ಆಹಾರ ಸಂಸ್ಕರಣಾ ಉದ್ದಿಮೆಗಳ ಸಚಿವಾಲಯ
azadi ka amrit mahotsav

ಕೇಂದ್ರ ಆಹಾರ ಸಂಸ್ಕರಣಾ ಉದ್ಯಮಗಳ ಸಚಿವರಾಗಿ ಅಧಿಕಾರ ವಹಿಸಿಕೊಂಡ ಶ್ರೀ ಚಿರಾಗ್ ಪಾಸ್ವಾನ್ 

प्रविष्टि तिथि: 11 JUN 2024 2:44PM by PIB Bengaluru

ನವದೆಹಲಿಯ ಪಂಚಶೀಲ್ ಭವನದಲ್ಲಿರುವ ಕೇಂದ್ರ ಆಹಾರ ಸಂಸ್ಕರಣಾ ಕೈಗಾರಿಕೆಗಳ ಸಚಿವರ ಕಚೇರಿಯಲ್ಲಿ ಶ್ರೀ ಚಿರಾಗ್ ಪಾಸ್ವಾನ್ ಅವರು ಸಚಿವರಾಗಿ ಇಂದು ಅಧಿಕಾರ ಸ್ವೀಕರಿಸಿದರು.

 

Image

 

ಕೇಂದ್ರ ಆಹಾರ ಸಂಸ್ಕರಣಾ ಕೈಗಾರಿಕಾ ಇಲಾಖೆಯ ಕಾರ್ಯದರ್ಶಿ ಶ್ರೀಮತಿ ಅನಿತಾ ಪ್ರವೀಣ್ ಹಾಗೂ ಹಿರಿಯ ಅಧಿಕಾರಿಗಳು ಸಚಿವರನ್ನು ಸ್ವಾಗತಿಸಿದರು. ಅಧಿಕಾರ ವಹಿಸಿಕೊಂಡ ನಂತರ ಶ್ರೀ ಚಿರಾಗ್ ಪಾಸ್ವಾನ್ ಅವರು ಸಚಿವಾಲಯದ ಹಿರಿಯ ಅಧಿಕಾರಿಗಳನ್ನು ಭೇಟಿ ಮಾಡಿ ಯೋಜನೆಗಳನ್ನು ಪರಿಶೀಲಿಸಿದರು. ಕೇಂದ್ರ ಆಹಾರ ಸಂಸ್ಕರಣಾ ಸಚಿವಾಲಯದ ಜವಾಬ್ದಾರಿಯನ್ನು ವಹಿಸಿದ್ದಕ್ಕಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಸಚಿವರು ಧನ್ಯವಾದ ಅರ್ಪಿಸಿದರು. ಸಚಿವಾಲಯದ ಕಾರ್ಯೋದ್ದೇಶಗಳನ್ನು ಮುಂದಕ್ಕೆ ಕೊಂಡೊಯ್ಯುವ ನಿಟ್ಟಿನಲ್ಲಿ  ಸಚಿವರು ತಮ್ಮ ಎಲ್ಲ ಪ್ರಯತ್ನಗಳನ್ನು ಮಾಡಲಿದ್ದಾರೆ ಎಂದು ಈ ಸಂದರ್ಭದಲ್ಲಿ ಹೇಳಿದರು. ಸಚಿವರಾಗಿ ಅಧಿಕಾರ ವಹಿಸಿಕೊಂಡ ನಂತರ, ಇಲಾಖೆಯಿಂದ ನಡೆಯುತ್ತಿರುವ ಎಲ್ಲಾ ಯೋಜನೆಗಳು ಮತ್ತು ಸಚಿವಾಲಯದ ಭವಿಷ್ಯದ ಯೋಜನೆಗಳ ಪರಿಶೀಲನಾ ಸಭೆಯ ಅಧ್ಯಕ್ಷತೆಯನ್ನು  ಶ್ರೀ ಪಾಸ್ವಾನ್ ಅವರು ವಹಿಸಿದರು ಮತ್ತು ಕೇಂದ್ರ ಸರ್ಕಾರದ 100 ದಿನಗಳ ಯೋಜನೆಯನ್ನು ಸಾಧಿಸುವ ನಿಟ್ಟಿನಲ್ಲಿ ಕೆಲಸ ಮಾಡಲು ಅಧಿಕಾರಿಗಳಿಗೆ ಸಚಿವರು ನಿರ್ದೇಶನ ನೀಡಿದರು. 
 
  


 

ಶ್ರೀ ಚಿರಾಗ್ ಪಾಸ್ವಾನ್ ಅವರು ಬಿಹಾರದ ಹಾಜಿಪುರದ ಸಂಸದರಾಗಿದ್ದಾರೆ.

*****


(रिलीज़ आईडी: 2024120) आगंतुक पटल : 116
इस विज्ञप्ति को इन भाषाओं में पढ़ें: English , Urdu , Marathi , हिन्दी , Hindi_MP , Gujarati , Tamil , Telugu , Malayalam