ಪ್ರಧಾನ ಮಂತ್ರಿಯವರ ಕಛೇರಿ

ಉಕ್ರೇನ್‌ ಅಧ್ಯಕ್ಷ ಜೆಲೆನ್‌ಸ್ಕಿ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಮಾತುಕತೆ 


ಭಾರತ-ಉಕ್ರೇನ್ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸುವ ಮಾರ್ಗಗಳ ಬಗ್ಗೆ ಉಭಯ ನಾಯಕರು ಚರ್ಚಿಸಿದರು

ಭಾರತದ ಜನ ಕೇಂದ್ರಿತ ವಿಧಾನವನ್ನು ಪುನರುಚ್ಚರಿಸಿದ ಪ್ರಧಾನ ಮಂತ್ರಿಗಳು ಮಾತುಕತೆ ಮತ್ತು ರಾಜತಾಂತ್ರಿಕತೆ ಮೂಲಕ ಸಂಘರ್ಷದ ಪರಿಹಾರಕ್ಕಾಗಿ ಕರೆ ನೀಡಿದರು

ಶಾಂತಿಯುತ ಪರಿಹಾರವನ್ನು ಬೆಂಬಲಿಸಲು ಭಾರತವು ತನ್ನ ಶಕ್ತಿಮೀರಿ ಎಲ್ಲಾ ಪ್ರಯತ್ನಗಳನ್ನು ಮುಂದುವರಿಸುತ್ತದೆ ಎಂದು ಪ್ರಧಾನಿ ಒತ್ತಿ ಹೇಳಿದರು

ಉಕ್ರೇನ್ ಜನರಿಗೆ ಭಾರತದಿಂದ ನಿರಂತರ ಮಾನವೀಯ ನೆರವನ್ನು ಅಧ್ಯಕ್ಷ ಜೆಲೆನ್‌ಸ್ಕಿ ಶ್ಲಾಘಿಸಿದರು

Posted On: 20 MAR 2024 6:19PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉಕ್ರೇನ್ ಅಧ್ಯಕ್ಷ ಘನತೆವೆತ್ತ ಶ್ರೀ ವೊಲೊಡಿಮಿರ್ ಜೆಲೆನ್‌ಸ್ಕಿ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದರು.

ಉಭಯ ನಾಯಕರು ವಿವಿಧ ಕ್ಷೇತ್ರಗಳಲ್ಲಿ ಭಾರತ-ಉಕ್ರೇನ್ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸುವ ಮಾರ್ಗಗಳ ಬಗ್ಗೆ ಚರ್ಚಿಸಿದರು.

ರಷ್ಯಾ-ಉಕ್ರೇನ್ ಸಂಘರ್ಷದ ಬಗ್ಗೆ ಚರ್ಚಿಸುವಾಗ,ಪ್ರಧಾನಮಂತ್ರಿಯವರು ಭಾರತದ ಜನ ಕೇಂದ್ರಿತ ವಿಧಾನವನ್ನು ಪುನರುಚ್ಚರಿಸಿದರು, ಜೊತೆಗೆ ಮಾತುಕತೆ ಮತ್ತು ರಾಜತಾಂತ್ರಿಕತೆ ಮಾರ್ಗಗಳ ಮೂಲಕ ಸಂಘರ್ಷ ಪರಿಹಾರಕ್ಕೆ ಕರೆ ನೀಡಿದರು.

ಉಭಯ ದೇಶಗಳ ನಡುವಿನ ಎಲ್ಲಾ ಸಮಸ್ಯೆಗಳನ್ನು ಶೀಘ್ರವಾಗಿ ಮತ್ತು ಶಾಂತಿಯುತವಾಗಿ ಪರಿಹರಿಸುವ ಎಲ್ಲಾ ಪ್ರಯತ್ನಗಳನ್ನು ಭಾರತ ಬೆಂಬಲಿಸುತ್ತದೆ ಎಂದು ಅವರು ಒತ್ತಿ ಹೇಳಿದರು. ಶಾಂತಿಯುತ ಪರಿಹಾರವನ್ನು ಬೆಂಬಲಿಸಲು ಭಾರತವು ತನ್ನ ಶಕ್ತಿಮೀರಿ ಪ್ರಯತ್ನಗಳನ್ನು ಮುಂದುವರಿಸುತ್ತದೆ ಎಂದು ಅವರು ಹೇಳಿದರು.

ಅಧ್ಯಕ್ಷ ಜೆಲೆನ್‌ಸ್ಕಿ ಅವರು ಉಕ್ರೇನ್ ಜನತೆಗೆ ಭಾರತದಿಂದ ನಿರಂತರ ಮಾನವೀಯ ಸಹಾಯದ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದರು.

ಉಭಯ ನಾಯಕರು ಪರಸ್ಪ ಸಂಪರ್ಕದಲ್ಲಿರಲು ಸಹಮತ ವ್ಯಕ್ತಪಡಿಸಿದರು.

*****



(Release ID: 2016074) Visitor Counter : 29