ಪ್ರಧಾನ ಮಂತ್ರಿಯವರ ಕಛೇರಿ
ಜೈನ ಧರ್ಮಗುರು ಆಚಾರ್ಯ ಶ್ರೀ 108 ವಿದ್ಯಾಸಾಗರ್ ಜಿ ಮಹಾರಾಜ್ ಅವರು ಸಮಾಧಿಯಾದ ಕುರಿತು ತೀವ್ರ ಸಂತಾಪ ವ್ಯಕ್ತಪಡಿಸಿದ ಪ್ರಧಾನಮಂತ್ರಿ
Posted On:
18 FEB 2024 10:58AM by PIB Bengaluru
ಜೈನ ಧರ್ಮಗುರು ಆಚಾರ್ಯ ವಿದ್ಯಾಸಾಗರ ಮಹಾರಾಜರು ಸಮಾಧಿಯಾಗುತ್ತಿದ್ದಂತೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದರು.
ಆಚಾರ್ಯ ಶ್ರೀ 108 ವಿದ್ಯಾಸಾಗರ್ ಜಿ ಮಹಾರಾಜ್ ಅವರ ನಿಧನವು ದೇಶಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದರು.
ಜನರಲ್ಲಿ ಆಧ್ಯಾತ್ಮಿಕ ಜಾಗೃತಿಗಾಗಿ ಆಚಾರ್ಯ ಜಿಯವರ ಅಮೂಲ್ಯವಾದ ಪ್ರಯತ್ನಗಳು ಯಾವಾಗಲೂ ಸ್ಮರಿಸಲ್ಪಡುತ್ತವೆ. ತಮ್ಮ ಜೀವನದುದ್ದಕ್ಕೂ ಅವರು ಬಡತನ ನಿರ್ಮೂಲನೆ ಹಾಗೂ ಸಮಾಜದಲ್ಲಿ ಆರೋಗ್ಯ ಮತ್ತು ಶಿಕ್ಷಣವನ್ನು ಉತ್ತೇಜಿಸುವಲ್ಲಿ ನಿರತರಾಗಿದ್ದರು ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದರು.
ಕಳೆದ ವರ್ಷ ಛತ್ತೀಸ್ ಗಢದ ಚಂದ್ರಗಿರಿ ಜೈನ ಮಂದಿರದಲ್ಲಿ ಆಚಾರ್ಯ ಶ್ರೀ 108 ವಿದ್ಯಾಸಾಗರ್ ಜೀ ಮಹಾರಾಜ್ ಅವರೊಂದಿಗಿನ ಭೇಟಿಯನ್ನು ಸ್ಮರಿಸಿಕೊಂಡ ಪ್ರಧಾನಮಂತ್ರಿಯವರು ಆ ಭೇಟಿಯು ನನಗೆ ಅವಿಸ್ಮರಣೀಯವಾಗಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದರು.
ಪ್ರಧಾನಮಂತ್ರಿಯವರು ತಮ್ಮ ಎಕ್ಸ್ ಖಾತೆಯಲ್ಲಿ ಈ ರೀತಿ ಸಂದೇಶ ತಿಳಿಸಿದ್ದಾರೆ;
“आचार्य श्री 108 विद्यासागर जी महाराज जी का ब्रह्मलीन होना देश के लिए एक अपूरणीय क्षति है। लोगों में आध्यात्मिक जागृति के लिए उनके बहुमूल्य प्रयास सदैव स्मरण किए जाएंगे। वे जीवनपर्यंत गरीबी उन्मूलन के साथ-साथ समाज में स्वास्थ्य और शिक्षा को बढ़ावा देने में जुटे रहे। यह मेरा सौभाग्य है कि मुझे निरंतर उनका आशीर्वाद मिलता रहा। पिछले वर्ष छत्तीसगढ़ के चंद्रगिरी जैन मंदिर में उनसे हुई भेंट मेरे लिए अविस्मरणीय रहेगी। तब आचार्य जी से मुझे भरपूर स्नेह और आशीष प्राप्त हुआ था। समाज के लिए उनका अप्रतिम योगदान देश की हर पीढ़ी को प्रेरित करता रहेगा।”
"ನನ್ನ ಆಲೋಚನೆಗಳು ಮತ್ತು ಪ್ರಾರ್ಥನೆಗಳು ಆಚಾರ್ಯ ಶ್ರೀ 108 ವಿದ್ಯಾಸಾಗರ ಜೀ ಮಹಾರಾಜ್ ಜಿಯವರ ಅಸಂಖ್ಯಾತ ಭಕ್ತರೊಂದಿಗೆ ಇವೆ. ಸಮಾಜಕ್ಕೆ ಅವರು ನೀಡಿದ ಅಮೂಲ್ಯ ಕೊಡುಗೆಗಳಿಗಾಗಿ, ವಿಶೇಷವಾಗಿ ಜನರಲ್ಲಿ ಆಧ್ಯಾತ್ಮಿಕ ಜಾಗೃತಿಗಾಗಿ ಅವರ ಮಾಡಿದ ಪ್ರಯತ್ನಗಳು ಹಾಗೂ ಬಡತನ ನಿವಾರಣೆ, ಆರೋಗ್ಯ ರಕ್ಷಣೆಗಾಗಿ , ಶಿಕ್ಷಣ ಕ್ಷೇತ್ರದಲ್ಲಿ ಅವರ ನಿರಂತರ ಕೆಲಸಗಳಿಗಾಗಿ ಅವರನ್ನು ಮುಂಬರುವ ಪೀಳಿಗೆಯವರು ನೆನಪಿಸಿಕೊಳ್ಳುತ್ತಾರೆ. ಬಹಳ ವರ್ಷಗಳ ಕಾಲ ಅವರ ಆಶೀರ್ವಾದ ಪಡೆವ ಅವಕಾಶ ನನಗೆ ಸಿಕ್ಕಿತ್ತು. ಕಳೆದ ವರ್ಷದ ಕೊನೆಯಲ್ಲಿ ಛತ್ತೀಸ್ ಗಢದ ಡೊಂಗರ್ ಗಢ್ ನಲ್ಲಿರುವ ಚಂದ್ರಗಿರಿ ಜೈನ ಮಂದಿರಕ್ಕೆ ನಾನು ಭೇಟಿ ನೀಡಿದ್ದನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ. ಆ ಸಮಯದಲ್ಲಿ ನಾನು ಆಚಾರ್ಯ ಶ್ರೀ 108 ವಿದ್ಯಾಸಾಗರ್ ಜಿ ಮಹಾರಾಜ್ ಜಿ ಅವರೊಂದಿಗೆ ಉತ್ತಮ ಸಮಯ ಕಳೆದಿದ್ದೇನೆ ಮತ್ತು ಅವರ ಆಶೀರ್ವಾದವನ್ನೂ ಕೂಡಾ ಪಡೆದಿದ್ದೇನೆ.
(Release ID: 2006917)
Visitor Counter : 89
Read this release in:
English
,
Urdu
,
Marathi
,
Hindi
,
Bengali
,
Manipuri
,
Assamese
,
Punjabi
,
Gujarati
,
Odia
,
Tamil
,
Telugu
,
Malayalam