ಗೃಹ ವ್ಯವಹಾರಗಳ ಸಚಿವಾಲಯ
azadi ka amrit mahotsav

ಇದೇ ಮೊದಲ ಬಾರಿಗೆ, ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ (ಸಿಎಪಿಎಫ್) ಕಾನ್‌ಸ್ಟೇಬಲ್‌ಗಳ ನೇಮಕಾತಿಗಾಗಿ ಕಾನ್‌ಸ್ಟೇಬಲ್‌ (ಜಿಡಿ) ಪರೀಕ್ಷೆಯನ್ನು ಹಿಂದಿ ಮತ್ತು ಇಂಗ್ಲಿಷ್ ಹೊರತುಪಡಿಸಿ 13 ಪ್ರಾದೇಶಿಕ ಭಾಷೆಗಳಲ್ಲಿ ನಡೆಸಲಾಗುವುದು.


ದೇಶಾದ್ಯಂತ 128 ನಗರಗಳಲ್ಲಿ ಸುಮಾರು 48 ಲಕ್ಷ ಅಭ್ಯರ್ಥಿಗಳಿಗೆ 2024 ಫೆಬ್ರವರಿ 20ರಿಂದ ಮಾರ್ಚ್ 7ರ ವರೆಗೆ ಪರೀಕ್ಷೆ ನಡೆಯಲಿದೆ

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ, ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಶ್ರೀ ಅಮಿತ್ ಶಾ ಮಾರ್ಗದರ್ಶನದಲ್ಲಿ ಗೃಹ ವ್ಯವಹಾರಗಳ ಸಚಿವಾಲಯವು 2024 ಜನವರಿ 1ರಿಂದ ಹಿಂದಿ ಮತ್ತು ಇಂಗ್ಲಿಷ್ ಜೊತೆಗೆ 13 ಪ್ರಾದೇಶಿಕ ಭಾಷೆಗಳಲ್ಲಿ ಕಾನ್‌ಸ್ಟೇಬಲ್ (ಸಾಮಾನ್ಯ ಕರ್ತವ್ಯ) ಪರೀಕ್ಷೆ ನಡೆಸಲು ನಿರ್ಧರಿಸಿದೆ.

ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ ಸ್ಥಳೀಯ ಯುವಕರ ಭಾಗವಹಿಸುವಿಕೆ ಹೆಚ್ಚಿಸಲು ಮತ್ತು ಪ್ರಾದೇಶಿಕ ಭಾಷೆಗಳನ್ನು ಉತ್ತೇಜಿಸಲು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಶ್ರೀ ಅಮಿತ್ ಶಾ ಅವರ ಉಪಕ್ರಮದ ಮೇರೆಗೆ ಈ ಐತಿಹಾಸಿಕ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಕಾನ್‌ಸ್ಟೇಬಲ್‌ (ಸಾಮಾನ್ಯ ಕರ್ತವ್ಯ) ಪರೀಕ್ಷೆಯ ಪ್ರಶ್ನೆಪತ್ರಿಕೆಗಳನ್ನು ಈಗ ಹಿಂದಿ ಮತ್ತು ಇಂಗ್ಲಿಷ್ ಜತೆಗೆ ಅಸ್ಸಾಮಿ, ಬೆಂಗಾಲಿ, ಗುಜರಾತಿ, ಮರಾಠಿ, ಮಲಯಾಳಂ, ಕನ್ನಡ, ತಮಿಳು, ತೆಲುಗು, ಒಡಿಯಾ, ಉರ್ದು, ಪಂಜಾಬಿ, ಮಣಿಪುರಿ ಮತ್ತು ಕೊಂಕಣಿ ಭಾಷೆಗಳಲ್ಲಿ ಸಿದ್ಧಪಡಿಸಲಾಗುವುದು.

ಕಾನ್‌ಸ್ಟೇಬಲ್‌ (ಜಿಡಿ) ಆಯ್ಕೆ ಪರೀಕ್ಷೆಯು “ಸಿಬ್ಬಂದಿ ಆಯ್ಕೆ ಆಯೋಗ (ಎಸ್‌ಎಸ್‌ಸಿ)” ನಡೆಸುವ ಪ್ರಮುಖ ಪರೀಕ್ಷೆಗಳಲ್ಲಿ ಒಂದಾಗಿದೆ, ಇದು ದೇಶಾದ್ಯಂತ ಲಕ್ಷಾಂತರ ಯುವಕರನ್ನು ಆಕರ್ಷಿಸಲಿದೆ

ಈ ಐತಿಹಾಸಿಕ ನಿರ್ಧಾರದಿಂದ, ದೇಶಾದ್ಯಂತ ಲಕ್ಷಾಂತರ ಯುವಕರು ತಮ್ಮ ಮಾತೃಭಾಷೆ, ಪ್ರಾದೇಶಿಕ ಭಾಷೆಯಲ್ಲಿ ಈ ಪರೀಕ್ಷೆಯಲ್ಲಿ ಭಾಗವಹಿಸಲು ಸಾಧ್ಯವಾಗಲಿದೆ, ಇದು ಅವರ ಆಯ್ಕೆಯ ಅವಕಾಶಗಳನ್ನು ಹೆಚ್ಚಿಸುತ್ತದೆ.

ಕೇಂದ್ರ ಸರ್ಕಾರದ ಈ ಉಪಕ್ರಮದಿಂದ ದೇಶಾದ್ಯಂತ ಯುವ ಜನತೆ ತಮ್ಮ ಮಾತೃಭಾಷೆಯಲ್ಲಿ ಸಿಎಪಿಎಫ್ ಕಾನ್‌ಸ್ಟೇಬಲ್‌ (ಸಾಮಾನ್ಯ ಕರ್ತವ್ಯ) ಪರೀಕ್ಷೆಯಲ್ಲಿ ಭಾಗವಹಿಸಲು ಮತ್ತು ರಾಷ್ಟ್ರ ಸೇವೆಯಲ್ಲಿ ವೃತ್ತಿ ಮಾಡಲು ಸುವರ್ಣಾವಕಾಶ ಪಡೆಯಲಿದ್ದಾರೆ.

Posted On: 11 FEB 2024 11:51AM by PIB Bengaluru

ಇದೇ ಮೊದಲ ಬಾರಿಗೆ, ಕೇಂದ್ರ ಸಶಸ್ತ್ರ ಪೊಲೀಸ್ ಪಡೆ(ಸಿಎಪಿಎಫ್)ಗಳಲ್ಲಿ ಕಾನ್‌ಸ್ಟೇಬಲ್‌ಗಳ ನೇಮಕಾತಿಗಾಗಿ ಕಾನ್‌ಸ್ಟೇಬಲ್‌(ಜಿಡಿ) ಪರೀಕ್ಷೆಯನ್ನು ಹಿಂದಿ ಮತ್ತು ಇಂಗ್ಲಿಷ್ ಜತೆಗೆ 13 ಪ್ರಾದೇಶಿಕ ಭಾಷೆಗಳಲ್ಲಿ ನಡೆಸಲಾಗುವುದು. ದೇಶಾದ್ಯಂತ 128 ನಗರಗಳಲ್ಲಿ ಸುಮಾರು 48 ಲಕ್ಷ ಅಭ್ಯರ್ಥಿಗಳಿಗೆ 2024 ಫೆಬ್ರವರಿ 20ರಿಂದ ಮಾರ್ಚ್ 7 ರ ವರೆಗೆ ಪರೀಕ್ಷೆ ನಡೆಸಲಾಗುವುದು.

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ನೇತೃತ್ವದಲ್ಲಿ ಮತ್ತು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಶ್ರೀ ಅಮಿತ್ ಶಾ ಮಾರ್ಗದರ್ಶನದಲ್ಲಿ ಗೃಹ ವ್ಯವಹಾರಗಳ ಸಚಿವಾಲಯ(MHA)ವು 13 ಪ್ರಾದೇಶಿಕ ಭಾಷೆಗಳಲ್ಲಿ ಸಿಎಪಿಎಫ್ ಗಳ ನೇಮಕಾತಿಗಾಗಿ ಕಾನ್‌ಸ್ಟೇಬಲ್‌ (ಸಾಮಾನ್ಯ ಕರ್ತವ್ಯ) ಪರೀಕ್ಷೆ ನಡೆಸಲು ನಿರ್ಧರಿಸಿದೆ. 2024 ಜನವರಿ 1ರಿಂದ ಹಿಂದಿ ಮತ್ತು ಇಂಗ್ಲಿಷ್‌ಗೆ ಹೆಚ್ಚುವರಿಯಾಗಿ. ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ ಸ್ಥಳೀಯ ಯುವಕರ ಭಾಗವಹಿಸುವಿಕೆ ಹೆಚ್ಚಿಸಲು ಮತ್ತು ಪ್ರಾದೇಶಿಕ ಭಾಷೆಗಳನ್ನು ಉತ್ತೇಜಿಸಲು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಶ್ರೀ ಅಮಿತ್ ಶಾ ಅವರ ಉಪಕ್ರಮದ ಮೇರೆಗೆ ಈ ಐತಿಹಾಸಿಕ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಕಾನ್‌ಸ್ಟೇಬಲ್‌(ಜನರಲ್ ಡ್ಯೂಟಿ) ಪರೀಕ್ಷೆಯ ಪ್ರಶ್ನೆಪತ್ರಿಕೆಗಳನ್ನು ಈಗ ಹಿಂದಿ ಮತ್ತು ಇಂಗ್ಲಿಷ್ ಜತೆಗೆ ಕೆಳಗಿನ 13 ಪ್ರಾದೇಶಿಕ ಭಾಷೆಗಳಲ್ಲಿ ತಯಾರಿಸಲಾಗುತ್ತದೆ:

1. ಅಸ್ಸಾಮಿ

2. ಬೆಂಗಾಲಿ

3. ಗುಜರಾತಿ

4. ಮರಾಠಿ

5. ಮಲಯಾಳಂ

6. ಕನ್ನಡ

7. ತಮಿಳು

8. ತೆಲುಗು

9. ಒಡಿಯಾ

10. ಉರ್ದು

11. ಪಂಜಾಬಿ

12. ಮಣಿಪುರಿ

13. ಕೊಂಕಣಿ

 

ಕಾನ್‌ಸ್ಟೇಬಲ್‌ ಜಿಡಿ ಪರೀಕ್ಷೆಯು “ಸಿಬ್ಬಂದಿ ಆಯ್ಕೆ ಆಯೋಗ(ಎಸ್‌ಎಸ್‌ಸಿ)” ನಡೆಸುವ ಪ್ರಮುಖ ಪರೀಕ್ಷೆಗಳಲ್ಲಿ ಒಂದಾಗಿದೆ, ಇದು ದೇಶಾದ್ಯಂತ ಲಕ್ಷಾಂತರ ಯುವಕರನ್ನು ಆಕರ್ಷಿಸುತ್ತದೆ. ಆದ್ದರಿಂದ, ಗೃಹ ವ್ಯವಹಾರಗಳ ಸಚಿವಾಲಯ ಮತ್ತು ಸಿಬ್ಬಂದಿ ಆಯ್ಕೆ ಆಯೋಗವು ಹಿಂದಿ ಮತ್ತು ಇಂಗ್ಲಿಷ್ ಜೊತೆಗೆ ಮೇಲಿನ 13 ಪ್ರಾದೇಶಿಕ ಭಾಷೆಗಳಲ್ಲಿ ಪರೀಕ್ಷೆಯನ್ನು ನಡೆಸಲು ಅನುಕೂಲವಾಗುವಂತೆ ತಿಳಿವಳಿಕೆ ಪತ್ರಕ್ಕೆ ಸಹಿ ಹಾಕಿದೆ. ಅದರಂತೆ, ಎಸ್‌ಎಸ್‌ಸಿ ಕಾನ್‌ಸ್ಟೇಬಲ್‌(ಜಿಡಿ) ಪರೀಕ್ಷೆ-2024 ಅನ್ನು ಇಂಗ್ಲಿಷ್ ಮತ್ತು ಹಿಂದಿ ಜತೆಗೆ 13 ಇತರ ಪ್ರಾದೇಶಿಕ ಭಾಷೆಗಳಲ್ಲಿ ನಡೆಸಲು ಅಧಿಸೂಚನೆ ಹೊರಡಿಸಿದೆ.

ಈ ನಿರ್ಧಾರವು ಲಕ್ಷಾಂತರ ಯುವಕರು ತಮ್ಮ ಮಾತೃಭಾಷೆ, ಪ್ರಾದೇಶಿಕ ಭಾಷೆಯಲ್ಲಿ ಪರೀಕ್ಷೆಯಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸುತ್ತದೆ. ಜತೆಗೆ, ಅವರಿಗೆ ಆಯ್ಕೆಯ ಭವಿಷ್ಯವನ್ನು ಸುಧಾರಿಸುತ್ತದೆ. ಪರಿಣಾಮವಾಗಿ, ಇಡೀ ದೇಶದ ಅಭ್ಯರ್ಥಿಗಳಲ್ಲಿ ಈ ಪರೀಕ್ಷೆಯ ವ್ಯಾಪ್ತಿಯು ಹೆಚ್ಚಾಗುತ್ತದೆ. ಎಲ್ಲರಿಗೂ ಸಮಾನ ಉದ್ಯೋಗ ಅವಕಾಶ ಸಿಗುತ್ತದೆ.

ಕೇಂದ್ರ ಸರ್ಕಾರದ ಈ ಉಪಕ್ರಮದಿಂದ, ದೇಶಾದ್ಯಂತ ಯುವಕರು, ಸಿಬ್ಬಂದಿ ಆಯ್ಕೆ ಆಯೋಗವು ನಡೆಸುವ ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ ಕಾನ್‌ಸ್ಟೇಬಲ್‌ (ಜನರಲ್ ಡ್ಯೂಟಿ) ಪರೀಕ್ಷೆಯನ್ನು ತಮ್ಮ ಮಾತೃಭಾಷೆಯಲ್ಲಿ ಬರೆಯಲು ಮತ್ತು ರಾಷ್ಟ್ರ ಸೇವೆಯ ವೃತ್ತಿಜೀವನ ಮಾಡಲು ಸುವರ್ಣಾವಕಾಶ ಪಡೆಯಲಿದ್ದಾರೆ.

 

 

*****

 


(Release ID: 2004990) Visitor Counter : 191