ಪ್ರಧಾನ ಮಂತ್ರಿಯವರ ಕಛೇರಿ

ಭಾರತದಲ್ಲಿ ಚಿರತೆಗಳ ಸಂಖ್ಯೆ ಹೆಚ್ಚಾಗುತ್ತಿರುವುದಕ್ಕೆ ಸಂತಸ ವ್ಯಕ್ತಪಡಿಸಿದ ಪ್ರಧಾನಮಂತ್ರಿ


ವನ್ಯಜೀವಿ ಸಂರಕ್ಷಣೆಗಾಗಿ ವಿವಿಧ ಸಾಮೂಹಿಕ ಪ್ರಯತ್ನಗಳ ಭಾಗವಾಗಿರುವ ಎಲ್ಲರಿಗೂ ಶ್ಲಾಘನೆಗಳು

Posted On: 29 FEB 2024 8:54PM by PIB Bengaluru

ಭಾರತದಲ್ಲಿ ಚಿರತೆಗಳ ಸಂಖ್ಯೆ ಹೆಚ್ಚಾಗುತ್ತಿರುವುದಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಸ ವ್ಯಕ್ತಪಡಿಸಿದ್ದಾರೆ. ಚಿರತೆಗಳ ಸಂಖ್ಯೆಯಲ್ಲಿನ ಈ ಗಮನಾರ್ಹ ಹೆಚ್ಚಳವು ಜೀವವೈವಿಧ್ಯತೆಯ ಬಗ್ಗೆ ಭಾರತದ ಅಚಲವಾದ ಸಮರ್ಪಣೆಗೆ ಸಾಕ್ಷಿಯಾಗಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ.

ವನ್ಯಜೀವಿ ಸಂರಕ್ಷಣೆಯ ವಿವಿಧ ಸಾಮೂಹಿಕ ಪ್ರಯತ್ನಗಳಲ್ಲಿ ಭಾಗವಾಗಿರುವ ಎಲ್ಲರಿಗೂ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದನೆ ಸಲ್ಲಿಸಿದ್ದಾರೆ.

ಭಾರತದ ಚಿರತೆಗಳ ಸಂಖ್ಯೆಯು 2018 ರ ಅಂಕಿಅಂಶಗಳ ಪ್ರಕಾರ ಇದ್ದ ಸಂಖ್ಯೆ 12,852 ರಷ್ಟು, ಅವುಗಳು ಪ್ರಸ್ತುತ 13,874 ರಷ್ಟಾಗಿವೆ ಎಂದು ಅಂದಾಜಿಸಲಾಗಿದೆ,

ಇಂದು ಭಾರತದಲ್ಲಿ ಚಿರತೆಗಳ ಸ್ಥಿತಿಯ ವರದಿಯ ಕುರಿತು ಪ್ರತಿಕ್ರಿಯಿಸಿದ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆಯ ಸಚಿವ ಶ್ರೀ ಭೂಪೇಂದರ್ ಯಾದವ್ ಅವರು, 3,907 ಚಿರತೆಗಳನ್ನು ಹೊಂದಿರುವ ಮಧ್ಯಪ್ರದೇಶ ಮೂಲಕ ಮಧ್ಯ ಭಾರತದಲ್ಲಿ ಅತಿ ಹೆಚ್ಚು ಚಿರತೆಗಳ ಸಂಖ್ಯೆಯನ್ನು ದಾಖಲಿಸಿದೆ ಎಂದು ತಮ್ಮ ಎಕ್ಸ್ ಖಾತೆಯ  ಸಂದೇಶ ಮೂಲಕ ತಿಳಿಸಿದರು.

ಕೇಂದ್ರ ಸಚಿವರ ಎಕ್ಸ್ ಖಾತೆಯ ಸಂದೇಶಕ್ಕೆ ಸ್ಪಂದಿಸಿ ಪ್ರತಿಕ್ರಿಯಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು , ಈ ರೀತಿ ತಿಳಿಸಿದ್ದಾರೆ;

“ಒಳ್ಳೆಯ ಸುದ್ದಿ! ಚಿರತೆ ಸಂಖ್ಯೆಯಲ್ಲಿನ ಈ ಗಮನಾರ್ಹ ಹೆಚ್ಚಳವು ಜೀವವೈವಿಧ್ಯತೆಗೆ ಭಾರತದ ಅಚಲವಾದ ಸಮರ್ಪಣೆಗೆ ಸಾಕ್ಷಿಯಾಗಿದೆ. ಸುಸ್ಥಿರ ಸಹಬಾಳ್ವೆಗೆ ದಾರಿ ಮಾಡಿಕೊಡುವ, ವನ್ಯಜೀವಿ ಸಂರಕ್ಷಣೆಯ ವಿವಿಧ ಸಾಮೂಹಿಕ ಪ್ರಯತ್ನಗಳಲ್ಲಿ ಭಾಗವಾಗಿರುವ ಎಲ್ಲರನ್ನು ನಾನು ಅಭಿನಂದಿಸುತ್ತೇನೆ.”

*******



(Release ID: 2010581) Visitor Counter : 35