ಪ್ರಧಾನ ಮಂತ್ರಿಯವರ ಕಛೇರಿ

ಪ್ರಧಾನಮಂತ್ರಿ ಮೋದಿ ಅವರಿಗೆ ಭೂತಾನ್ ನ ಅತ್ಯುನ್ನತ ನಾಗರಿಕ ಪ್ರಶಸ್ತಿ  'ಆರ್ಡರ್ ಆಫ್ ದಿ ಡ್ರುಕ್ ಗ್ಯಾಲ್ಪೋ' ಪ್ರದಾನ 

Posted On: 22 MAR 2024 6:33PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಭೂತಾನ್‌ನ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಆರ್ಡರ್ ಆಫ್ ದಿ ಡ್ರುಕ್ ಗ್ಯಾಲ್ಪೋ ಅನ್ನು ಭೂತಾನ್ ರಾಜ ಅವರು  ಥಿಂಪುವಿನ ತೆಂಡ್ರೆಲ್‌ಥಾಂಗ್‌ನಲ್ಲಿ ನಡೆದ ಸಾರ್ವಜನಿಕ ಸಮಾರಂಭದಲ್ಲಿ ಪ್ರದಾನ ಮಾಡಿದರು. ಈ ಪ್ರತಿಷ್ಠಿತ ಪ್ರಶಸ್ತಿ ಪಡೆದ ಮೊದಲ ವಿದೇಶಿ ನಾಯಕ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು.

2021 ರ ಡಿಸೆಂಬರ್‌ನಲ್ಲಿ ಥಿಂಪುವಿನ ತಾಶಿಚೋಡ್‌ಜಾಂಗ್‌ನಲ್ಲಿ ನಡೆದ ಭೂತಾನ್‌ನ 114 ನೇ ರಾಷ್ಟ್ರೀಯ ದಿನಾಚರಣೆಯ ಸಂದರ್ಭದಲ್ಲಿ ಭೂತಾನ್ ನ ಮಹಾರಾಜರು  ಈ ಪ್ರಶಸ್ತಿಯನ್ನು ನೀಡುವುದಾಗಿ ಘೋಷಿಸಿದ್ದರು. ಭಾರತ-ಭೂತಾನ್ ಉಭಯ ದೇಶಗಳ ನಡುವಿನ ಸ್ನೇಹವನ್ನು ಬಲಪಡಿಸಲು ಪ್ರಧಾನ ಮಂತ್ರಿ ಮೋದಿಯವರ ಕೊಡುಗೆ ಮತ್ತು ಅವರ ಜನಕೇಂದ್ರಿತ ನಾಯಕತ್ವವನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ.

ಈ ಪ್ರಶಸ್ತಿಯು ಮೋದಿಯವರ ನಾಯಕತ್ವದಲ್ಲಿ ಭಾರತವು ಜಾಗತಿಕ ಶಕ್ತಿಯಾಗಿ ಹೊರಹೊಮ್ಮಿರುವುದನ್ನು ಗೌರವಿಸುತ್ತದೆ ಮತ್ತು ಭಾರತದೊಂದಿಗೆ ಭೂತಾನ್‌ನ ವಿಶೇಷ ಬಾಂಧವ್ಯವನ್ನು ಸಂಭ್ರಮಿಸುತ್ತದೆ ಎಂದು ಪ್ರಶಸ್ತಿ ಪತ್ರದಲ್ಲಿ ಹೇಳಲಾಗಿದೆ. ಪ್ರಧಾನಿ ಮೋದಿಯವರ ನಾಯಕತ್ವವು ಭಾರತವನ್ನು ಪರಿವರ್ತನೆಯ ಹಾದಿಯಲ್ಲಿ ಇರಿಸುವುದರ ಜೊತೆಗೆ  ಭಾರತದ ನೈತಿಕ ಅಧಿಕಾರ ಮತ್ತು ಜಾಗತಿಕ ಪ್ರಭಾವವನ್ನು ಹೆಚ್ಚಿಸಿದೆ.‌

ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಪ್ರಧಾನ ಮಂತ್ರಿಗಳು, ಈ   ಪ್ರಶಸ್ತಿಯು ಭಾರತದ 140 ಕೋಟಿ ಜನರಿಗೆ ನೀಡಿದ ಗೌರವವಾಗಿದೆ ಮತ್ತು ಉಭಯ ದೇಶಗಳ ನಡುವಿನ ವಿಶೇಷ ಮತ್ತು ಅನನ್ಯ ಬಾಂಧವ್ಯಕ್ಕೆ ಸಾಕ್ಷಿಯಾಗಿದೆ ಎಂದು ಅಭಿಪ್ರಾಯಪಟ್ಟರು. 

ಸ್ಥಾಪಿತವಾದ ಶ್ರೇಯಾಂಕ ಮತ್ತು ಪ್ರಾಶಸ್ತ್ಯದ ಪ್ರಕಾರ, ಆರ್ಡರ್ ಆಫ್ ದ ಡ್ರುಕ್ ಗ್ಯಾಲ್ಪೋ ಅನ್ನು ಜೀವಮಾನದ ಸಾಧನೆ ಗುರುತಿಸಲು ಉದ್ದೇಶದಿಂದ ಸ್ಥಾಪಿಸಲಾಗಿದೆ. ಇದು ಭೂತಾನ್‌ನಲ್ಲಿನ ಅತ್ಯುನ್ನತ ಗೌರವ ವ್ಯವಸ್ಥೆಯಾಗಿದೆ.

*****
 



(Release ID: 2016250) Visitor Counter : 40