ಪರಿಸರ ಮತ್ತು ಅರಣ್ಯ ಸಚಿವಾಲಯ
ಮಾನವ-ಪ್ರಾಣಿ ಸಂಘರ್ಷವನ್ನು ತಪ್ಪಿಸಲು ತಂತ್ರಜ್ಞಾನದ ಜಾಗರೂಕತೆಯ ಬಳಕೆ ಮತ್ತು ಪ್ರಾಣಿಗಳ ಬಗ್ಗೆ ಸಹಾನುಭೂತಿಯ ವಿಧಾನವು ಅಗತ್ಯವಿದೆ ಎಂದು ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವ ಶ್ರೀ ಭೂಪೇಂದರ್ ಯಾದವ್ ಅವರು ಹೇಳಿದರು
प्रविष्टि तिथि:
21 FEB 2024 3:19PM by PIB Bengaluru
ಪ್ರಸ್ತುತ ನಡೆಯುತ್ತಿರುವ ಮಾನವ-ಪ್ರಾಣಿ ಸಂಘರ್ಷವನ್ನು ವನ್ಯಜೀವಿಗಳ ಬಗ್ಗೆ ಸಹಾನುಭೂತಿಯಿಂದ ತಂತ್ರಜ್ಞಾನದ ಜಾಗರೂಕತೆಯ ಬಳಕೆಯೊಂದಿಗೆ ಪರಿಹರಿಸಬಹುದು ಎಂದು ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವ ಶ್ರೀ ಭೂಪೇಂದರ್ ಯಾದವ್ ಅವರು ಹೇಳಿದ್ದಾರೆ.
ಇಂದು ಬೆಳಗ್ಗೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಶ್ರೀ ಯಾದವ್ ಅವರು, ವಿಶೇಷವಾಗಿ ವಯನಾಡು ಮತ್ತು ಬಂಡೀಪುರ ಹಾಗೂ ವಯನಾಡಿನ ಗಡಿಪ್ರದೇಶಗಳಲ್ಲಿ ಪ್ರಾಣಿ-ಮಾನವ ಸಂಘರ್ಷ ನಡೆಯುತ್ತಿರುವುದು ನಮಗೆ ತಿಳಿದು ಬಂದಿದೆ ಎಂದು ಹೇಳಿದರು.
.
“ಸದ್ಯ ನಡೆಯುತ್ತಿರುವ ಮನುಷ್ಯ-ಪ್ರಾಣಿ ಸಂಘರ್ಷವನ್ನು ಪರಿಹರಿಸಲು, ನಾವು ತಂತ್ರಜ್ಞಾನವನ್ನು ಜಾಗರೂಕತೆಯಿಂದ ಬಳಸಬೇಕು ಮತ್ತು ಪ್ರಾಣಿಗಳ ಬಗ್ಗೆ ಸಹಾನುಭೂತಿಯ ವಿಧಾನವನ್ನು ಅಳವಡಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಸಲಹೆಗಳನ್ನು ನೀಡಿದೆ”. ಎಂದು ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವ ಶ್ರೀ ಭೂಪೇಂದರ್ ಯಾದವ್ ಅವರು ಹೇಳಿದರು.
“ಪರಿಸ್ಥಿತಿ ತುಂಬಾ ಗಂಭೀರವಾಗಿದೆ. ಈ ಕುರಿತು ಸಚಿವಾಲಯದ ಅಧಿಕಾರಿಗಳಿಂದ ನನಗೆ ಪ್ರಸ್ತುತ ಪರಿಸ್ಥಿತಿಯ ಬಗ್ಗೆ ಮಾಹಿತಿ ತಿಳಿಸಲಾಗಿದೆ. ನಾನು ಡಬ್ಲ್ಯೂ ಐಐ ಸಂಸ್ಥೆಯ ಹಿರಿಯ ವಿಜ್ಞಾನಿಗಳು, ಸಚಿವಾಲಯದ ಅಧಿಕಾರಿಗಳು ಮತ್ತು ರಾಜ್ಯದ ಅಧಿಕಾರಿಗಳನ್ನು ಪರಿಸ್ಥಿತಿಯ ಕುರಿತು ಚರ್ಚಿಸಲು ಸಭೆ ಕರೆದಿದ್ದೇನೆ. ನಾವು ಈ ಕುರಿತು ಕಾಳಜಿ ವಹಿಸುತ್ತೇವೆ. ”
ಸಂತ್ರಸ್ತರನ್ನು ಭೇಟಿ ಮಾಡಿ ಕೇಂದ್ರ ಸರ್ಕಾರ ನೀಡಿರುವ ಪರಿಹಾರವು ಸಂತ್ರಸ್ತರಿಗೆ ಸಕಾರಾತ್ಮಕವಾಗಿ ನೇರವಾಗಿ ತಲುಪುವುದನ್ನು ಖಚಿತಪಡಿಸಿಕೊಳ್ಳುವುದಾಗಿ ಕೇಂದ್ರ ಸಚಿವರು ಈ ಸಂದರ್ಭದಲ್ಲಿ ಹೇಳಿದರು.
** **
(रिलीज़ आईडी: 2007721)
आगंतुक पटल : 98