ಪ್ರಧಾನ ಮಂತ್ರಿಯವರ ಕಛೇರಿ
ನಮ್ಮ ಶಿಕ್ಷಣ ಸಂಸ್ಥೆಗಳ ಅಂತರಾಷ್ಟ್ರೀಕರಣದ ಗುರಿಗಳಿಗೆ ಕೇಂದ್ರ ಸರ್ಕಾರವು ಬದ್ಧವಾಗಿದೆ: ಪ್ರಧಾನಮಂತ್ರಿ
प्रविष्टि तिथि:
13 FEB 2024 12:36PM by PIB Bengaluru
ಕೇಂದ್ರ ಶಿಕ್ಷಣ ಸಚಿವ ಶ್ರೀ ಧರ್ಮೇಂದ್ರ ಪ್ರಧಾನ್ ಅವರು ಬರೆದಿರುವ ಸಂಪಾದಕೀಯ ಪುಟದ ಲೇಖನವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹಂಚಿಕೊಂಡಿದ್ದಾರೆ.
ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ವಿವರಿಸಿರುವಂತೆ ನಮ್ಮ ಶಿಕ್ಷಣ ಸಂಸ್ಥೆಗಳ ಅಂತರಾಷ್ಟ್ರೀಕರಣದ ಗುರಿಗಳಿಗೆ ತಮ್ಮ ಸರ್ಕಾರ ಬದ್ಧವಾಗಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದರು.
ಪ್ರಧಾನಮಂತ್ರಿಯವರು ತಮ್ಮ ಎಕ್ಸ್ ಖಾತೆಯಲ್ಲಿ ಈ ರೀತಿ ಸಂದೇಶ ತಿಳಿಸಿದ್ದಾರೆ;
"ನಮ್ಮ ಸರ್ಕಾರವು ರಾಷ್ಟ್ರೀಯ ಶಿಕ್ಷಣ ನೀತಿಯಡಿಯಲ್ಲಿ ವಿವರಿಸಿರುವಂತೆ ನಮ್ಮ ಶಿಕ್ಷಣ ಸಂಸ್ಥೆಗಳ ಅಂತರಾಷ್ಟ್ರೀಕರಣದ ಗುರಿಗಳಿಗೆ ಬದ್ಧವಾಗಿದೆ. ಐಐಟಿ-ದೆಹಲಿಯ ನೂತನ ಅಬುಧಾಬಿ ಕ್ಯಾಂಪಸ್ ಮತ್ತು ಐಐಟಿ-ಮದ್ರಾಸ್ ಇದರ ಜಂಜಿಬಾರ್ ಕ್ಯಾಂಪಸ್ ಈ ಬದ್ಧತೆಯನ್ನು ಸ್ಪಷ್ಟಪಡಿಸುತ್ತವೆ. ಕೇಂದ್ರ ಶಿಕ್ಷಣ ಸಚಿವ, ಶ್ರೀ ಧರ್ಮೇಂದ್ರ ಪ್ರಧಾನ್ ಜಿ ಅವರು ಅವರ ಲೇಖನದಲ್ಲಿ, ಈ ವಿಷಯವನ್ನು ಹಂಚಿಕೊಂಡಿದ್ದಾರೆ."
***
(रिलीज़ आईडी: 2005569)
आगंतुक पटल : 184
इस विज्ञप्ति को इन भाषाओं में पढ़ें:
Gujarati
,
Tamil
,
English
,
Urdu
,
Marathi
,
हिन्दी
,
Bengali
,
Assamese
,
Manipuri
,
Punjabi
,
Odia
,
Telugu
,
Malayalam