ಪ್ರಧಾನ ಮಂತ್ರಿಯವರ ಕಛೇರಿ

ಅಪಹರಣಕ್ಕೊಳಗಾದ ಬಲ್ಗೇರಿಯನ್ ಹಡಗು “ರುಯೆನ್” ಅನ್ನು ರಕ್ಷಿಸಿದ ಭಾರತೀಯ ನೌಕಾಪಡೆಯ ಕುರಿತು ಸ್ಪಂದಿಸಿದ ಬಲ್ಗೇರಿಯಾ ಗಣರಾಜ್ಯದ  ಅಧ್ಯಕ್ಷರಿಗೆ ಪ್ರತಿಸ್ಪಂದಿಸಿದ ಪ್ರಧಾನಮಂತ್ರಿ 

Posted On: 19 MAR 2024 10:33AM by PIB Bengaluru

ಅಪಹರಣಕ್ಕೊಳಗಾದ ಬಲ್ಗೇರಿಯನ್ ಹಡಗು "ರುಯೆನ್" ಅನ್ನು ಮತ್ತು 7 ಬಲ್ಗೇರಿಯನ್ ನಾಗರಿಕರು ಸೇರಿದಂತೆ ಅದರ ಸಿಬ್ಬಂದಿ ವರ್ಗವನ್ನು ರಕ್ಷಿಸಿದ ಭಾರತೀಯ ನೌಕಾಪಡೆಯ ಕುರಿತು ಸಂದೇಶ ನೀಡಿದ ಬಲ್ಗೇರಿಯಾ ಗಣರಾಜ್ಯದ ಅಧ್ಯಕ್ಷ ಶ್ರೀ ರುಮೆನ್ ರಾದೇವ್ ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪ್ರತಿಸ್ಪಂದಿಸಿ, ಮೆಚ್ಚುಗೆ ವ್ಯಕ್ತಪಡಿಸಿದರು.

ನೌಕಾಯಾನದ ಸ್ವಾತಂತ್ರ್ಯವನ್ನು ರಕ್ಷಿಸಲು ಮತ್ತು ಹಿಂದೂ ಮಹಾಸಾಗರ ಪ್ರದೇಶದಲ್ಲಿ ಕಡಲು ಕಳ್ಳತನ ಮತ್ತು ಭಯೋತ್ಪಾದನೆಯನ್ನು ಎದುರಿಸಲು ಭಾರತದ ಬದ್ಧತೆಯನ್ನು ಪ್ರಧಾನಮಂತ್ರಿಯವರು ಈ ಸಂದರ್ಭದಲ್ಲಿ ಸ್ಮರಿಸಿಕೊಂಡರು.

ಪ್ರಧಾನಮಂತ್ರಿಯವರು ತಮ್ಮ ಎಕ್ಸ್ ಖಾತೆಯಲ್ಲಿ ಈ ರೀತಿ ಸಂದೇಶ ತಿಳಿಸಿದ್ದಾರೆ: 

“ರಿಪಬ್ಲಿಕ್ ಆಫ್ ಬಲ್ಗೇರಿಯಾ ಅಧ್ಯಕ್ಷರೇ, ತಮ್ಮ ಸಂದೇಶವನ್ನು ಶ್ಲಾಘಿಸುತ್ತೇನೆ. 7 ಬಲ್ಗೇರಿಯನ್ ಪ್ರಜೆಗಳು ಸುರಕ್ಷಿತವಾಗಿದ್ದಾರೆ ಮತ್ತು ಶೀಘ್ರದಲ್ಲೇ ಮನೆಗೆ ಮರಳುತ್ತಿದ್ದಾರೆ ಎಂದು ತಿಳಿದು ಬಹಳ ಸಂತೋಷವಾಗಿದೆ. ಭಾರತವು ಸಮುದ್ರಯಾನದ ಸ್ವಾತಂತ್ರ್ಯವನ್ನು ರಕ್ಷಿಸಲು ಮತ್ತು ಹಿಂದೂ ಮಹಾಸಾಗರ ಪ್ರದೇಶದಲ್ಲಿ ಕಡಲ್ಗಳ್ಳತನ ಮತ್ತು ಭಯೋತ್ಪಾದನೆಯನ್ನು ಎದುರಿಸಲು ಕಟಿಬದ್ಧವಾಗಿದೆ.

*****



(Release ID: 2015554) Visitor Counter : 66