ಪ್ರಧಾನ ಮಂತ್ರಿಯವರ ಕಛೇರಿ
ಲಖಿಸರಾಯ್ ರಸ್ತೆ ಅಪಘಾತದಲ್ಲಿ ಆದ ಜೀವಹಾನಿಗೆ ಪ್ರಧಾನಿಯವರಿಂದ ಸಂತಾಪ ಸೂಚನೆ
प्रविष्टि तिथि:
21 FEB 2024 12:37PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಬಿಹಾರದ ಲಖಿಸರಾಯ್ ರಸ್ತೆ ಅಪಘಾತದಲ್ಲಿ ಮಡಿದವರ ಜೀವಹಾನಿಗೆ ದುಃಖ ವ್ಯಕ್ತಪಡಿಸಿದ್ದಾರೆ.
ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಅವರು ಪ್ರಾರ್ಥಿಸಿದರು.
ಪ್ರಧಾನ ಮಂತ್ರಿಯವರ ಕಛೇರಿಯು Xನಲ್ಲಿ:
"ಬಿಹಾರದ ಲಖಿಸರಾಯ್ ನಲ್ಲಿ ನಡೆದ ರಸ್ತೆ ಅಪಘಾತವು ತುಂಬಾ ದುಃಖಕರವಾಗಿದೆ. ಈ ಅಪಘಾತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನನ್ನ ಸಂತಾಪಗಳು. ಗಾಯಗೊಂಡವರೆಲ್ಲರೂ ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ. ರಾಜ್ಯ ಸರ್ಕಾರದ ಮೇಲ್ವಿಚಾರಣೆಯಲ್ಲಿ ಸ್ಥಳೀಯವಾಗಿ ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ದೊರಕಿಸಲು ನಿಯೋಜಿಸಲಾಗಿದೆ" ಎಂದು ಪೋಸ್ಟ್ ಮಾಡಿದೆ.
***
(रिलीज़ आईडी: 2007626)
आगंतुक पटल : 98
इस विज्ञप्ति को इन भाषाओं में पढ़ें:
English
,
Urdu
,
हिन्दी
,
Marathi
,
Assamese
,
Manipuri
,
Bengali
,
Punjabi
,
Gujarati
,
Odia
,
Tamil
,
Telugu
,
Malayalam