ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಮಾಜಿ ಪ್ರಧಾನಿ ಪಿ.ವಿ.ನರಸಿಂಹರಾವ್ ಅವರಿಗೆ ಭಾರತ ರತ್ನ ಪ್ರಶಸ್ತಿ: ಪ್ರಧಾನಿ 

Posted On: 09 FEB 2024 1:13PM by PIB Bengaluru

ಮಾಜಿ ಪ್ರಧಾನಿ ಶ್ರೀ ಪಿ.ವಿ. ನರಸಿಂಹರಾವ್ ಗಾರು ಅವರಿಗೆ ಭಾರತ ರತ್ನ ಪ್ರಶಸ್ತಿಯನ್ನು ನೀಡುವುದಾಗಿ  ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಘೋಷಿಸಿದ್ದಾರೆ.

ಶ್ರೀ ನರಸಿಂಹ ರಾವ್ ಅವರು ಪ್ರಧಾನ ಮಂತ್ರಿಯಾಗಿ ಭಾರತವನ್ನು ಜಾಗತಿಕ ಮಾರುಕಟ್ಟೆಗಳಿಗೆ ತೆರೆದು, ಆರ್ಥಿಕ ಅಭಿವೃದ್ಧಿಯ ಹೊಸ ಯುಗವನ್ನು ಬೆಳೆಸುವ ಮಹತ್ವದ ಕ್ರಮಗಳಿಂದ ಗುರುತಿಸಲಾಗಿದೆ ಎಂದು ಅವರು ಉಲ್ಲೇಖಿಸಿದ್ದಾರೆ.

ಪ್ರಧಾನಮಂತ್ರಿ ತಮ್ಮ ಸಾಮಾಜಿಕ ಜಾಲತಾಣ  X ನಲ್ಲಿ ಹೀಗೆ ಹೇಳಿದ್ದಾರೆ.

“ನಮ್ಮ ಮಾಜಿ ಪ್ರಧಾನಿ ಶ್ರೀ ಪಿ.ವಿ.ನರಸಿಂಹರಾವ್ ಅವರಿಗೆ ಭಾರತ ರತ್ನ ನೀಡಿ ಗೌರವಿಸಲಾಗುವುದು ಎಂದು ಹಂಚಿಕೊಳ್ಳಲು ಸಂತೋಷವಾಗಿದೆ.

ಒಬ್ಬ ಖ್ಯಾತ ವಿದ್ವಾಂಸ ಮತ್ತು ರಾಜಕೀಯ ಮುತ್ಸದ್ದಿಯಾಗಿದ್ದ ನರಸಿಂಹ ರಾವ್ ಗಾರು ಭಾರತಕ್ಕೆ ವಿವಿಧ ಹುದ್ದೆಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ್ದಾರೆ. ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ, ಕೇಂದ್ರ ಸಚಿವರಾಗಿ, ಹಲವು ವರ್ಷಗಳ ಕಾಲ ಸಂಸತ್ ಮತ್ತು ವಿಧಾನಸಭೆಯ ಸದಸ್ಯರಾಗಿ ಅವರು ಮಾಡಿದ ಕೆಲಸಗಳನ್ನು ಅವರು ಸಮಾನವಾಗಿ ಸ್ಮರಿಸಿಕೊಳ್ಳಲಾಗುವುದು. ಅವರ ದೂರದೃಷ್ಟಿಯ ನಾಯಕತ್ವವು ಭಾರತವನ್ನು ಆರ್ಥಿಕವಾಗಿ ಮುನ್ನಡೆಸುವಲ್ಲಿ ಪ್ರಮುಖ ಪಾತ್ರ ವಹಿಸಿತು ಮತ್ತು ದೇಶದ ಸಮೃದ್ಧಿ ಮತ್ತು ಪ್ರಗತಿಗೆ ಭದ್ರ ಬುನಾದಿ ಹಾಕಿತ್ತು. 

ಪ್ರಧಾನಮಂತ್ರಿಯಾಗಿ ನರಸಿಂಹ ರಾವ್ ಗಾರು ಅವರ ಅಧಿಕಾರಾವಧಿಯು ಭಾರತವನ್ನು ಜಾಗತಿಕ ಮಾರುಕಟ್ಟೆಗಳಿಗೆ ತೆರೆದು ಆರ್ಥಿಕ ಅಭಿವೃದ್ಧಿಯ ಹೊಸ ಯುಗವನ್ನು ಉತ್ತೇಜಿಸುವ ಮಹತ್ವದ ಕ್ರಮಗಳಿಂದ ಗುರುತಿಸಲ್ಪಟ್ಟಿದೆ. ಅಲ್ಲದೆ, ಭಾರತದ ವಿದೇಶಾಂಗ ನೀತಿ, ಭಾಷೆ ಮತ್ತು ಶಿಕ್ಷಣ ಕ್ಷೇತ್ರಗಳಿಗೆ ಅವರ ಕೊಡುಗೆಗಳು ಅವರ ಬಹುಮುಖಿ ಪರಂಪರೆಯನ್ನು ಒತ್ತಿಹೇಳುತ್ತವೆ, ಅವರು ವಿಮರ್ಶಾತ್ಮಕ ಪರಿವರ್ತನೆಗಳ ಮೂಲಕ ಭಾರತವನ್ನು ಮುನ್ನಡೆಸಿದರಲ್ಲದೆ ಅದರ ಸಾಂಸ್ಕೃತಿಕ ಮತ್ತು ಬೌದ್ಧಿಕ ಪರಂಪರೆಯನ್ನು ಶ್ರೀಮಂತಗೊಳಿಸಿದರು’’. 

***


(Release ID: 2004411) Visitor Counter : 118