ಪ್ರಧಾನ ಮಂತ್ರಿಯವರ ಕಛೇರಿ
ಭಾರತ-ಇ.ಎಫ್.ಟಿ.ಎ. ವ್ಯಾಪಾರ ಮತ್ತು ಆರ್ಥಿಕ ಪಾಲುದಾರಿಕೆ ಒಪ್ಪಂದವು ಆರ್ಥಿಕ ಪ್ರಗತಿಯನ್ನು ಹೆಚ್ಚಿಸಲು ಮತ್ತು ನಮ್ಮ ಯುವಕರಿಗೆ ಅವಕಾಶಗಳನ್ನು ಸೃಷ್ಟಿಸುವ ನಿಟ್ಟಿನಲ್ಲಿ ನಾವು ಹೊಂದಿರುವ ಬದ್ಧತೆಯನ್ನು ತೋರಿಸುತ್ತದೆ: ಪ್ರಧಾನಮಂತ್ರಿ
Posted On:
10 MAR 2024 8:15PM by PIB Bengaluru
ಭಾರತ-ಇ.ಎಫ್.ಟಿ.ಎ. ರಾಷ್ಟ್ರಗಳೊಂದಿಗೆ ವ್ಯಾಪಾರ ಮತ್ತು ಆರ್ಥಿಕ ಪಾಲುದಾರಿಕೆ ಒಪ್ಪಂದಕ್ಕೆ ಸಹಿ ಹಾಕಿರುವುದನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಶ್ಲಾಘಿಸಿದರು.
ಒಪ್ಪಂದಕ್ಕೆ ಸಹಿ ಹಾಕುವ ಬಗ್ಗೆ ತಮ್ಮ ಸಂದೇಶವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹಂಚಿಕೊಂಡಿದ್ದಾರೆ.
ಕೇಂದ್ರ ಸಚಿವ ಶ್ರೀ ಪಿಯೂಷ್ ಗೋಯೆಲ್ ಅವರ ತಮ್ಮ ಎಕ್ಸ್ ಖಾತೆಯಲ್ಲಿ ಹಾಕಿದ ಸಂದೇಶಕ್ಕೆ ಸ್ಪಂದಿಸಿ ಪ್ರಧಾನಮಂತ್ರಿಯವರು ಈ ರೀತಿ ಪ್ರತಿಕ್ರಯಿಸಿದ್ದಾರೆ:
" ಭಾರತ-ಇ.ಎಫ್.ಟಿ.ಎ. ರಾಷ್ಟ್ರಗಳೊಂದಿಗೆ ವ್ಯಾಪಾರ ಮತ್ತು ಆರ್ಥಿಕ ಪಾಲುದಾರಿಕೆ ಒಪ್ಪಂದಕ್ಕೆ ಸಹಿ ಹಾಕಿರುವುದು ಸಂತೋಷದ ವಿಷಯವಾಗಿದೆ. ಈ ಹೆಗ್ಗುರುತು ಒಪ್ಪಂದವು ಆರ್ಥಿಕ ಪ್ರಗತಿಯನ್ನು ಹೆಚ್ಚಿಸಲು ಮತ್ತು ನಮ್ಮ ಯುವಕರಿಗೆ ಅವಕಾಶಗಳನ್ನು ಸೃಷ್ಟಿಸುವ ನಿಟ್ಟಿನಲ್ಲಿರುವ ನಮ್ಮ ಬದ್ಧತೆಯನ್ನು ಒತ್ತಿಹೇಳುತ್ತದೆ. ನಾವು ಇ.ಎಫ್.ಟಿ.ಎ. ರಾಷ್ಟ್ರಗಳೊಂದಿಗೆ ನಮ್ಮ ಬಾಂಧವ್ಯವನ್ನು ಬಲಪಡಿಸಿದಾಗ, ಮುಂಬರುವ ಸಮಯವು ಹೆಚ್ಚು ಸಮೃದ್ಧಿ ಮತ್ತು ಪರಸ್ಪರ ಬೆಳವಣಿಗೆಯನ್ನು ತರುತ್ತದೆ. "
***
(Release ID: 2013433)
Visitor Counter : 96
Read this release in:
Tamil
,
Assamese
,
English
,
Urdu
,
Marathi
,
Hindi
,
Bengali
,
Manipuri
,
Punjabi
,
Gujarati
,
Odia
,
Telugu
,
Malayalam