ಪ್ರಧಾನ ಮಂತ್ರಿಯವರ ಕಛೇರಿ
ಸತತ ಮೂರನೇ ಅವಧಿಗೆ ದೇಶದ ಪ್ರಧಾನ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ನರೇಂದ್ರ ಮೋದಿ
Posted On:
09 JUN 2024 11:55PM by PIB Bengaluru
ಶ್ರೀ ನರೇಂದ್ರ ಮೋದಿ ಅವರು ಇಂದು ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಸತತ ಮೂರನೇ ಅವಧಿಗೆ ಭಾರತದ ಪ್ರಧಾನ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಪ್ರಧಾನಿ ಮತ್ತು ಅವರ ಸಚಿವ ಸಂಪುಟ ಸಹೋದ್ಯೋಗಿಗಳಿಗೆ ಪ್ರಮಾಣ ವಚನ ಬೋಧಿಸಿದರು.
ಈ ಕುರಿತು ಮೋದಿಯವರು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ:
"ಇಂದು ಸಂಜೆ ನಡೆದ ಸಮಾರಂಭದಲ್ಲಿ ಪ್ರಧಾನ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದೆನು. 140 ಕೋಟಿ ಮಂದಿ ಭಾರತೀಯರಿಗೆ ಸೇವೆ ಸಲ್ಲಿಸಲು ಮತ್ತು ಭಾರತವನ್ನು ಪ್ರಗತಿಯ ಹೊಸ ಎತ್ತರಕ್ಕೆ ಕೊಂಡೊಯ್ಯಲು ಮಂತ್ರಿ ಮಂಡಲದ ಸಹೋದ್ಯೋಗಿಗಳ ಜೊತೆ ಕೆಲಸ ಮಾಡಲು ಎದುರು ನೋಡುತ್ತಿದ್ದೇನೆ.
ಇಂದು ನನ್ನ ಜೊತೆ ಪ್ರಮಾಣ ವಚನ ಸ್ವೀಕರಿಸಿದ ಎಲ್ಲರಿಗೂ ಅಭಿನಂದನೆಗಳು. ಈ ಸಚಿವರ ತಂಡವು ಹೊಸ ಯುವಕರು ಮತ್ತು ಅನುಭವ ಹೊಂದಿರುವವರ ಮಿಶ್ರಣವಾಗಿದೆ. ನಮ್ಮ ತಂಡವು ದೇಶದ ಜನರ ಜೀವನವನ್ನು ಸುಧಾರಿಸುವಲ್ಲಿ ಎಲ್ಲಾ ರೀತಿಯ ಪ್ರಯತ್ನಗಳನ್ನು ಮಾಡುತ್ತದೆ.
ಪ್ರಮಾಣ ವಚನ ಸಮಾರಂಭಕ್ಕೆ ಆಗಮಿಸಿದ ಎಲ್ಲ ವಿದೇಶಿ ಗಣ್ಯರಿಗೆ ನಾನು ಕೃತಜ್ಞನಾಗಿದ್ದೇನೆ. ಮಾನವ ಪ್ರಗತಿಯ ಅನ್ವೇಷಣೆಯಲ್ಲಿ ಭಾರತ ಯಾವಾಗಲೂ ನಮ್ಮ ಮೌಲ್ಯಯುತ ಪಾಲುದಾರರೊಂದಿಗೆ ನಿಕಟವಾಗಿ ಕೆಲಸ ಮಾಡುವುದನ್ನು ಮುಂದುವರಿಸುತ್ತದೆ'' ಎಂದು ಬರೆದುಕೊಂಡಿದ್ದಾರೆ.
"राष्ट्रपति भवन के प्रांगण में आज शाम हुए समारोह में मैंने प्रधानमंत्री पद की शपथ ली। मैं और मंत्रिपरिषद के मेरे सहयोगी, 140 करोड़ देशवासियों की सेवा करने और देश को विकास की नई ऊंचाइयों पर ले जाने के लिए प्रतिबद्ध हैं।
एनडीए सरकार में मंत्री के रूप में शपथ लेने वाले सभी साथियों को बहुत-बहुत बधाई और शुभकामनाएं। मंत्रियों की इस टीम में युवा जोश और अनुभव का अद्भुत संगम है। हम सभी देशवासियों का जीवन बेहतर बनाने में कोई कोर-कसर बाकी नहीं रखेंगे।
मैं शपथ ग्रहण समारोह का हिस्सा बने दुनियाभर के गणमान्य अतिथियों का भी हृदय से आभारी हूं। विश्व बंधु के रूप में भारत सदैव अपने निकट साझेदारों के साथ मिलकर मानवता के हित में काम करता रहेगा।"
*****
(Release ID: 2023708)
Visitor Counter : 107
Read this release in:
English
,
Urdu
,
Marathi
,
Hindi
,
Hindi_MP
,
Assamese
,
Manipuri
,
Bengali
,
Punjabi
,
Gujarati
,
Odia
,
Tamil
,
Telugu
,
Malayalam