ಪ್ರಧಾನ ಮಂತ್ರಿಯವರ ಕಛೇರಿ
ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಅಭಿನಂದನೆ ಸಲ್ಲಿಸಿದ ನೆದರ್ಲ್ಯಾಂಡ್ಸ್ ರಾಷ್ಟ್ರದ ಪ್ರಧಾನಿ ಮಾರ್ಕ್ ರುಟ್ಟೆ
ಭಾರತ ಮತ್ತು ನೆದರ್ಲ್ಯಾಂಡ್ಸ್ ನಡುವಿನ ವಿಶೇಷ ಹಾಗೂ ಮೌಲ್ಯಯುತವಾದ ಸಂಬಂಧಕ್ಕೆ ಉಭಯ ನಾಯಕರು ಒತ್ತು ನೀಡಿದ್ದಾರೆ
ಪ್ರಧಾನಿ ಮೋದಿಯವರು ದ್ವಿಪಕ್ಷೀಯ ಸಂಬಂಧಗಳನ್ನು ಮತ್ತಷ್ಟು ಬಲಪಡಿಸುವ ಹಂಬಲವನ್ನು ಈ ದೂರವಾಣಿ ಕರೆಯ ಮೂಲಕ ವ್ಯಕ್ತಪಡಿಸಿದ್ದಾರೆ
प्रविष्टि तिथि:
05 JUN 2024 10:12PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ನೆದರ್ಲ್ಯಾಂಡ್ಸ್ ಪ್ರಧಾನಮಂತ್ರಿಯವರಾದ ಗೌರವಾನ್ವಿತ ಶ್ರೀ ಮಾರ್ಕ್ ರುಟ್ಟೆ ಅವರಿಂದ ದೂರವಾಣಿ ಕರೆಯ ಮೂಲಕ ಮಾತನಾಡಿದರು.
ಲೋಕಸಭಾ ಚುನಾವಣೆಯ ಯಶಸ್ಸಿಗೆ ನೆದರ್ಲ್ಯಾಂಡ್ಸ್ ಪ್ರಧಾನಮಂತ್ರಿಯವರಾದ ರುಟ್ಟೆ ಅವರು, ಪ್ರಧಾನಮಂತ್ರಿ ಮೋದಿಯವರನ್ನು ಅಭಿನಂದಿಸಿ, ಮೋದಿಯವರ ಐತಿಹಾಸಿಕ ಮೂರನೇ ಆಡಳಿತಾವಧಿಗೆ ಶುಭ ಹಾರೈಸಿದರು.
ಪ್ರಧಾನಮಂತ್ರಿಯವರು, ಅವರ ಆತ್ಮೀಯ ಶುಭಾಶಯಗಳಿಗಾಗಿ ಪ್ರಧಾನಿ ರುಟ್ಟೆ ಅವರಿಗೆ ಧನ್ಯವಾದ ಅರ್ಪಿಸಿದರು. ಉಭಯ ದೇಶಗಳ ನಡುವಿನ ನಿಕಟ ಸಂಬಂಧವನ್ನು ಮುಂದುವರಿಸುವಲ್ಲಿ ಅವರ ವೈಯಕ್ತಿಕ ಆಸಕ್ತಿಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಭಾರತ ಮತ್ತು ನೆದರ್ಲ್ಯಾಂಡ್ಸ್ ನಡುವಿನ ವಿಶೇಷ ಹಾಗೂ ಮೌಲ್ಯಯುತವಾದ ಸಂಬಂಧವನ್ನು ಉಭಯ ನಾಯಕರು ಒತ್ತಿ ಹೇಳಿದರು.
ಎರಡೂ ದೇಶಗಳ ಜನರ ಅನುಕೂಲಕ್ಕಾಗಿ ದ್ವಿಪಕ್ಷೀಯ ಸಂಬಂಧಗಳನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಕೆಲಸ ಮಾಡುವ ಬದ್ಧತೆಯನ್ನು ಪ್ರಧಾನಿ ಪುನರುಚ್ಚರಿಸಿದರು.
*****
(रिलीज़ आईडी: 2023148)
आगंतुक पटल : 110
इस विज्ञप्ति को इन भाषाओं में पढ़ें:
English
,
Urdu
,
हिन्दी
,
Marathi
,
Assamese
,
Bengali
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam