ಪ್ರಧಾನ ಮಂತ್ರಿಯವರ ಕಛೇರಿ

ಅಂತಾರಾಷ್ಟ್ರೀಯ ಮಹಿಳಾ ದಿನದಂದು ಎಲ್ ಪಿಜಿ ಸಿಲಿಂಡರ್ ಬೆಲೆಯನ್ನು 100 ರೂ.ಗಳಷ್ಟು ಕಡಿಮೆ ಮಾಡುವುದಾಗಿ ಘೋಷಿಸಿದ ಪ್ರಧಾನಮಂತ್ರಿ.

Posted On: 08 MAR 2024 8:52AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಅಂತಾರಾಷ್ಟ್ರೀಯ ಮಹಿಳಾ ದಿನದಂದು ಎಲ್ ಪಿಜಿ ಸಿಲಿಂಡರ್ ಬೆಲೆಯನ್ನು ರೂ. 100 ರಷ್ಟು ಕಡಿಮೆ ಮಾಡುವ ಮಹತ್ತರವಾದ ನಿರ್ಧಾರವನ್ನು ಸರ್ಕಾರ ತೆಗೆದುಕೊಂಡಿದೆ ಎಂದು ಹೇಳಿದರು. ಇದು ದೇಶಾದ್ಯಂತ ಲಕ್ಷಾಂತರ ಕುಟುಂಬಗಳ ಮೇಲೆ ಆರ್ಥಿಕ ಹೊರೆಯನ್ನು ಗಮನಾರ್ಹವಾಗಿ ಕಡಿಮೆ ಮಾಡುತ್ತದೆ, ವಿಶೇಷವಾಗಿ ನಮ್ಮ ನಾರಿ ಶಕ್ತಿಗೆ ಪ್ರಯೋಜನವನ್ನು ನೀಡುತ್ತದೆ ಎಂದು ಅವರು ಹೇಳಿದರು.

ಪ್ರಧಾನಮಂತ್ರಿಯವರು;

“महिला दिवस के अवसर पर आज हमने एलपीजी सिलेंडर की कीमतों में 100 रुपये की छूट का बड़ा फैसला किया है। इससे नारी शक्ति का जीवन आसान होने के साथ ही करोड़ों परिवारों का आर्थिक बोझ भी कम होगा। यह कदम पर्यावरण संरक्षण में भी मददगार बनेगा, जिससे पूरे परिवार का स्वास्थ्य भी बेहतर रहेगा।”

"ಇಂದು, ಮಹಿಳಾ ದಿನದಂದು, ನಮ್ಮ ಸರ್ಕಾರ ಎಲ್ ಪಿಜಿ ಸಿಲಿಂಡರ್ ಬೆಲೆಯನ್ನು 100 ರೂ.ಗಳಷ್ಟು ಕಡಿಮೆ ಮಾಡಲು ನಿರ್ಧರಿಸಿದೆ. ಇದು ದೇಶಾದ್ಯಂತ ಲಕ್ಷಾಂತರ ಕುಟುಂಬಗಳ ಮೇಲಿನ ಆರ್ಥಿಕ ಹೊರೆಯನ್ನು ಗಮನಾರ್ಹವಾಗಿ ಕಡಿಮೆ ಮಾಡಿ, ವಿಶೇಷವಾಗಿ ನಮ್ಮ ನಾರಿ ಶಕ್ತಿಗೆ ಪ್ರಯೋಜನವನ್ನು ನೀಡುತ್ತದೆ.

ಅಡುಗೆ ಅನಿಲವನ್ನು ಕೈಗೆಟುಕುವಂತೆ ಮಾಡುವ ಮೂಲಕ, ಕುಟುಂಬಗಳ ಯೋಗಕ್ಷೇಮವನ್ನು ಬೆಂಬಲಿಸುವ ಮತ್ತು ಆರೋಗ್ಯಕರ ವಾತಾವರಣವನ್ನು ನಿರ್ಮಿಸುವ ಗುರಿಯನ್ನು ನಾವು ಹೊಂದಿದ್ದೇವೆ. ಇದು ಮಹಿಳೆಯರನ್ನು ಸಬಲೀಕರಣಗೊಳಿಸಿ, ಅವರಿಗೆ 'ಸುಗಮ ಜೀವನ'ವನ್ನು ಖಾತ್ರಿಪಡಿಸುವ ನಮ್ಮ ಬದ್ಧತೆಗೆ ಅನುಗುಣವಾಗಿದೆ" ಎಂದು Xನಲ್ಲಿ ಪೋಸ್ಟ್ ಮಾಡಿದ್ದಾರೆ.

***

 

 



(Release ID: 2012635) Visitor Counter : 48