ಪ್ರಧಾನ ಮಂತ್ರಿಯವರ ಕಛೇರಿ
ಒಡಿಶಾ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಜನ್ಮದಿನಾಚರಣೆ: ಪ್ರಧಾನಿ ಮೋದಿ ಗೌರವ
Posted On:
05 MAR 2024 9:44AM by PIB Bengaluru
ಒಡಿಶಾ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಜನ್ಮದಿನದಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಗೌರವ ನಮನ ಸಲ್ಲಿಸಿದ್ದಾರೆ.
ದಂತಕಥೆ ಬಿಜು ಪಟ್ನಾಯಕ್ ಅವರ ದೂರದೃಷ್ಟಿಯ ನಾಯಕತ್ವ ಮತ್ತು ಅದಮ್ಯ ಮನೋಭಾವವು ಪೀಳಿಗೆಗೆ ಸ್ಫೂರ್ತಿ ನೀಡುತ್ತಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಟ್ವಿಟ್ಟರ್ ನಲ್ಲಿ ಬರೆದುಕೊಂಡಿರುವ ಪ್ರಧಾನ ಮಂತ್ರಿಗಳು,
“ದಂತಕಥೆ ಬಿಜು ಪಟ್ನಾಯಕ್ ಅವರ ಜನ್ಮ ದಿನಾಚರಣೆಯಂದು ಅವರಿಗೆ ಗೌರವ ನಮನಗಳನ್ನು ಸಲ್ಲಿಸುತ್ತೇನೆ. ಅವರ ದೂರದೃಷ್ಟಿಯ ನಾಯಕತ್ವ ಮತ್ತು ಅದಮ್ಯ ಮನೋಭಾವವು ಪೀಳಿಗೆಗೆ ಸ್ಫೂರ್ತಿ ನೀಡುತ್ತಲೇ ಇದೆ. ನಮ್ಮ ರಾಷ್ಟ್ರಕ್ಕೆ ಅವರ ಕೊಡುಗೆಗಳು ಮತ್ತು ಅಭಿವೃದ್ಧಿಪರ ಅವರ ಅಚಲ ಬದ್ಧತೆ ಅನುಕರಣೀಯ. ಇಂದು, ಈ ವಿಶೇಷ ದಿನದಂದು, ಚಂಡಿಖೋಲೆಯಲ್ಲಿ ವಿವಿಧ ಯೋಜನೆಗಳನ್ನು ಉದ್ಘಾಟಿಸುತ್ತಿರುವುದು ಒಡಿಶಾದ ಜನರ ಮಧ್ಯೆ ಇರಲು ನಾನು ಎದುರು ನೋಡುತ್ತಿದ್ದೇನೆ. ನಾನು ಇಂದು @BJP4Odisha ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದೇನೆ'' ಎಂದು ತಿಳಿಸಿದ್ದಾರೆ.
(Release ID: 2011682)
Visitor Counter : 71
Read this release in:
Hindi
,
English
,
Urdu
,
Marathi
,
Bengali-TR
,
Bengali
,
Manipuri
,
Assamese
,
Punjabi
,
Gujarati
,
Odia
,
Tamil
,
Telugu
,
Malayalam
,
Malayalam