ಪ್ರಧಾನ ಮಂತ್ರಿಯವರ ಕಛೇರಿ
ಮಧ್ಯಪ್ರದೇಶದ ದಿಂಡೋರಿಯಲ್ಲಿ ಭೀಕರ ರಸ್ತೆ ಅಪಘಾತ: ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ
प्रविष्टि तिथि:
29 FEB 2024 1:14PM by PIB Bengaluru
ಮಧ್ಯಪ್ರದೇಶದ ದಿಂಡೋರಿ ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪರಿಹಾರ ಘೋಷಿಸಿದ್ದಾರೆ.
ಪ್ರಧಾನ ಮಂತ್ರಿ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ(PMNRF)ಯಿಂದ ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಹಾಗೂ ಗಾಯಗೊಂಡವರ ಚಿಕಿತ್ಸೆಗೆ ತಲಾ 50 ಸಾವಿರ ರೂಪಾಯಿ ಪರಿಹಾರ ಘೋಷಿಸಲಾಗಿದೆ.
ಈ ಕುರಿತು ಟ್ವೀಟ್ ಮೂಲಕ ಪ್ರಕಟಿಸಿರುವ ಪ್ರಧಾನ ಮಂತ್ರಿ ಕಾರ್ಯಾಲಯವು,
ಮಧ್ಯ ಪ್ರದೇಶದ ದಿಂಡೋರಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟ ಪ್ರತಿಯೊಬ್ಬರ ಕುಟುಂಬಸ್ಥರಿಗೆ ತಲಾ 2 ಲಕ್ಷ ರೂಪಾಯಿ ಹಾಗೂ ಗಾಯಾಳುಗಳಿಗೆ ತಲಾ 50 ಸಾವಿರ ರೂಪಾಯಿ ನೀಡಲಾಗುವುದು ಎಂದು ತಿಳಿಸಿದೆ.
***
(रिलीज़ आईडी: 2010179)
आगंतुक पटल : 91
इस विज्ञप्ति को इन भाषाओं में पढ़ें:
Odia
,
English
,
Urdu
,
हिन्दी
,
Marathi
,
Manipuri
,
Bengali
,
Assamese
,
Punjabi
,
Gujarati
,
Tamil
,
Telugu
,
Malayalam