಸಹೋದರಿಯರ ಜೀವನ ಹಕ್ಕುಗಳ ಪರ ಹೋರಾಟ, ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಪ್ರಜಾಪ್ರಭುತ್ವಕ್ಕೆ ಅವರ ಬದ್ಧತೆ ಮತ್ತು ಉದ್ದೇಶಕ್ಕಾಗಿ ಜೀವನ ಸಮರ್ಪಣೆ ಇಡೀ ರಾಷ್ಟ್ರಕ್ಕೆ ಸ್ಫೂರ್ತಿದಾಯಕವಾಗಿದೆ ಎಂದು ಬರೆದುಕೊಂಡಿದ್ದಾರೆ.

***



(Release ID: 2004392) Visitor Counter : 59