ಪ್ರಧಾನ ಮಂತ್ರಿಯವರ ಕಛೇರಿ
ಬ್ಯಾಡ್ಮಿಂಟನ್ ಏಷ್ಯಾ ಚಾಂಪಿಯನ್ ಶಿಪ್ ನಲ್ಲಿ ಮಹಿಳಾ ತಂಡ ಟ್ರೋಫಿ ಗೆದ್ದ ಭಾರತೀಯ ತಂಡಕ್ಕೆ ಪ್ರಧಾನಿ ಅಭಿನಂದನೆ
प्रविष्टि तिथि:
18 FEB 2024 9:39PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಬ್ಯಾಡ್ಮಿಂಟನ್ ಏಷ್ಯಾ ಚಾಂಪಿಯನ್ ಶಿಪ್ ನಲ್ಲಿ ಮಹಿಳಾ ತಂಡ ಟ್ರೋಫಿಯನ್ನು ಗೆಲ್ಲುವ ಮೂಲಕ ಇತಿಹಾಸ ಸೃಷ್ಟಿಸಿದ ಭಾರತೀಯ ತಂಡವನ್ನು ಅಭಿನಂದಿಸಿದ್ದಾರೆ.
ನಾರಿ ಶಕ್ತಿಯು ಕ್ರೀಡೆಯಲ್ಲಿ ಉತ್ತಮ ಸಾಧನೆ ಮಾಡಿದೆ ಎಂದು ಅವರು ಶ್ಲಾಘಿಸಿದರು.
ಪ್ರಧಾನಮಂತ್ರಿಯವರು X ನಲ್ಲಿ ಪೋಸ್ಟ್ ಮಾಡಿದ್ದಾರೆ:
"ಇದೊಂದು ಐತಿಹಾಸಿಕ ಸಾಧನೆ!
ಬ್ಯಾಡ್ಮಿಂಟನ್ ಏಷ್ಯಾ ಚಾಂಪಿಯನ್ಶಿಪ್ನಲ್ಲಿ ಮೊದಲ ಬಾರಿಗೆ ಮಹಿಳಾ ತಂಡ ಟ್ರೋಫಿಯನ್ನು ಗೆದ್ದ ಅದ್ಭುತ ಭಾರತೀಯ ತಂಡಕ್ಕೆ ಅಭಿನಂದನೆಗಳು. ಅವರ ಯಶಸ್ಸು ಮುಂಬರುವ ಹಲವಾರು ಕ್ರೀಡಾಪಟುಗಳಿಗೆ ಸ್ಫೂರ್ತಿ ನೀಡುತ್ತದೆ.
ನಮ್ಮ ನಾರಿ ಶಕ್ತಿ ವಿವಿಧ ಕ್ರೀಡೆಗಳಲ್ಲಿ ಉತ್ತಮ ಸಾಧನೆ ಮಾಡುತ್ತಿರುವ ರೀತಿ ಅದ್ಭುತವಾಗಿದೆ.
***
(रिलीज़ आईडी: 2007725)
आगंतुक पटल : 106
इस विज्ञप्ति को इन भाषाओं में पढ़ें:
Odia
,
English
,
Urdu
,
Marathi
,
हिन्दी
,
Bengali
,
Assamese
,
Manipuri
,
Punjabi
,
Gujarati
,
Tamil
,
Telugu
,
Malayalam