ಸಂಪುಟ
ಪ್ರಧಾನ ಮಂತ್ರಿ ಆವಾಸ್ ಯೋಜನೆ (ಪಿಎಂಎವೈ) ಅಡಿಯಲ್ಲಿ 3 ಕೋಟಿ ಗ್ರಾಮೀಣ ಮತ್ತು ನಗರ ಮನೆಗಳನ್ನು ನಿರ್ಮಿಸಲು ಸರ್ಕಾರ ನೆರವು ನೀಡಲಿದೆ
प्रविष्टि तिथि:
10 JUN 2024 7:50PM by PIB Bengaluru
ಅರ್ಹ ಗ್ರಾಮೀಣ ಮತ್ತು ನಗರ ಕುಟುಂಬಗಳಿಗೆ ಮೂಲಭೂತ ಸೌಕರ್ಯಗಳೊಂದಿಗೆ ಮನೆಗಳ ನಿರ್ಮಾಣಕ್ಕೆ ನೆರವು ಒದಗಿಸಲು ಭಾರತ ಸರ್ಕಾರವು 2015-16 ರಿಂದ ಪ್ರಧಾನ ಮಂತ್ರಿ ಆವಾಸ್ ಯೋಜನೆ (ಪಿಎಂಎವೈ) ಯನ್ನು ಅನುಷ್ಠಾನಗೊಳಿಸುತ್ತಿದೆ. ಪಿಎಂಎವೈ ಅಡಿಯಲ್ಲಿ, ಕಳೆದ 10 ವರ್ಷಗಳಲ್ಲಿ ವಸತಿ ಯೋಜನೆಗಳ ಅಡಿಯಲ್ಲಿ ಅರ್ಹ ಬಡ ಕುಟುಂಬಗಳಿಗಾಗಿ ಒಟ್ಟು 4.21 ಕೋಟಿ ಮನೆಗಳ ನಿರ್ಮಾಣವನ್ನು ಪೂರ್ಣಗೊಳಿಸಲಾಗಿದೆ.
ಪಿಎಂಎವೈ ಅಡಿಯಲ್ಲಿ ನಿರ್ಮಿಸಲಾದ ಎಲ್ಲಾ ಮನೆಗಳಿಗೆ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳ ಇತರ ಯೋಜನೆಗಳ ಸಮನ್ವಯದೊಂದಿಗೆ ಶೌಚಾಲಯಗಳು, ಎಲ್ ಪಿ ಜಿ ಸಂಪರ್ಕ, ವಿದ್ಯುತ್ ಸಂಪರ್ಕ, ನಲ್ಲಿ ಸಂಪರ್ಕ ಮುಂತಾದ ಇತರ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗಿದೆ.
ಅರ್ಹ ಕುಟುಂಬಗಳ ಸಂಖ್ಯೆಯ ಹೆಚ್ಚಳದಿಂದ ಉಂಟಾಗುವ ವಸತಿ ಅವಶ್ಯಕತೆಗಳನ್ನು ಪೂರೈಸಲು 3 ಕೋಟಿ ಹೆಚ್ಚುವರಿ ಗ್ರಾಮೀಣ ಮತ್ತು ನಗರ ಕುಟುಂಬಗಳಿಗೆ ಮನೆ ನಿರ್ಮಾಣಕ್ಕೆ ನೆರವು ನೀಡಲು ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಯಿತು.
*****
(रिलीज़ आईडी: 2023844)
आगंतुक पटल : 221
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Assamese
,
Manipuri
,
Bengali
,
Punjabi
,
Gujarati
,
Odia
,
Tamil
,
Telugu
,
Malayalam