ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

​​​​​​​ಟೆಸ್ಟ್ ಕ್ರಿಕೆಟ್ ನಲ್ಲಿ 500 ವಿಕೆಟ್ ಪಡೆದ ಕ್ರಿಕೆಟ್ ಪಟು ರವಿಚಂದ್ರನ್ ಅಶ್ವಿನ್ ರನ್ನು ಅಭಿನಂದಿಸಿದ ಪ್ರಧಾನಿ

प्रविष्टि तिथि: 16 FEB 2024 8:37PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಟೆಸ್ಟ್ ಕ್ರಿಕೆಟ್ ನಲ್ಲಿ 500 ವಿಕೆಟ್ ಗಳನ್ನು ಪಡೆದ ಭಾರತೀಯ ಕ್ರಿಕೆಟ್ ಪಟು ರವಿಚಂದ್ರನ್ ಅಶ್ವಿನ್ ಅವರನ್ನು ಅಭಿನಂದಿಸಿದ್ದಾರೆ.

ಅಶ್ವಿನ್ ಅವರ ಪಯಣ ಮತ್ತು ಸಾಧನೆ ಅವರ ಕೌಶಲ್ಯ ಮತ್ತು ಬದ್ಧತೆಗೆ ಸಾಕ್ಷಿಯಾಗಿದೆ ಎಂದು ಹೇಳಿದ್ದಾರೆ.

ಪ್ರಧಾನಮಂತ್ರಿ ತಮ್ಮ ಸಾಮಾಜಿಕ ಜಾಲತಾಣ  X ನಲ್ಲಿ ಹೀಗೆ ಹೇಳಿದ್ದಾರೆ.

“"500 ಟೆಸ್ಟ್ ವಿಕೆಟ್‌ಗಳನ್ನು ಪಡೆದು ಅಸಾಧಾರಣ ಮೈಲಿಗಲ್ಲು ಸ್ಥಾಪಿಸಿರುವ ರವಿಚಂದ್ರನ್ ಅಶ್ವಿನ್ ಅವರಿಗೆ ಅಭಿನಂದನೆಗಳು! ಅವರ ಪಯಣ ಮತ್ತು ಸಾಧನೆಗಳು ಅವರ ಕೌಶಲ್ಯ ಮತ್ತು ಪರಿಶ್ರಮಕ್ಕೆ ಸಾಕ್ಷಿಯಾಗಿದೆ. ಅವರು ಸಾಧನೆಯಲ್ಲಿ ಮತ್ತಷ್ಟು ಶಿಖರಗಳನ್ನು ಏರಲು ನನ್ನ ಶುಭಾಶಯಗಳು’’

***


(रिलीज़ आईडी: 2007036) आगंतुक पटल : 103
इस विज्ञप्ति को इन भाषाओं में पढ़ें: Tamil , Malayalam , Assamese , Odia , English , Urdu , Marathi , हिन्दी , Bengali , Manipuri , Punjabi , Gujarati , Telugu