ಪ್ರಧಾನ ಮಂತ್ರಿಯವರ ಕಛೇರಿ

ಯು.ಎ.ಇ.ಯಲ್ಲಿ ನಡೆದ ಭಾರತೀಯ ಸಮುದಾಯದ -''ಅಹ್ಲಾನ್ ಮೋದಿ'' ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರ ಸಂವಾದ

Posted On: 13 FEB 2024 11:07PM by PIB Bengaluru

ಯು.ಎ.ಇ.ಯಲ್ಲಿನ ಭಾರತೀಯ ಸಮುದಾಯವು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಗೌರವಾರ್ಥವಾಗಿ ಆಯೋಜಿಸಿದ ''ಅಹ್ಲಾನ್ ಮೋದಿ'' ಕಾರ್ಯಕ್ರಮದಲ್ಲಿ ಯು.ಎ.ಇ.ಯಲ್ಲಿರುವ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಅವರು ಮಾತನಾಡಿದರು. ಯು.ಎ.ಇ.ಯ 7 ಎಮಿರೇಟ್ಸ್ ನಾದ್ಯಂತ ಭಾರತೀಯ ಅನಿವಾಸಿ ಸಮುದಾಯ (ಡಯಾಸ್ಪೊರಾ) ಬೃಹತ್ ಪ್ರಮಾಣದಲ್ಲಿ ಭಾಗವಹಿಸುವಿಕೆ ಮತ್ತು ಎಲ್ಲಾ ಸಮುದಾಯಗಳ ಭಾರತೀಯರನ್ನು ''ಅಹ್ಲಾನ್ ಮೋದಿ'' ಕಾರ್ಯಕ್ರಮ ಒಳಗೊಂಡಿತ್ತು. ಯು.ಎ.ಇ.ಯ ಪ್ರಜೆಗಳಾದ ಅರಬಿ(ಎಮಿರಾಟಿ)ಗಳು ಸಹ ಪ್ರೇಕ್ಷಕರಾಗಿ ಒಳಗೊಂಡಿದ್ದರು.

ಅಬುಧಾಬಿಯ ಝಾಯೆದ್ ಸ್ಪೋರ್ಟ್ಸ್ ಸಿಟಿ ಕ್ರೀಡಾಂಗಣದ ಕಾರ್ಯಕ್ರಮಕ್ಕೆ ಪ್ರವೇಶಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು 40,000ಕ್ಕೂ ಅಧಿಕ ಪ್ರೇಕ್ಷಕರು ವಿಶೇಷ ಆತ್ಮೀಯತೆಯಿಂದ ಸ್ವಾಗತಿಸಿದರು. ತಮ್ಮ ಭಾಷಣದಲ್ಲಿ ಪ್ರಧಾನಮಂತ್ರಿಯವರು ಭಾರತ ಮತ್ತು ಯು.ಎ.ಇ. ನಡುವಿನ ದ್ವಿಪಕ್ಷೀಯ ಸಂಬಂಧಗಳನ್ನು ಮತ್ತಷ್ಟು ಬಲಪಡಿಸಲು ಭಾರತೀಯ ಅನಿವಾಸಿ ಸಮುದಾಯ (ಡಯಾಸ್ಪೊರಾ) ನೀಡಿದ ಕೊಡುಗೆಯ ಕುರಿತು ತಮ್ಮ ಚಿಂತನೆಗಳನ್ನು ಹಂಚಿಕೊಂಡರು. ಭಾರತೀಯ ಸಮುದಾಯದ ಬಗ್ಗೆ ತೋರಿದ ಕೃಪೆ , ಆತ್ಮೀಯತೆ ಮತ್ತು ಕಾಳಜಿಗಾಗಿ ಯು.ಎ.ಇ.ಯ ಆಡಳಿತಗಾರರು ಮತ್ತು ಸರ್ಕಾರಕ್ಕೆ ಪ್ರಧಾನಮಂತ್ರಿ ಧನ್ಯವಾದ ಅರ್ಪಿಸಿದರು. ನಿರ್ದಿಷ್ಟವಾಗಿ ಹೇಳುವುದಾದರೆ, ಭಾರತೀಯ ಅನಿವಾಸಿ ಸಮುದಾಯಕ್ಕೆ (ಡಯಾಸ್ಪೊರಾ) ಸಾಧ್ಯವಿರುವ ಎಲ್ಲ ರೀತಿಯ ಸಹಾಯವನ್ನು ಒದಗಿಸಿದ, ಅದರಲ್ಲೂ, ಅತಿ ಕಷ್ಟಕರವಾದ ಕೋವಿಡ್ ಸಮಯದಲ್ಲಿ ಯು.ಎ.ಇ.ಯ ಆಡಳಿತಗಾರರು ತೆಗೆದುಕೊಂಡ ವಿಶೇಷ ಕಾಳಜಿಯನ್ನು ಪ್ರಧಾನಮಂತ್ರಿಯವರು ಪ್ರಸ್ತಾಪಿಸಿದರು. 

ಕಳೆದ 10 ವರ್ಷಗಳಲ್ಲಿ, ದೇಶವು ಸಾಧಿಸಿದ ಪ್ರಗತಿಯ ಬಗ್ಗೆ ಪ್ರಧಾನಮಂತ್ರಿಯವರು ತಮ್ಮ ದೃಷ್ಟಿಕೋನವನ್ನು ಹಂಚಿಕೊಂಡರು ಮತ್ತು 2047 ರ ವೇಳೆಗೆ ಅಭಿವೃದ್ಧಿ ಹೊಂದಿದ ದೇಶ – ವಿಕಸಿತ  ಭಾರತ - ಆಗುವ ಹಾದಿಯಲ್ಲಿ 2030 ರ ವೇಳೆಗೆ ಭಾರತವು ಮೂರನೇ ಅತಿದೊಡ್ಡ ಆರ್ಥಿಕತೆಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಭಾರತವು "ವಿಶ್ವಬಂಧು" ಆಗಿದ್ದು ಜಾಗತಿಕ ಪ್ರಗತಿ ಮತ್ತು ಯೋಗಕ್ಷೇಮಕ್ಕೆ ಕೊಡುಗೆ ನೀಡುತ್ತಿದೆ ಎಂದು ಪ್ರಧಾನಮಂತ್ರಿಯವರು ಹೇಳಿದರು

ಯು.ಎ.ಇ.ಯು ಇಂದು ಸುಮಾರು 3.5 ದಶಲಕ್ಷ ಅನಿವಾಸಿ ಭಾರತೀಯ ಪ್ರಜೆಗಳಿಗೆ ನೆಲೆಯಾಗಿದೆ. ಇದು ವಿಶ್ವದ ಯಾವುದೇ ಭಾಗದಲ್ಲಿಯಾದರೂ ಇರುವ ಅನಿವಾಸಿ ಭಾರತೀಯ ನಾಗರಿಕರ ಅತಿದೊಡ್ಡ ಜನಸಂಖ್ಯೆಯಾಗಿದೆ. ''ಅಹ್ಲಾನ್ ಮೋದಿ'' ಕಾರ್ಯಕ್ರಮವನ್ನು ನಿಜವಾಗಿಯೂ ಸ್ಮರಣೀಯವಾಗಿಸಲು  ಹಲವಾರು ತಿಂಗಳುಗಳಿಂದ ಸಿದ್ಧತೆಗಳು ನಡೆದಿದೆ.
 

 
* * * *



(Release ID: 2005929) Visitor Counter : 57