ರಾಷ್ಟ್ರಪತಿಗಳ ಕಾರ್ಯಾಲಯ
ವಿಶ್ವ ಕ್ಷಯರೋಗ ನಿಯಂತ್ರಣ ದಿನ ಆಚರಣೆ ಮುನ್ನಾ ದಿನ ದೇಶದ ಜನತೆಗೆ ರಾಷ್ಟ್ರಪತಿಗಳ ಸಂದೇಶ
Posted On:
23 MAR 2024 3:42PM by PIB Bengaluru
ಪ್ರತಿ ವರ್ಷ ಮಾರ್ಚ್ 24ರಂದು ವಿಶ್ವ ಕ್ಷಯರೋಗ ನಿಯಂತ್ರಣ ದಿನ ಆಚರಿಸಲಾಗುತ್ತದೆ. ಈ ಆಚರಣೆಯ ಮುನ್ನಾ ದಿನದಂದು ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಸಂದೇಶ ನೀಡಿದ್ದಾರೆ.
"ಕ್ಷಯರೋಗ(ಟಿಬಿ) ನಿಯಂತ್ರಣದ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಮಾರ್ಚ್ 24ರಂದು 'ವಿಶ್ವ ಕ್ಷಯರೋಗ ನಿಯಂತ್ರಣ ದಿನ' ಆಚರಿಸಲಾಗುತ್ತಿದೆ ಎಂಬುದನ್ನು ಗಮನಿಸಲು ನನಗೆ ಸಂತೋಷವಾಗಿದೆ.
ಈ ದಿನವು ಕ್ಷಯ ರೋಗದಿಂದ(ಟಿಬಿ) ಎದುರಾಗುವ ಜಾಗತಿಕ ಪ್ರಭಾವದ ಬಗ್ಗೆ ಜನಸಾಮಾನ್ಯರಿಗೆ ಅರಿವು ಮೂಡಿಸುವುದು, ರೋಗ ನಿಯಂತ್ರಣ ಸವಾಲುಗಳ ಬಗ್ಗೆ ಅರಿವು ಮೂಡಿಸುವುದು ಮತ್ತು ಅದನ್ನು ತಡೆಗಟ್ಟುವ ಪ್ರಯತ್ನಗಳನ್ನು ಬೆಂಬಲಿಸುವ ಗುರಿಯನ್ನು ಈ ಆಚರಣೆ ಹೊಂದಿದೆ. ಈ ದಿನವು ಟಿಬಿಯ ಆರಂಭಿಕ ಪತ್ತೆ, ಚಿಕಿತ್ಸೆ ಮತ್ತು ತಡೆಗಟ್ಟುವಿಕೆಯ ಪ್ರಾಮುಖ್ಯತೆಯನ್ನು ನಮಗೆ ನೆನಪಿಸುತ್ತದೆ.
ಭಾರತವನ್ನು ಟಿಬಿ ಮುಕ್ತಗೊಳಿಸಲು ಮತ್ತು ಈ ಗುರಿ ಸಾಧಿಸಲು ಇರುವ ಎಲ್ಲಾ ಪ್ರಯತ್ನಗಳನ್ನು ಮಾಡಲು ಎಲ್ಲರೂ ಒಟ್ಟಾಗಿ ಕೆಲಸ ಮಾಡುವಂತೆ ದೇಶದ ಜನತೆಗೆ ನಾನು ಒತ್ತಾಯಿಸುತ್ತೇನೆ ಎಂದು ರಾಷ್ಟ್ರಪತಿ ಮುರ್ಮು ಕರೆ ನೀಡಿದ್ದಾರೆ.
ರಾಷ್ಟ್ರಪತಿ ಅವರ ಭಾಷಣ ಆಲಿಸಲು ಇಲ್ಲಿ ಕ್ಲಿಕ್ ಮಾಡಿ –
*****
(Release ID: 2016248)