ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಕತಾರ್‌ನ ಅಮೀರ್ ಅವರಿಂದ ಅಭಿನಂದನಾ ದೂರವಾಣಿ ಕರೆ ಸ್ವೀಕರಿಸಿದ ಪ್ರಧಾನಮಂತ್ರಿ


ಅಮೀರ್‌ ಅವರ ಶುಭಾಶಯಗಳು ಮತ್ತು ಭಾರತದ ಜನರ ಪರವಾಗಿ ಅವರ ಸಕಾರಾತ್ಮಕ ಭಾವನೆಗಳಿಗಾಗಿ ಪ್ರಧಾನಮಂತ್ರಿಯವರು ಧನ್ಯವಾದ ಅರ್ಪಿಸಿದರು

ಉಭಯ ನಾಯಕರು ಭಾರತ-ಕತಾರ್ ಬಾಂಧವ್ಯವನ್ನು ಮತ್ತಷ್ಟು ಬಲಪಡಿಸುವ ಬದ್ಧತೆಯನ್ನು ಪುನರುಚ್ಚರಿಸಿದರು.

2024ರ ಫೆಬ್ರವರಿಯಲ್ಲಿ ತಾವು ಕತಾರ್‌ಗೆ ಭೇಟಿ ನೀಡಿದ್ದನ್ನು ಸ್ಮರಿಸಿದ ಪ್ರಧಾನಮಂತ್ರಿಯವರು, ಭಾರತಕ್ಕೆ ಭೇಟಿ ನೀಡುವಂತೆ ಕತಾರ್‌ನ ಅಮೀರ್ ಅವರಿಗೆ ನೀಡಿದ್ದ ಆಹ್ವಾನವನ್ನು ಪುನರುಚ್ಚರಿಸಿದರು.

ಘನತೆವೆತ್ತ ಅಮೀರ್‌ ಅವರಿಗೆ ಜನ್ಮದಿನದ ಶುಭಾಶಯಗಳ ಜೊತೆಗೆ ಈದ್ ಶುಭಾಶಯಗಳನ್ನು ತಿಳಿಸಿದ ಪ್ರಧಾನಿ

Posted On: 10 JUN 2024 9:24PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕತಾರ್‌ನ ಅಮೀರ್ ಘನತೆವೆತ್ತ ಶೇಖ್ ತಮೀಮ್ ಬಿನ್ ಹಮದ್ ಅಲ್ ಥಾನಿ ಅವರಿಂದ ಅಭಿನಂದನಾ ದೂರವಾಣಿ ಕರೆ ಸ್ವೀಕರಿಸಿದರು.

ಘನತೆವೆತ್ತ ಅಮೀರ್‌ ಅವರ ಹಾರ್ದಿಕ ಶುಭಾಶಯಗಳು ಮತ್ತು ಭಾರತದ ಜನತೆಯ ಬಗ್ಗೆ ಅವರು ತೋರಿದ ಸಕಾರಾತ್ಮಕ ಭಾವನೆಗಳಿಗಾಗಿ ಪ್ರಧಾನಮಂತ್ರಿಯವರು ಧನ್ಯವಾದ ಅರ್ಪಿಸಿದರು.

ಭಾರತ ಮತ್ತು ಕತಾರ್ ನಡುವಿನ ಸ್ನೇಹಪರ ಮತ್ತು ಬಹುಮುಖಿ ಸಂಬಂಧಗಳನ್ನು ಮತ್ತಷ್ಟು ಬಲಪಡಿಸುವ ಬದ್ಧತೆಯನ್ನು ಉಭಯ ನಾಯಕರು ಪುನರುಚ್ಚರಿಸಿದರು.
2024ರ ಫೆಬ್ರವರಿಯಲ್ಲಿ ತಾವು ಕತಾರ್‌ಗೆ ನೀಡಿದ್ದ ಫಲಪ್ರದ ಭೇಟಿಯನ್ನು ಸ್ಮರಿಸಿದ ಪ್ರಧಾನಮಂತ್ರಿಯವರು, ಆದಷ್ಟು ಬೇಗ ಭಾರತಕ್ಕೆ ಭೇಟಿ ನೀಡುವಂತೆ ಕತಾರ್‌ನ ಅಮೀರ್ ಅವರಿಗೆ ನೀಡಿದ್ದ ಆಹ್ವಾನವನ್ನು ಪುನರುಚ್ಚರಿಸಿದರು.

ಪ್ರಧಾನಮಂತ್ರಿಯವರು ಅಮೀರ್ ಅವರಿಗೆ ಜನ್ಮದಿನದ ಶುಭಾಶಯಗಳನ್ನು ತಿಳಿಸಿದರು ಜೊತೆಗೆ, ಮುಂಬರುವ ಈದ್ ಅಲ್ ಅಧಾ ಹಬ್ಬದ ಶುಭಾಶಯಗಳನ್ನು ತಿಳಿಸಿದರು.

*****


(Release ID: 2024205) Visitor Counter : 48