ಗೃಹ ವ್ಯವಹಾರಗಳ ಸಚಿವಾಲಯ

ರಾಷ್ಟ್ರಪತಿ ಭವನದಲ್ಲಿ ನಡೆದ ನಾಗರಿಕ ಪ್ರತಿಷ್ಠಾಪನಾ ಸಮಾರಂಭ-1 ರಲ್ಲಿ ಭಾರತದ ರಾಷ್ಟ್ರಪತಿ ಅವರು 2024 ನೇ ಸಾಲಿನ 3 ಪದ್ಮ ವಿಭೂಷಣ, 8 ಪದ್ಮಭೂಷಣ ಮತ್ತು 55 ಪದ್ಮಶ್ರೀ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು

Posted On: 22 APR 2024 9:34PM by PIB Bengaluru

ರಾಷ್ಟ್ರಪತಿ ಭವನದ ದರ್ಬಾರ್ ಹಾಲ್ ನಲ್ಲಿ ಇಂದು ವೈಭವದಿಂದ ನಡೆದ ನಾಗರಿಕ ಪ್ರತಿಷ್ಠಾಪನಾ ಸಮಾರಂಭ-1 ರಲ್ಲಿ ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು 2024 ನೇ ಸಾಲಿನ 3 ಪದ್ಮ ವಿಭೂಷಣ, 8 ಪದ್ಮಭೂಷಣ ಮತ್ತು 55 ಪದ್ಮಶ್ರೀ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು.

ಭಾರತದ ಉಪರಾಷ್ಟ್ರಪತಿ ಶ್ರೀ ಜಗದೀಪ್ ಧನ್ ಕರ್, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ, ಲೋಕಸಭಾ ಸ್ಪೀಕರ್ ಶ್ರೀ ಓಂ ಬಿರ್ಲಾ, ಕೇಂದ್ರ ಗೃಹ ಸಚಿವರು ಮತ್ತು ಸಹಕಾರ ಸಚಿವ ಶ್ರೀ ಅಮಿತ್ ಶಾ, ಕೇಂದ್ರದ ಅನೇಕ ಸಚಿವರು ಮತ್ತು ಇತರ ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಪ್ರಶಸ್ತಿ ಪ್ರದಾನ ಸಮಾರಂಭದ ನಂತರ, ಕೇಂದ್ರ ಗೃಹ ಸಚಿವ ಮತ್ತು ಸಹಕಾರ ಸಚಿವ ಶ್ರೀ ಅಮಿತ್ ಶಾ ಮತ್ತು ಇತರ ಕೇಂದ್ರ ಸಚಿವರು ನವದೆಹಲಿಯ ತಮ್ಮ ನಿವಾಸದಲ್ಲಿ ಗೃಹ ಸಚಿವರು ಆಯೋಜಿಸಿದ್ದ ಔತಣಕೂಟದಲ್ಲಿ ಪದ್ಮ ಪ್ರಶಸ್ತಿ ಪುರಸ್ಕೃತರೊಂದಿಗೆ ಸಂವಾದ ನಡೆಸಿದರು.

ಪದ್ಮ ಪ್ರಶಸ್ತಿ ಪುರಸ್ಕೃತರು ನಾಳೆ (ಏಪ್ರಿಲ್ 23, 2024) ಬೆಳಗ್ಗೆ ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ಗೌರವ ಸಲ್ಲಿಸಲಿದ್ದಾರೆ. ಅವರು ರಾಷ್ಟ್ರಪತಿ ಭವನ ಮತ್ತು ಪ್ರಧಾನ ಮಂತ್ರಿ ಸಂಗ್ರಾಹಾಲಯಕ್ಕೂ ಭೇಟಿ ನೀಡಲಿದ್ದಾರೆ.

*****



(Release ID: 2018575) Visitor Counter : 32