ಗೃಹ ವ್ಯವಹಾರಗಳ ಸಚಿವಾಲಯ
ಇಸ್ಲಾಮಿಕ್ ರಿಪಬ್ಲಿಕ್ ಆಫ್ ಇರಾನ್ ನ ಅಧ್ಯಕ್ಷರಾದ ಗೌರವಾನ್ವಿತ ಡಾ. ಸೆಯ್ಯದ್ ಇಬ್ರಾಹಿಂ ರೈಸಿ ಮತ್ತು ಇಸ್ಲಾಮಿಕ್ ರಿಪಬ್ಲಿಕ್ ಆಫ್ ಇರಾನ್ ನ ವಿದೇಶಾಂಗ ಸಚಿವರಾದ ಗೌರವಾನ್ವಿತ ಹುಸೇನ್ ಅಮೀರ್-ಅಬ್ದುಲ್ಲಾಹಿಯಾನ್ ಹೆಲಿಕಾಪ್ಟರ್ ದುರಂತದಲ್ಲಿ ನಿಧನ
ಅವರ ಗೌರವಾರ್ಥ ಮೇ 21, 2024 ರಂದು (ಮಂಗಳವಾರ) ದೇಶಾದ್ಯಂತ ಒಂದು ದಿನದ ಶೋಕಾಚರಣೆ ಘೋಷಣೆ
प्रविष्टि तिथि:
20 MAY 2024 5:27PM by PIB Bengaluru
ಇಸ್ಲಾಮಿಕ್ ರಿಪಬ್ಲಿಕ್ ಆಫ್ ಇರಾನ್ ನ ಅಧ್ಯಕ್ಷರಾದ ಗೌರವಾನ್ವಿತ ಡಾ. ಸೆಯ್ಯದ್ ಇಬ್ರಾಹಿಂ ರೈಸಿ ಮತ್ತು ಇಸ್ಲಾಮಿಕ್ ರಿಪಬ್ಲಿಕ್ ಆಫ್ ಇರಾನ್ ನ ವಿದೇಶಾಂಗ ಸಚಿವರಾದ ಗೌರವಾನ್ವಿತ ಹುಸೇನ್ ಅಮೀರ್-ಅಬ್ದುಲ್ಲಾಹಿಯಾನ್ ಅವರು ಹೆಲಿಕಾಪ್ಟರ್ ದುರಂತದಲ್ಲಿ ನಿಧನರಾಗಿದ್ದಾರೆ. ಅಗಲಿದ ಆತ್ಮಗಳಿಗೆ ಗೌರವಾರ್ಥವಾಗಿ, ಭಾರತ ಸರ್ಕಾರವು ಮೇ 21, 2024 ರಂದು (ಮಂಗಳವಾರ) ದೇಶಾದ್ಯಂತ ಒಂದು ದಿನದ ಶೋಕಾಚರಣೆಯನ್ನು ಘೋಷಿಸಿದೆ.
ಶೋಕಾಚರಣೆಯ ದಿನದಂದು ರಾಷ್ಟ್ರಧ್ವಜವನ್ನು ನಿಯಮಿತವಾಗಿ ಹಾರಿಸುವ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರಧ್ವಜವನ್ನು ಅರ್ಧಕ್ಕೆ ಹಾರಿಸಲಾಗುತ್ತದೆ ಮತ್ತು ಈ ದಿನದಂದು ಯಾವುದೇ ಸರ್ಕಾರಿ ಮನರಂಜನಾ ಕಾರ್ಯಕ್ರಮಗಳು ಇರುವುದಿಲ್ಲ.
*****
(रिलीज़ आईडी: 2021161)
आगंतुक पटल : 118