ರಾಷ್ಟ್ರಪತಿಗಳ ಕಾರ್ಯಾಲಯ
azadi ka amrit mahotsav

ಪತ್ರಿಕಾ ಪ್ರಕಟಣೆ

Posted On: 06 JUN 2024 6:14PM by PIB Bengaluru

ಭಾರತದ ಮುಖ್ಯ ಚುನಾವಣಾ ಆಯುಕ್ತರಾದ ಶ್ರೀ ರಾಜೀವ್ ಕುಮಾರ್, ಚುನಾವಣಾ ಆಯುಕ್ತರಾದ ಶ್ರೀ ಜ್ಞಾನೇಶ್ ಕುಮಾರ್ ಮತ್ತು ಡಾ. ಸುಖ್ಬೀರ್ ಸಿಂಗ್ ಸಂಧು ಅವರೊಂದಿಗೆ ಇಂದು ಸಂಜೆ 04.30 ಕ್ಕೆ ರಾಷ್ಟ್ರಪತಿಗಳನ್ನು ಭೇಟಿ ಮಾಡಿದರು. 1951ರ ಜನತಾ ಪ್ರಾತಿನಿಧ್ಯ ಕಾಯ್ದೆಯ ಸೆಕ್ಷನ್ 73ರ ಪ್ರಕಾರ, 18ನೇ ಲೋಕಸಭೆಗೆ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಸದನಕ್ಕೆ ಆಯ್ಕೆಯಾದ ಸದಸ್ಯರ ಹೆಸರುಗಳನ್ನು ಒಳಗೊಂಡ ಅಧಿಸೂಚನೆಯ ಪ್ರತಿಯನ್ನು ಅವರು ರಾಷ್ಟ್ರಪತಿಯವರಿಗೆ ಸಲ್ಲಿಸಿದರು.

ಮಾನವ ಇತಿಹಾಸದಲ್ಲಿ ಅತಿದೊಡ್ಡ ಪ್ರಜಾಪ್ರಭುತ್ವ ಪ್ರಕ್ರಿಯೆಯಾದ ಚುನಾವಣಾ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಕ್ಕಾಗಿ ರಾಷ್ಟ್ರಪತಿಗಳು ಮುಖ್ಯ ಚುನಾವಣಾ ಆಯುಕ್ತರು ಮತ್ತು ಚುನಾವಣಾ ಆಯುಕ್ತರನ್ನು ಅಭಿನಂದಿಸಿದರು. ಇಡೀ ದೇಶದ ಪರವಾಗಿ, ಚುನಾವಣಾ ಆಯೋಗ, ಅದರ ಅಧಿಕಾರಿಗಳು, ಸಿಬ್ಬಂದಿ ವರ್ಗ ಮತ್ತು ಮತದಾನದ ನಿರ್ವಹಣೆ ಹಾಗೂ  ಮೇಲ್ವಿಚಾರಣೆಯಲ್ಲಿ ಮತ್ತು ಪ್ರಚಾರದಲ್ಲಿ ತೊಡಗಿದ ಇತರ ಸಾರ್ವಜನಿಕ ಅಧಿಕಾರಿಗಳು ಮತ್ತು ಜನರ ಮತಪತ್ರದ ಪಾವಿತ್ರ್ಯವನ್ನು ಎತ್ತಿಹಿಡಿಯಲು ಹಾಗು ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಲು ದಣಿವರಿಯದೆ ಮತ್ತು ಶ್ರದ್ಧೆಯಿಂದ ಕೆಲಸ ಮಾಡಿದ ಕೇಂದ್ರ ಹಾಗೂ ರಾಜ್ಯದ ಪೊಲೀಸ್ ಮತ್ತು ಭದ್ರತಾ ಸಿಬ್ಬಂದಿಯ ಪ್ರಯತ್ನಗಳನ್ನು ಅವರು ಶ್ಲಾಘಿಸಿದರು. ಎಲ್ಲಕ್ಕಿಂತ ಹೆಚ್ಚಾಗಿ, ಇಷ್ಟು ದೊಡ್ಡ ಸಂಖ್ಯೆಯಲ್ಲಿ ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸಿದ ನೂರಾರು ಮಿಲಿಯನ್ ಮತದಾರರನ್ನು ಅವರು ಶ್ಲಾಘಿಸಿದರು. ಇದು ಸಂಪೂರ್ಣವಾಗಿ ನಮ್ಮ ಸಂವಿಧಾನ ಮತ್ತು ಭಾರತದ ಆಳವಾದ ಹಾಗೂ ಅಚಲ ಪ್ರಜಾಪ್ರಭುತ್ವ ಸಂಪ್ರದಾಯಗಳಿಗೆ ಅನುಗುಣವಾಗಿದೆ ಎಂಬುದರತ್ತಲೂ  ರಾಷ್ಟ್ರಪತಿಗಳು ಬೆಟ್ಟು ಮಾಡಿದರು.

*****
 


(Release ID: 2023379) Visitor Counter : 93