ವಾರ್ತಾ ಮತ್ತು ಪ್ರಸಾರ ಸಚಿವಾಲಯ
azadi ka amrit mahotsav

ವಾರ್ತಾ ಮತ್ತು ಪ್ರಸಾರ ಖಾತೆಯ ರಾಜ್ಯ ಸಚಿವರಾಗಿ ಡಾ. ಲೋಗನಾಥನ್ ಮುರುಗನ್ ಅಧಿಕಾರ ಸ್ವೀಕಾರ

ಪ್ರಕಟಣಾ ದಿನಾಂಕ: 11 JUN 2024 12:31PM by PIB Bengaluru

ಡಾ. ಎಲ್. ಮುರುಗನ್ ಅವರು ಇಂದು ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ರಾಜ್ಯ ಸಚಿವರಾಗಿ ಅಧಿಕಾರ ವಹಿಸಿಕೊಂಡರು . ಈ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಡಾ ಮುರುಗನ್, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ  ತಮ್ಮ ಮೇಲೆ ವಿಶ್ವಾಸವಿಟ್ಟದ್ದಕ್ಕಾಗಿ ಕೃತಜ್ಞತೆ ಸಲ್ಲಿಸಿದರು. ಸರ್ಕಾರ ಮತ್ತು ದೇಶದ ಜನರ ನಡುವೆ ಸಂವಹನ ಸೇತುವೆಯಾಗಿ ಕಾರ್ಯನಿರ್ವಹಿಸುವ ಮೂಲಕ ಸರ್ಕಾರದ ನೀತಿಗಳನ್ನು ಕಾರ್ಯಗತಗೊಳಿಸುವಲ್ಲಿ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಪ್ರಮುಖ ಪಾತ್ರ ವಹಿಸುತ್ತದೆ ಎಂದು ಅವರು ಹೇಳಿದರು.

ಸರ್ಕಾರವು ಬಡವರ ಕಲ್ಯಾಣಕ್ಕೆ ಬದ್ಧವಾಗಿದೆ . ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಮೂರು ಕೋಟಿ ಮನೆಗಳನ್ನು ನಿರ್ಮಿಸುವ  ಸಚಿವ ಸಂಪುಟದ  ನಿರ್ಧಾರದಿಂದ ಇದು ಸಾಬೀತಾಗಿದೆ ಎಂದು ಡಾ ಮುರುಗನ್ ಹೇಳಿದರು.

 

ಶ್ರೀ ಮುರುಗನ್ ಅವರನ್ನು ಕಾರ್ಯದರ್ಶಿ ಶ್ರೀ ಸಂಜಯ್ ಜಾಜು ಮತ್ತು ಸಚಿವಾಲಯದ ಇತರ ಹಿರಿಯ ಅಧಿಕಾರಿಗಳು ಮತ್ತು ಸಚಿವಾಲಯದ ಅಡಿಯಲ್ಲಿರುವ ಮಾಧ್ಯಮ ಘಟಕಗಳಿಗೆ ಸಂಬಂಧಿಸಿವರು ಸ್ವಾಗತಿಸಿದರು.

 

*****


(ಪ್ರಕಟಣೆ ಐ.ಡಿ.: 2023977) ವಿಸಿಟರ್ ಕೌಂಟರ್ : 169