ಪ್ರಧಾನ ಮಂತ್ರಿಯವರ ಕಛೇರಿ
ಯುಕೆ(ಇಂಗ್ಲೆಂಡ್) ಪ್ರಧಾನಿ ರಿಷಿ ಸುನಕ್ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಮಾತುಕತೆ
ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸುವ ಮಾರ್ಗಗಳ ಬಗ್ಗೆ ನಾಯಕರು ಚರ್ಚಿಸಿದರು
ಮುಕ್ತ ವ್ಯಾಪಾರ ಒಪ್ಪಂದದ ಕುರಿತು ನಡೆಯುತ್ತಿರುವ ಚರ್ಚೆಯ ಪ್ರಗತಿಯನ್ನು ಉಭಯ ನಾಯಕರು ಸ್ವಾಗತಿಸಿದರು
ಇಬ್ಬರೂ ನಾಯಕರು ಪರಸ್ಪರ ಹಿತಾಸಕ್ತಿಯ ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಬಗ್ಗೆ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು
Posted On:
12 MAR 2024 8:43PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಯುನೈಟೆಡ್ ಕಿಂಗ್ ಡಮ್ ನ ಪ್ರಧಾನಮಂತ್ರಿ ಗೌರವಾನ್ವಿತ ರಿಷಿ ಸುನಕ್ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದರು.
ದ್ವಿಪಕ್ಷೀಯ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯನ್ನು ಬಲಪಡಿಸುವುದನ್ನು ಮುಂದುವರಿಸುವ ಬದ್ಧತೆಯನ್ನು ನಾಯಕರು ಪುನರುಚ್ಚರಿಸಿದರು. ವ್ಯಾಪಾರ, ಹೂಡಿಕೆ, ರಕ್ಷಣೆ, ಭದ್ರತೆ, ಉದಯೋನ್ಮುಖ ತಂತ್ರಜ್ಞಾನಗಳು ಮತ್ತು ಇತರ ಕ್ಷೇತ್ರಗಳಲ್ಲಿ ಮಾರ್ಗಸೂಚಿ 2030 ರ ಅಡಿಯಲ್ಲಿ ಆಗಿರುವ ಪ್ರಗತಿಯ ಬಗ್ಗೆ ಅವರು ತೃಪ್ತಿ ವ್ಯಕ್ತಪಡಿಸಿದರು.
ಪರಸ್ಪರ ಲಾಭದಾಯಕ ಮುಕ್ತ ವ್ಯಾಪಾರ ಒಪ್ಪಂದದ ಶೀಘ್ರ ಮುಕ್ತಾಯದ ನಿಟ್ಟಿನಲ್ಲಿ ಆಗಿರುವ ಪ್ರಗತಿಯನ್ನು ಅವರು ಧನಾತ್ಮಕವಾಗಿ ಮೌಲ್ಯಮಾಪನ ಮಾಡಿದರು.
ಇಬ್ಬರೂ ನಾಯಕರು ಪರಸ್ಪರ ಹಿತಾಸಕ್ತಿಯ ಪ್ರಾದೇಶಿಕ ಮತ್ತು ಜಾಗತಿಕ ಬೆಳವಣಿಗೆಗಳ ಬಗ್ಗೆ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು.
ಇಬ್ಬರೂ ನಾಯಕರು ಸಂಪರ್ಕದಲ್ಲಿರಲು ಸಮ್ಮತಿಸಿದರು ಮತ್ತು ಮುಂಬರುವ ಹೋಳಿ ಹಬ್ಬದ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು.
****
(Release ID: 2015571)
Visitor Counter : 58
Read this release in:
English
,
Urdu
,
Marathi
,
Hindi
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam