ಪ್ರಧಾನ ಮಂತ್ರಿಯವರ ಕಛೇರಿ
ಶ್ರೀ ರಾಮೋಜಿ ರಾವ್ ನಿಧನಕ್ಕೆ ಪ್ರಧಾನ ಮಂತ್ರಿ ಸಂತಾಪ
Posted On:
08 JUN 2024 11:33AM by PIB Bengaluru
ದೇಶ ಕಂಡ ವರ್ಣರಂಜಿತ ಉದ್ಯಮಿ, ರಾಮೋಜಿ ಫಿಲ್ಮ್ ಸಿಟಿ ಸಂಸ್ಥಾಪಕ ಶ್ರೀ ರಾಮೋಜಿ ರಾವ್ ನಿಧನಕ್ಕೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ರಾಮೋಜಿ ರಾವ್ ಅವರು ಭಾರತೀಯ ಮಾಧ್ಯಮ ಕ್ಷೇತ್ರದಲ್ಲಿ ಕ್ರಾಂತಿ ಮಾಡಿದ ದಾರ್ಶನಿಕ. ಅವರು ನೀಡಿರುವ ಶ್ರೀಮಂತ ಕೊಡುಗೆಗಳು ಪತ್ರಿಕೋದ್ಯಮ ಮತ್ತು ಚಲನಚಿತ್ರಗಳ ಲೋಕದಲ್ಲಿ ಅಚ್ಚಳಿಯದ ಛಾಪು ಮೂಡಿಸಿವೆ ಎಂದು ಶ್ರೀ ಮೋದಿ ಸ್ಮರಿಸಿದ್ದಾರೆ.
ಈ ಕುರಿತು ಪ್ರಧಾನ ಮಂತ್ರಿ X ನಲ್ಲಿ ಪೋಸ್ಟ್ ಮಾಡಿದ್ದಾರೆ;
“ಶ್ರೀ ರಾಮೋಜಿ ರಾವ್ ಅವರ ನಿಧನವು ಅತ್ಯಂತ ದುಃಖಕರವಾಗಿದೆ. ಅವರು ಭಾರತೀಯ ಮಾಧ್ಯಮ ರಂಗದಲ್ಲಿ ಕ್ರಾಂತಿ ಮಾಡಿದ ದಾರ್ಶನಿಕರಾಗಿದ್ದರು. ಅವರ ಶ್ರೀಮಂತ ಕೊಡುಗೆಗಳು ಪತ್ರಿಕೋದ್ಯಮ ಮತ್ತು ಚಲನಚಿತ್ರಗಳ ಜಗತ್ತಿನಲ್ಲಿ ಅಳಿಸಲಾಗದ ಛಾಪು ಮೂಡಿಸಿವೆ. ಗಮನಾರ್ಹ ಎನಿಸುವ ಸತತ ಪ್ರಯತ್ನಗಳ ಮೂಲಕ, ಅವರು ಮಾಧ್ಯಮ ಮತ್ತು ಮನರಂಜನಾ ಜಗತ್ತಿನಲ್ಲಿ ಹೊಸತನ ಮತ್ತು ಶ್ರೇಷ್ಠತೆಗೆ ಹೊಸ ಮಾನದಂಡಗಳನ್ನು ರೂಪಿಸಿದರು ಎಂದು ಪ್ರಧಾನಿ ಸ್ಮರಿಸಿದ್ದಾರೆ.
ರಾಮೋಜಿ ರಾವ್ ಅವರು ಭಾರತದ ಅಭಿವೃದ್ಧಿಯ ಬಗ್ಗೆ ಅಪಾರವಾದ ಉತ್ಸುಕತೆ ಹೊಂದಿದ್ದರು. ರಾಮೋಜಿ ಅವರೊಂದಿಗೆ ಮಾತುಕತೆ ನಡೆಸಲು ಮತ್ತು ಅವರಿಗಿದ್ದ ಅಪಾರ ಬುದ್ಧಿವಂತಿಕೆಯಿಂದ ಪ್ರಯೋಜನ ಪಡೆಯಲು ನಾನು ಹಲವಾರು ಅವಕಾಶಗಳನ್ನು ಪಡೆದಿರುವುದು ನನ್ನ ಅದೃಷ್ಟ. ಈ ಕಷ್ಟದ ಸಮಯದಲ್ಲಿ ಅವರ ಕುಟುಂಬ, ಸ್ನೇಹಿತರು ಮತ್ತು ಅಸಂಖ್ಯಾತ ಅಭಿಮಾನಿಗಳಿಗೆ ಸಂತಾಪ ಸೂಚಿಸುತ್ತೇನೆ. ಓಂ ಶಾಂತಿ.”
*****
(Release ID: 2023609)
Visitor Counter : 68
Read this release in:
English
,
Urdu
,
Hindi
,
Hindi_MP
,
Marathi
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam
,
Malayalam