ಇಂಧನ ಸಚಿವಾಲಯ
ಮನೋಹರ್ ಲಾಲ್ ಖಟ್ಟರ್ ಅವರು ಇಂಧನ ಸಚಿವರಾಗಿ ಅಧಿಕಾರ ವಹಿಸಿಕೊಂಡರು
ಪ್ರಕಟಣಾ ದಿನಾಂಕ:
11 JUN 2024 11:38AM by PIB Bengaluru
ಶ್ರೀ ಮನೋಹರ್ ಲಾಲ್ ಅವರು ಶ್ರಮ ಶಕ್ತಿ ಭವನದಲ್ಲಿಂದು ವಸತಿ ಮತ್ತು ನಗರ ವ್ಯವಹಾರಗಳ ಖಾತೆಯ ಜೊತೆಗೆ ಹೆಚ್ಚುವರಿಯಾಗಿ ಕೇಂದ್ರ ವಿದ್ಯುತ್ ಸಚಿವರಾಗಿ ಅಧಿಕಾರ ವಹಿಸಿಕೊಂಡರು. ಇಂಧನ ಸಚಿವಾಲಯದ ಕಾರ್ಯದರ್ಶಿ ಶ್ರೀ ಪಂಕಜ್ ಅಗರ್ವಾಲ್ ಮತ್ತು ಸಚಿವಾಲಯದ ಹಿರಿಯ ಅಧಿಕಾರಿಗಳು ಸಚಿವರನ್ನು ಸ್ವಾಗತಿಸಿದರು.

ಮಾಜಿ ವಿದ್ಯುತ್ ಸಚಿವ ರಾಜ್ ಕುಮಾರ್ ಸಿಂಗ್ ಅವರು ಆತ್ಮೀಯ ಸ್ವಾಗತ ಕೋರಿದರು. ಈ ಸಂದರ್ಭದಲ್ಲಿ ವಿದ್ಯುತ್ ಸಚಿವಾಲಯದ ರಾಜ್ಯ ಸಚಿವ ಶ್ರೀ ಶ್ರೀಪಾದ್ ಯೆಸ್ಸೋ ನಾಯ್ಕ್ ಉಪಸ್ಥಿತರಿದ್ದರು.

ಅಧಿಕಾರವಹಿಸಿಕೊಂಡ ಕೇಂದ್ರ ಸಚಿವರಿಗೆ, ವಿದ್ಯುತ್ ಸಚಿವಾಲಯದ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದರು. ಈ ವೇಳೆ ಸಚಿವರು ದೇಶದಲ್ಲಿ ವಿದ್ಯುತ್ ಸರಬರಾಜು ಸ್ಥಿತಿಯ ಬಗ್ಗೆ ಪರಿಶೀಲನಾ ಸಭೆಯನ್ನೂ ನಡೆಸಿದರು.

*****
(ಪ್ರಕಟಣೆ ಐ.ಡಿ.: 2024023)
ವಿಸಿಟರ್ ಕೌಂಟರ್ : 105
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
Marathi
,
हिन्दी
,
Hindi_MP
,
Bengali
,
Punjabi
,
Gujarati
,
Odia
,
Tamil
,
Telugu
,
Malayalam